ರವಿಕುಮಾರ್‌ ವಿರುದ್ಧ ಗೌರ್ನರ್‌ಗೆ ದೂರಲು ''ಕೈ'' ಎಂಎಲ್ಸಿಗಳ ನಿರ್ಧಾರ

Published : May 29, 2025, 10:04 AM IST
N Ravikumar

ಸಾರಾಂಶ

ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನಮ್ ಅವರನ್ನು ಪಾಕಿಸ್ತಾನಿ ಎಂದಿರುವ ವಿಧಾನಪರಿಷತ್‌ ವಿರೋಧ ಪಕ್ಷದ ಮುಖ್ಯಸಚೇತಕ ಎನ್‌. ರವಿಕುಮಾರ್‌ ವಿರುದ್ಧ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಅವರಿಗೆ ದೂರು ನೀಡಲು ಕಾಂಗ್ರೆಸ್‌ ವಿಧಾನಪರಿಷತ್‌ ಸದಸ್ಯರು ನಿರ್ಧರಿಸಿದ್ದಾರೆ.

 ಬೆಂಗಳೂರು : ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನಮ್ ಅವರನ್ನು ಪಾಕಿಸ್ತಾನಿ ಎಂದಿರುವ ವಿಧಾನಪರಿಷತ್‌ ವಿರೋಧ ಪಕ್ಷದ ಮುಖ್ಯಸಚೇತಕ ಎನ್‌. ರವಿಕುಮಾರ್‌ ವಿರುದ್ಧ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಅವರಿಗೆ ದೂರು ನೀಡಲು ಕಾಂಗ್ರೆಸ್‌ ವಿಧಾನಪರಿಷತ್‌ ಸದಸ್ಯರು ನಿರ್ಧರಿಸಿದ್ದಾರೆ.

ವಿಧಾನಪರಿಷತ್‌ನ ಸರ್ಕಾರದ ಮುಖ್ಯಸಚೇತಕ ಸಲೀಂ ಅಹಮದ್‌ ನೇತೃತ್ವದಲ್ಲಿ ಗುರುವಾರ ರಾಜ್ಯಪಾಲರನ್ನು ಭೇಟಿ ಮಾಡಲಿರುವ ನಿಯೋಗವು ರವಿಕುಮಾರ್‌ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಲಿದೆ.

ಅಲ್ಲದೆ, ಸಭಾಪತಿ ಬಸವರಾಜ ಹೊರಟ್ಟಿ ಅವರಿಗೂ ಭೇಟಿ ಮಾಡಿ ಅವರಿಗೂ ರವಿಕುಮಾರ್‌ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲು ತೀರ್ಮಾನಿಸಿದ್ದಾರೆ.

ಬುಧವಾರ ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲ ಅವರು ಕಾಂಗ್ರೆಸ್‌ ವಿಧಾನಪರಿಷತ್‌ ಸದಸ್ಯರ ಜತೆ ಚರ್ಚೆ ನಡೆಸಿದರು.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಲೀಂ ಅಹಮದ್‌, ಬಿಜೆಪಿ ಪರಿಷತ್ ಸದಸ್ಯ ರವಿಕುಮಾರ್ ಹೇಳಿಕೆಯನ್ನು ಖಂಡಿಸುತ್ತೇವೆ. ಪ್ರಧಾನಿ ಮೋದಿ ಅವರು ''ಸಬ್ ಕಾ ಸಾಥ್ ಸಬ್ ಕಾ ವಿಕಾಸ್'' ಎನ್ನುತ್ತಾರೆ. ಅವರದ್ದೇ ಪಕ್ಷದವರು ಅಲ್ಪಸಂಖ್ಯಾತ ಸಮುದಾಯಕ್ಕೆ ಅವಮಾನ ಮಾಡುತ್ತಾರೆ. ಈ ಬಗ್ಗೆ ಗುರುವಾರ ಕಾಂಗ್ರೆಸ್‌ನ ಪರಿಷತ್ ಸದಸ್ಯರು ರಾಜ್ಯಪಾಲರನ್ನು ಭೇಟಿ ಮಾಡಿ ಕ್ರಮಕ್ಕೆ ಒತ್ತಾಯಿಸುತ್ತೇವೆ ಎಂದರು.

PREV
Read more Articles on

Recommended Stories

ಪಂಚಪೀಠ ನಿರ್ಣಯ ಒಪ್ಪಲ್ಲ, ರಂಭಾಪುರಿ ಶ್ರೀಗಳ ಮನಸ್ಥಿತಿ ಕಲುಷಿತ: ವಚನಾನಂದ ಶ್ರೀ
ನನ್ನ ಬಗ್ಗೆ ಮಾತನಾಡುವವರಿಗೆ ಸಿಗಂದೂರು ಚೌಡೇಶ್ವರಿ ತಕ್ಕ ಬುದ್ಧಿ ಕಲಿಸಲಿದ್ದಾಳೆ : ಮಧು ಬಂಗಾರಪ್ಪ