ಮಾರ್ಗಸೂಚಿ ಅನುಸರಿಸಿ ಆಕ್ಷೇಪಣೆ ರಹಿತ ವರ್ಗಾವಣೆಗೆ ಸಿಎಸ್‌ ಸೂಚನೆ

Published : May 26, 2025, 06:59 AM IST
Shalini Rajaneesh

ಸಾರಾಂಶ

ಇದೇ ಮೇ 12ರಂದು ಹೊರಡಿಸಿರುವ ಸರ್ಕಾರದ ವರ್ಗಾವಣೆ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿ ಹಾಗೂ ಪ್ರಮುಖ ಏಳು ಆಕ್ಷೇಪಣೆಗಳು ಉದ್ಭವಿಸದಂತೆ ಎಚ್ಚರ ವಹಿಸಿ ವರ್ಗಾವಣೆ ಆದೇಶ ಮಾಡುವಂತೆ ಎಲ್ಲ ಇಲಾಖೆಗಳ ಕಾರ್ಯದರ್ಶಿಗಳು/ಮುಖ್ಯಸ್ಥರಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಆದೇಶಿಸಿದ್ದಾರೆ.

ಬೆಂಗಳೂರು: ಇದೇ ಮೇ 12ರಂದು ಹೊರಡಿಸಿರುವ ಸರ್ಕಾರದ ವರ್ಗಾವಣೆ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿ ಹಾಗೂ ಪ್ರಮುಖ ಏಳು ಆಕ್ಷೇಪಣೆಗಳು ಉದ್ಭವಿಸದಂತೆ ಎಚ್ಚರ ವಹಿಸಿ ವರ್ಗಾವಣೆ ಆದೇಶ ಮಾಡುವಂತೆ ಎಲ್ಲ ಇಲಾಖೆಗಳ ಕಾರ್ಯದರ್ಶಿಗಳು/ಮುಖ್ಯಸ್ಥರಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಆದೇಶಿಸಿದ್ದಾರೆ.

ಈ ಹಿಂದಿನ ವರ್ಷಗಳ ವರ್ಗಾವಣೆ ಅವಧಿಯಲ್ಲಿ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ವರ್ಗಾವಣೆ ಆದೇಶಗಳನ್ನು ಹೊರಡಿಸಿದ್ದಲ್ಲಿ ಕರ್ನಾಟಕ ಆಡಳಿತ ನ್ಯಾಯಮಂಡಳಿಯಲ್ಲಿ ಬಹಳಷ್ಟು ಪ್ರಕರಣಗಳು ದಾಖಲಾಗಿರುವುದನ್ನು ಗಮನಿಸಲಾಗಿದೆ. ಆದ್ದರಿಂದ ಪ್ರತಿಯೊಂದು ಇಲಾಖಾ ಮುಖ್ಯಸ್ಥರು ತಮ್ಮ ಇಲಾಖೆಯಲ್ಲಿ ಯಾವುದೇ ವರ್ಗಾವಣೆ ಆದೇಶ ಹೊರಡಿಸುವ ಮೊದಲು ಕನಿಷ್ಠ ಅವಧಿ ಪೂರ್ಣಗೊಳಿಸಿರುವುದು, ಸಕಾರಣವಿಲ್ಲದೆ ವರ್ಗಾವಣೆ ಸೇರಿ ಏಳು ಆಕ್ಷೇಪಗಳು ಉದ್ಭವಿಸದಂತೆ ಎಚ್ಚರ ವಹಿಸಬೇಕು, ಮಾರ್ಗಸೂಚಿ ಅನುಸರಿಸಿ ವರ್ಗಾವಣೆ ಆದೇಶ ಮಾಡಲು ಸೂಚಿಸಿದ್ದಾರೆ.

ಏಳು ಆಕ್ಷೇಪಣೆ ಉದ್ಭವಿಸಬಾರದು:

ಕನಿಷ್ಠ ಸೇವಾ ಅವಧಿ ಪೂರ್ಣಗೊಳಿಸದೇ ಇರುವವರನ್ನು ವರ್ಗಾಯಿಸುವುದು. ಸಕಾರಣವಿಲ್ಲದೆ ನಿವೃತ್ತಿಗೆ ಎರಡು ವರ್ಷಕ್ಕಿಂತ ಕಡಿಮೆ ಸೇವಾವಧಿ ಇರುವವರ ವರ್ಗಾವಣೆ, ಅವಧಿ ಪೂರ್ವ ವರ್ಗಾವಣೆ ಮಾಡಬಾರದು. ವಿಶೇಷ ಚೇತನ ನೌಕರರ ವಿನಾಯಿತಿಗಳನ್ನು ಅನುಸರಿಸದೆ ವರ್ಗಾಯಿಸುವುದು. ವರ್ಗಾವಣೆ ಆದೇಶದಲ್ಲಿ ಹುದ್ದೆ ತೋರಿಸದಿರುವುದು, ಸಾಮಾನ್ಯ ವರ್ಗಾವಣೆ ಅವಧಿ ಮುಗಿದ ನಂತರ ಮುಖ್ಯಮಂತ್ರಿಗಳ ಅನುಮೋದನೆ ಪಡೆಯದೆ ವರ್ಗಾಯಿಸುವುದು ಮತ್ತು ಸರ್ಕಾರದ ಆದೇಶದಲ್ಲಿನ ಇನ್ನಿತರೆ ಮಾರ್ಗಸೂಚಿಗಳನ್ನು ಅನುಸರಿಸದೆ ವರ್ಗಾವಣೆ ಮಾಡುವುದು. ಈ ಸಂಬಂಧ ಯಾವುದೇ ಆಕ್ಷೇಪಣೆಗಳು ಉದ್ಭವಿಸದಂತೆ ನೋಡಿಕೊಳ್ಳಬೇಕೆಂದು ನಿರ್ದೇಶನ ನೀಡಿದ್ದಾರೆ. 

PREV
Read more Articles on

Recommended Stories

ಬೆಂಗಳೂರಿನ ಬಾರ್‌ಗಳಲ್ಲಿ ವೋಟ್‌ ಖರೀದಿ ಲೆಕ್ಕಾಚಾರ!!!
ಸಿಎಂಗೆ ಕಣ್ಣು ಪರೀಕ್ಷೆ ನಡೆಸಿ ಎರಡು ಕನ್ನಡಕ ಕೊಟ್ಟ ಶಾಸಕ ಶ್ರೀನಿವಾಸ್‌