ದಕ್ಷಿಣ ಕನ್ನಡ : ಅರುಣ್ ಪುತ್ತಿಲ ಸೇರಿ 36 ಜನ ಗಡಿಪಾರು

Published : Jun 03, 2025, 05:13 AM IST
Mangaluru

ಸಾರಾಂಶ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಉದ್ವಿಗ್ನತೆ ಬೆನ್ನಲ್ಲೇ ಇದೀಗ ಪೊಲೀಸರು ಹಿಂದೂ ಮುಖಂಡರು ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

  ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಉದ್ವಿಗ್ನತೆ ಬೆನ್ನಲ್ಲೇ ಇದೀಗ ಪೊಲೀಸರು ಹಿಂದೂ ಮುಖಂಡರು ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. 

ಈ ಹಿನ್ನೆಲೆಯಲ್ಲಿ ಪುತ್ತೂರಿನ ಬಿಜೆಪಿ ಮುಖಂಡ, ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಸೇರಿದಂತೆ 36 ಜನರ ವಿರುದ್ಧ ಪುತ್ತೂರು ಉಪವಿಭಾಗದ ದಂಡಾಧಿಕಾರಿ, ಸಹಾಯಕ ಆಯುಕ್ತರು ಗಡಿಪಾರು ನೋಟಿಸ್ ಜಾರಿ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರಗಿ ಜಿಲ್ಲೆಯ ಶಹಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಿ, ನೋಟಿಸ್​ ನೀಡಿದ್ದಾರೆ. ಈ ಸಂಬಂಧ ಜೂ.6ರಂದು ವಿಚಾರಣೆಗೆ ಹಾಜರಾಗಲು ಆದೇಶ ನೀಡಿದ್ದಾರೆ.

ಈ ಪ್ರಕರಣದಲ್ಲಿ ಸ್ವತಃ ಅಥವಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದು. ತಪ್ಪಿದಲ್ಲಿ ಪ್ರಕರಣದಲ್ಲಿ ನಿಮಗೆ ಆಸಕ್ತಿ ಇಲ್ಲವೆಂದು ಭಾವಿಸಿ, ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ಷೀಯವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ. ಆದರೆ, ಯಾವ ಕಾರಣಕ್ಕೆ ಗಡಿಪಾರು ನೋಟಿಸ್ ನೀಡಲಾಗಿದೆ ಎಂಬುದನ್ನು ನೋಟಿಸ್​​ನಲ್ಲಿ ಉಲ್ಲೇಖಿಸಿಲ್ಲ.

PREV
Read more Articles on

Recommended Stories

ಈರುಳ್ಳಿ, ಹೂ, ಪಚ್ಚ ಬಾಳೆ ಬೆಲೆ ಧರೆಗೆ!
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ