25 ದಿನ ವಿದೇಶ ಪ್ರವಾಸಕ್ಕೆ ಅನುಮತಿ ಕೋರಿ ದರ್ಶನ್‌ ಅರ್ಜಿ

Published : May 29, 2025, 07:17 AM IST
south actor darshan thoogudeepa renuka swamy murder case

ಸಾರಾಂಶ

‘ಡೆವಿಲ್‌’ ಚಿತ್ರದ ಚಿತ್ರೀಕರಣಕ್ಕೆ ವಿದೇಶಕ್ಕೆ ತೆರಳಲು ಜೂ.1ರಿಂದ 25ರವರೆಗೆ ವಿದೇಶಕ್ಕೆ ತೆರಳಲು ಅನುಮತಿ ನೀಡುವಂತೆ ಕೋರಿ ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿ ನಟ ದರ್ಶನ್‌ ಸಲ್ಲಿಸಿರುವ ಅರ್ಜಿ ಕುರಿತು ನಗರದ 64ನೇ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ ಮೇ 30ರಂದು ಆದೇಶ ನೀಡಲಿದೆ.

  ಬೆಂಗಳೂರು : ‘ಡೆವಿಲ್‌’ ಚಿತ್ರದ ಚಿತ್ರೀಕರಣಕ್ಕೆ ವಿದೇಶಕ್ಕೆ ತೆರಳಲು ಜೂ.1ರಿಂದ 25ರವರೆಗೆ ವಿದೇಶಕ್ಕೆ ತೆರಳಲು ಅನುಮತಿ ನೀಡುವಂತೆ ಕೋರಿ ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿ ನಟ ದರ್ಶನ್‌ ಸಲ್ಲಿಸಿರುವ ಅರ್ಜಿ ಕುರಿತು ನಗರದ 64ನೇ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ ಮೇ 30ರಂದು ಆದೇಶ ನೀಡಲಿದೆ.

ವಿದೇಶಕ್ಕೆ ತೆರಳಲು ಅನುಮತಿ ಕೋರಿ ದರ್ಶನ್‌ ಅಲ್ಲಿಸಿರುವ ಅರ್ಜಿ ಕುರಿತು ಬುಧವಾರ ವಾದ-ಪ್ರತಿವಾದ ಆಲಿಸಿ ವಿಚಾರಣೆ ಪೂರ್ಣಗೊಳಿದ ನ್ಯಾಯಾಲಯವು ತೀರ್ಪು ಕಾಯ್ದಿರಿಸಿದೆ.

ವಿಚಾರಣೆ ಸಂದರ್ಭದಲ್ಲಿ ದರ್ಶನ್‌ ಪರ ವಕೀಲ, ಪ್ರಕರಣ ಸಂಬಂಧ ಜಾಮೀನು ನೀಡಿರುವ ಸಂದರ್ಭದಲ್ಲಿ ಬೆಂಗಳೂರು ಬಿಟ್ಟು ಹೊರ ಹೋಗುವ ಪರಿಸ್ಥಿತಿಯಲ್ಲಿ ನ್ಯಾಯಾಲಯದ ಅನುಮತಿ ಪಡೆಯಬೇಕು ಎಂದು ಷರತ್ತು ವಿಧಿಸಲಾಗಿದೆ. ಅರ್ಜಿದಾರ ದರ್ಶನ್ ಚಿತ್ರನಟರಾಗಿದ್ದಾರೆ. ನಟನೆಯೇ ಅವರ ಆದಾಯದ ಮೂಲ. ದುಬೈ, ಯೂರೋಪ್‌ನಲ್ಲಿ ಅವರು ನಟಿಸುತ್ತಿರುವ ಚಿತ್ರದ ಚಿತ್ರೀಕರಣ ನಿಗದಿಯಾಗಿದೆ. ಅದರಂತೆ ಜೂ.1ರಿಂದ 25ರವರೆಗೆ ವಿದೇಶಕ್ಕೆ ತೆರಳಲು ಅನುಮತಿ ನೀಡಬೇಕು ಎಂದು ಕೋರಿದ್ದರು.

ಈ ಮನವಿಗೆ ಆಕ್ಷೇಪ ವ್ಯಕ್ತಪಡಿಸಿದ ಪೊಲೀಸರ ಪರ ವಿಶೇಷ ಸರ್ಕಾರಿ ಅಭಿಯೋಜಕರು, ಯಾವ ದೇಶಕ್ಕೆ ಹೋಗುತ್ತಾರೆ? ಎಲ್ಲಿ ಉಳಿಯುತ್ತಾರೆ ಎಂಬ ಬಗ್ಗೆ ಅರ್ಜಿದಾರ ಅರ್ಜಿಯಲ್ಲಿ ವಿವರಗಳನ್ನು ನೀಡಿಲ್ಲ. ಹಾಗಾಗಿ, ಅನುಮತಿ ನೀಡಬಾರದು ಎಂದು ಕೋರಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಅರ್ಜಿ ಕುರಿತು ಮೇ 30ರಂದು ಆದೇಶ ನೀಡುವುದಾಗಿ ತಿಳಿಸಿತು.

PREV
Read more Articles on

Recommended Stories

ಎಸ್ಸಿ ಒಳ ಮೀಸಲಿಗೆ 4 ಸಮುದಾಯ ಕಿಡಿ
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ