ಡಿಕೆಶಿ ನೇತ್ರದಾನ ರಾಹುಲ್ ಗಾಂಧಿ ಜನ್ಮದಿನ: ಡಿಸಿಎಂ ಶಿವಕುಮಾರ್‌ ನೇತ್ರದಾನ ಪತ್ರಕ್ಕೆ ಸಹಿ

Published : Jun 20, 2025, 07:18 AM ISTUpdated : Jun 20, 2025, 07:19 AM IST
DK Shivakumar

ಸಾರಾಂಶ

ಕಾಂಗ್ರೆಸ್‌ನ ರಾಷ್ಟ್ರೀಯ ಮುಖಂಡ ರಾಹುಲ್ ಗಾಂಧಿ ಅವರ ಜನ್ಮದಿನ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ನೇತ್ರದಾನ ಶಿಬಿರದಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನೇತ್ರದಾನ ಪತ್ರಕ್ಕೆ ಸಹಿ ಹಾಕಿದರು.

ಬೆಂಗಳೂರು : ಕಾಂಗ್ರೆಸ್‌ನ ರಾಷ್ಟ್ರೀಯ ಮುಖಂಡ ರಾಹುಲ್ ಗಾಂಧಿ ಅವರ ಜನ್ಮದಿನ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ನೇತ್ರದಾನ ಶಿಬಿರದಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನೇತ್ರದಾನ ಪತ್ರಕ್ಕೆ ಸಹಿ ಹಾಕಿದರು.

ಗುರುವಾರ ಯುವ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ನೇತ್ರದಾನ ಶಿಬಿರದಲ್ಲಿ ಭಾಗವಹಿಸಿದ ಡಿ.ಕೆ.ಶಿವಕುಮಾರ್‌ ತಮ್ಮ ನೇತ್ರದಾನ ಪತ್ರಕ್ಕೆ ಸಹಿ ಮಾಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಜನ್ಮದಿನ ಅಂಗವಾಗಿ ‘ಯುವ ಕಾಂಗ್ರೆಸ್’ ವತಿಯಿಂದ ನೇತ್ರದಾನ ಶಿಬಿರ ಹಮ್ಮಿಕೊಂಡಿದ್ದಾರೆ. ನನ್ನ ನೇತ್ರ ದಾನ ಮಾಡಿದ್ದೇನೆ ಒಪ್ಪಿಗೆ ಪತ್ರ ನೀಡಿದ್ದೇನೆ ಎಂದು ತಿಳಿಸಿದರು.

ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಮಂಜುನಾಥ್, ರಾಜ್ಯ ಯುವ ಕಾಂಗ್ರೆಸ್ ಉಸ್ತುವಾರಿ ನಿಗಮ್ ಭಂಡಾರಿ ಸೇರಿದಂತೆ ಯುವ ಕಾಂಗ್ರೆಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

PREV
Read more Articles on

Recommended Stories

ಪ್ರಧಾನಿ ಆಗಮನ ಹಿನ್ನೆಲೆಯಲ್ಲಿ 35 ಬೀದಿ ನಾಯಿಗಳ ಬಂಧನ
ಮೋದಿ ರಸ್ತೆ ಮಾರ್ಗದಲ್ಲಿ ಜನರಿಗೆ ದರ್ಶನ, ಮೆಟ್ರೋದಲ್ಲಿ ಸಂಚಾರ