ಕೆಪಿಎಸ್ಸಿ ಸಾಹುಕಾರ್‌ರಿಂದ 120 ಎಕರೆ ಭೂಮಿ ಖರೀದಿ?

Published : Jul 30, 2026, 07:08 AM IST
KPSC

ಸಾರಾಂಶ

ಕೆಪಿಎಸ್ಸಿ ಅಧ್ಯಕ್ಷ ಸ್ಥಾನದಿಂದ ಅಮಾನತುಗೊಂಡಿರುವ ಶಿವಶಂಕರಪ್ಪ ಸಾಹುಕಾರ್‌ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ಸಲ್ಲಿಕೆಯಾಗಿದೆ. ಆದಾಯಕ್ಕಿಂತ ಹೆಚ್ಚಿನ ಮೊತ್ತದ ಸ್ಥಿರಾಸ್ತಿಯನ್ನು ಶಿವಶಂಕರಪ್ಪ ಸಾಹುಕಾರ್ ಕುಟುಂಬ ಖರೀದಿಸಿದೆ.

 ಬೆಂಗಳೂರು :  ಕೆಪಿಎಸ್ಸಿ ಅಧ್ಯಕ್ಷ ಸ್ಥಾನದಿಂದ ಅಮಾನತುಗೊಂಡಿರುವ ಶಿವಶಂಕರಪ್ಪ ಸಾಹುಕಾರ್‌ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ಸಲ್ಲಿಕೆಯಾಗಿದೆ. ಆದಾಯಕ್ಕಿಂತ ಹೆಚ್ಚಿನ ಮೊತ್ತದ ಸ್ಥಿರಾಸ್ತಿಯನ್ನು ಶಿವಶಂಕರಪ್ಪ ಸಾಹುಕಾರ್ ಕುಟುಂಬ ಖರೀದಿಸಿದೆ. ಈ ಕುರಿತು ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಕೋರಿ ಸಾಮಾಜಿಕ ಕಾರ್ಯಕರ್ತ ಮರಿಲಿಂಗಗೌಡ ಮಾಲಿಪಾಟೀಲ್ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.

2023-24ರ ಅವಧಿಯಲ್ಲಿ ರಾಯಚೂರು ಮತ್ತು ಯಾದಗಿರಿ ಜಿಲ್ಲೆಯಲ್ಲಿ ಖರೀದಿ

2023-24ರ ಅವಧಿಯಲ್ಲಿ ರಾಯಚೂರು ಮತ್ತು ಯಾದಗಿರಿ ಜಿಲ್ಲೆಯಲ್ಲಿ 120 ಎಕರೆ ಕೃಷಿ ಹಾಗೂ ವಾಣಿಜ್ಯ ಭೂಮಿಯ ಖರೀದಿಯು ಸಾಹುಕಾರ್ ಕುಟುಂಬದಿಂದ ನಡೆದಿದೆ. ಶಿವಶಂಕರಪ್ಪ ಅವರ ಪತ್ನಿ ವಿಜಯಲಕ್ಷ್ಮೀ ಅವರ ಹೆಸರಿನಲ್ಲೂ ಜಮೀನು ಖರೀದಿ ಮಾಡಿರುವ ಸೇಲ್ ಡೀಡ್ ಪತ್ರಗಳನ್ನು ದೂರಿನೊಂದಿಗೆ ಲಗತ್ತಿಸಿ ಮರಿಲಿಂಗಗೌಡ ನೀಡಿದ್ದಾರೆ.

ಶಿವಶಂಕರಪ್ಪ ಅವರ ಆದಾಯಕ್ಕಿಂತ ಹೆಚ್ಚಿನ ಆಸ್ತಿ

ಶಿವಶಂಕರಪ್ಪ ಅವರ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಖರೀದಿ ಮೇಲುನೋಟಕ್ಕೆ ಕಂಡು ಬರುತ್ತಿದೆ. ಜೊತೆಗೆ, ಅವರ ಪತ್ನಿ ವಿಜಯಲಕ್ಷ್ಮೀ ಅವರ ಆದಾಯದ ಮೂಲ ಏನು ಎಂಬುದು ಗೊತ್ತಿಲ್ಲ. ಸಾರ್ವಜನಿಕರ ಹಿತ ಕಾಯುವ ಹುದ್ದೆಯಲ್ಲಿದ್ದ ಶಿವಶಂಕರಪ್ಪ ಸಾಹುಕಾರ್‌ ಅವರ ಆಸ್ತಿ ವಿವರಗಳು ಸಾರ್ವಜನಿಕರಿಗೆ ಗೊತ್ತಾಗಲೇಬೇಕು. ಹೀಗಾಗಿ ಕುರಿತು ತನಿಖೆ ನಡೆಸಿ ಕ್ರಮ ಕೈಗೊಳ್ಳಲು ಸಂಬಂಧಿಸಿದ ಇಲಾಖೆಗೆ ಸೂಚಿಸುವಂತೆ ಮರಿಲಿಂಗಗೌಡ ಮನವಿ ಮಾಡಿದ್ದಾರೆ.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ವೋಟರ್‌ ಲಿಸ್ಟ್‌ನಿಂದ 84 ಲಕ್ಷ ಮತದಾರರ ಹೆಸರಿಗೆ ಗೇಟ್‌ಪಾಸ್‌?
ಅವಧಿ ಮುಗಿದರೂ ಹುದ್ದೆ ಬಿಡ್ತಿಲ್ಲ ಸಹಕಾರ ಎಂಡಿ !