ದೀಪಾವಳಿ ಹಬ್ಬ : ಕೆಎಸ್ಸಾರ್ಟಿಸಿಯಿಂದ 2500 ಹೆಚ್ಚುವರಿ ಬಸ್‌

Published : Oct 14, 2025, 06:11 AM IST
KSRTC

ಸಾರಾಂಶ

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಬೇರೆ ಬೇರೆ ಊರಿಗೆ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗುವ ಕಾರಣ ಅ.17ರಿಂದ 20ರವರೆಗೆ ಕೆಎಸ್ಸಾರ್ಟಿಸಿಯಿಂದ 2,500 ಹೆಚ್ಚುವರಿ ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ.

 ಬೆಂಗಳೂರು :  ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಬೇರೆ ಬೇರೆ ಊರಿಗೆ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗುವ ಕಾರಣ ಅ.17ರಿಂದ 20ರವರೆಗೆ ಕೆಎಸ್ಸಾರ್ಟಿಸಿಯಿಂದ 2,500 ಹೆಚ್ಚುವರಿ ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ.

ಅ.20ರಂದು ನರಕ ಚತುರ್ದಶಿ ಮತ್ತು ಅ.22ರಂದು ಬಲಿಪಾಡ್ಯಮಿ ಹಬ್ಬವಿದೆ. ಅದರ ಜತೆಗೆ ಅ.18 ಮತ್ತು 19 ವಾರಾಂತ್ಯವಾಗಿದೆ. ಹೀಗಾಗಿ ಐದು ದಿನಗಳ ಸುದೀರ್ಘ ರಜೆ ಇರಲಿದೆ. ಈ ಕಾರಣದಿಂದ ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ಬೆಂಗಳೂರಿನಿಂದ ರಾಜ್ಯದ ವಿವಿಧ ಕಡೆ ಮತ್ತು ಹೊರರಾಜ್ಯಗಳ ವಿವಿಧ ನಗರಗಳಿಗೆ ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ. ಹೆಚ್ಚುವರಿ ಬಸ್‌ಗಳು ಮೆಜೆಸ್ಟಿಕ್‌ನ ಕೆಂಪೇಗೌಡ ಬಸ್‌ ನಿಲ್ದಾಣ, ಮೈಸೂರು ರಸ್ತೆ ಬಸ್‌ ನಿಲ್ದಾಣ ಹಾಗೂ ಶಾಂತಿನಗರ ಬಿಎಂಟಿಸಿ ಬಸ್‌ ನಿಲ್ದಾಣದಿಂದ ಕಾರ್ಯಾಚರಣೆಗೊಳ್ಳಲಿವೆ. ಈ ಹೆಚ್ಚುವರಿ ಬಸ್‌ಗಳು ವಿವಿಧ ನಗರಗಳಿಂದ ಬೆಂಗಳೂರಿಗೆ ಅ.22ಹಾಗೂ 26ರಂದು ಸೇವೆ ನೀಡಲಿವೆ.

ಬಸ್‌ಗಳ ಕಾರ್ಯಾಚರಣೆ ಕುರಿತು ಹೆಚ್ಚಿನ ಮಾಹಿತಿ ಹಾಗೂ ಮುಂಗಡ ಟಿಕೆಟ್‌ ಕಾಯ್ದಿರಿಸಲು ನಿಗಮದ ವೆಬ್‌ಸೈಟ್‌ www.ksrtc.karnataka.gov.in ಗೆ ಭೇಟಿ ನೀಡಬಹುದು ಎಂದು ಕೆಎಸ್ಸಾರ್ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

PREV
Read more Articles on

Recommended Stories

ಕಲಬುರಗಿ: ಬಿಜೆಪಿ ನಾಯಕರಿಂದ ‘ಐ ಲವ್‌ ಆರೆಎಸ್ಸೆಸ್‌’ ಅಭಿಯಾನ
ಧನ-ಧಾನ್ಯ ಕೃಷಿ ಯೋಜನೆಗೆ ಮೋದಿ ಚಾಲನೆ