ನಾಳೆ 3991 ಪೇದೆ ಹುದ್ದೆ ಭರ್ತಿಗೆ ಪರೀಕ್ಷೆ: 4.54 ಲಕ್ಷ ಅಭ್ಯರ್ಥಿಗಳಿಂದ ನೋಂದಣಿ

Published : Aug 01, 2026, 10:44 AM IST
Civil police exam aug 2 Karnataka CM Directs officials to conduct exams without any lapses

ಸಾರಾಂಶ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 3,991 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ಆ.2ರಂದು ರಾಜ್ಯದ 884 ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಸಲಿದೆ. ಪರೀಕ್ಷಗೆ ಬಿಗಿ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದು, ಒಟ್ಟು 4,54,532 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

 ಬೆಂಗಳೂರು :  ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 3,991 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ಆ.2ರಂದು ರಾಜ್ಯದ 884 ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಸಲಿದೆ. ಪರೀಕ್ಷಗೆ ಬಿಗಿ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದು, ಒಟ್ಟು 4,54,532 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಇದೇ ಮೊದಲ ಬಾರಿಗೆ ಓಎಂಆರ್ ಪ್ರತಿಗಳ ಸ್ಕ್ಯಾನಿಂಗ್ ಅನ್ನು ಬೆಂಗಳೂರು ಅಲ್ಲದೆ 6 ಕಡೆ ಮಾಡಲಾಗುತ್ತಿದೆ. ಪರೀಕ್ಷೆ ಮುಗಿದ ಕೂಡಲೇ ಕಲ್ಬುರ್ಗಿ, ಹುಬ್ಬಳ್ಳಿ, ಮೈಸೂರು, ದಾವಣಗೆರೆ, ವಿಜಯಪುರ, ರಾಯಚೂರು ನಗರಗಳಲ್ಲಿ ಓಎಂಆರ್ ಪ್ರತಿ ಸ್ಕ್ಯಾನ್ ಮಾಡಿ, ವೆಬ್ ಸೈಟ್ ಗೆ ಅಪ್ ಲೋಡ್ ಮಾಡಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ತಿಳಿಸಿದ್ದಾರೆ.

ತಪಾಸಣೆಗೆ ಒಳಗಾಗಬೇಕಾಗುತ್ತದೆ

ಪರೀಕ್ಷೆಗೆ ನಿರ್ಧಿಷ್ಟ ವಸ್ತ್ರ ಸಂಹಿತೆ ನಿಗದಿಪಡಿಸಲಾಗಿದೆ. ಒಂದು ವೇಳೆ ಯಾವುದಾದರೂ ಧಾರ್ಮಿಕ ಉಡುಪುಗಳನ್ನು ಧರಿಸಿಕೊಂಡು ಪರೀಕ್ಷೆ ಬರೆಯಲು ಇಚ್ಛಿಸುವವರು ಎರಡು ಗಂಟೆ ಮುಂಚೆಯೇ ಬಂದ ತಪಾಸಣೆಗೆ ಒಳಗಾಗಬೇಕಾಗುತ್ತದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ತಿಳಿಸಿದ್ದಾರೆ.

ಮುಖ ಚಹರೆ ಪತ್ತೆ ತಂತ್ರಜ್ಞಾನದ ಮೂಲಕವೇ ಅಭ್ಯರ್ಥಿಗಳನ್ನು ತಪಾಸಣೆ ಮಾಡಿ ಪರೀಕ್ಷಾ ಕೇಂದ್ರದೊಳಗೆ‌ ಬಿಡಲಾಗುತ್ತದೆ. ಪರೀಕ್ಷಾ ಕೇಂದ್ರ ಹಾಗೂ ಕೊಠಡಿಯಲ್ಲಿ ಸಿಸಿಟಿವಿ ಕಣ್ಗಾವಲು ಇರುತ್ತದೆ. ತಪಾಸಣೆ ಮತ್ತು ಸಿಸಿಟಿವಿ ಕಣ್ಗಾವಲಿನ ಜವಾಬ್ದಾರಿಯನ್ನು ಆಯಾ ಜಿಲ್ಲಾ ಪೊಲೀಸರು ನಿರ್ವಹಣೆ ಮಾಡಲಿದ್ದಾರೆ. ಮೊಬೈಲ್ ಸೇರಿದಂತೆ ಎಲೆಕ್ಟ್ರಾನಿಕ್ ಸಾಧನಗಳ‌ ಕಾರ್ಯನಿರ್ವಹಣೆಗೆ ನಿರ್ಬಂಧ ವಿಧಿಸಲು ಪರೀಕ್ಷಾ ಕೇಂದ್ರಗಳ ಸುತ್ತ ಜಾಮರ್ ಅಳವಡಿಸಲಾಗಿದೆ‌. ಮೊಬೈಲ್, ಕ್ಯಾಮರಾ, ಬ್ಲೂಟೂತ್ ಸೇರಿದಂತೆ ಇತರ ಎಲೆಕ್ಟ್ರಾನಿಕ್ ವಸ್ತುಗಳ ಬಳಕೆಗೆ ನಿಷೇಧ ಇದೆ. ಯಾವುದೇ ಕೈಗಡಿಯಾರ ಕೂಡ ಧರಿಸುವಂತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಸ್ತ್ರ ಸಂಹಿತೆ:

ಕಿವಿ, ತಲೆ ಮತ್ತು ಮುಖ ಮುಚ್ಚುವಂತಹ ಯಾವುದೇ ಉಡುಪುಗಳನ್ನು ಧರಿಸಿಕೊಂಡು ಬರುವಂತಿಲ್ಲ. ಉದ್ದ ತೋಳಿನ ಡ್ರೆಸ್ ಗೂ ನಿಷೇಧ ಇದೆ. ಮೂಗುತಿ, ಮಂಗಳ ಸೂತ್ರ ಹೊರತುಪಡಿಸಿ ಉಳಿದ ಯಾವುದೇ ಆಭರಣ/ಲೋಹದ ವಸ್ತುಗಳನ್ನು ಧರಿಸುವಂತಿಲ್ಲ. ಶೂ ಧರಿಸುವಂತಿಲ್ಲ. ಬದಲಿಗೆ ಚಪ್ಪಲಿ, ಕಡಿಮೆ ಹಿಮ್ಮಡಿ ಇರುವ ಸ್ಯಾಂಡಲ್ ಧರಿಸಬಹುದು ಎಂದು ಅವರು ವಿವರಿಸಿದ್ದಾರೆ.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ನಾಡಿದ್ದು ಸಂಪುಟ ವಿಸ್ತರಣೆ 99% ಗ್ಯಾರಂಟಿ : ಡಿಕೆಶಿ
ಪರಿಸ್ಥಿತಿ ತಿಳಿಯಾದ ಬಳಿಕ ಸಿಎಂ ವಿಜಯ್‌ ಜತೆ ಸಭೆ: ಶಿವಕುಮಾರ್