ಕೌಟುಂಬಿಕ ಕಲಹ : 3 ತಿಂಗಳ ಮಗು, ಪತ್ನಿ, ಮಗನನ್ನು ಕೊಂದ - ಕೊಲೆ ಬಗ್ಗೆ ಮನೆಯವರಿಗೆ ಕರೆ ಮಾಡಿ ಮಾಹಿತಿ

ಸಾರಾಂಶ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಲೆ ಮಾಡಿ ಬಳಿಕ ಡೆತ್‌ನೋಟ್‌ ಬರೆದಿಟ್ಟು ಜೆಸ್ಕಾಂ ಎಂಜಿನಿಯರ್‌ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಕಲಬುರಗಿ ನಗರದ ಅಪಾರ್ಟ್‌ಮೆಂಟ್‌ವೊಂದರಲ್ಲಿ ನಡೆದಿದೆ.

ಕಲಬುರಗಿ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಲೆ ಮಾಡಿ ಬಳಿಕ ಡೆತ್‌ನೋಟ್‌ ಬರೆದಿಟ್ಟು ಜೆಸ್ಕಾಂ ಎಂಜಿನಿಯರ್‌ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಕಲಬುರಗಿ ನಗರದ ಅಪಾರ್ಟ್‌ಮೆಂಟ್‌ವೊಂದರಲ್ಲಿ ನಡೆದಿದೆ.

ಸಂತೋಷ್ ಕೊರಳಿ (45), ಶೃತಿ (35), ಮಕ್ಕಳಾದ ಮುನಿಶ್ (9) ಹಾಗೂ 3 ತಿಂಗಳ ಮಗು ಅನಿಶ್ ಮೃತ ದುರ್ದೈವಿಗಳು. ಆತ್ಮಹತ್ಯೆ ಮಾಡಿಕೊಂಡ ಸಂತೋಷ ಕಲಬುರಗಿ ಜೆಸ್ಕಾಂನಲ್ಲಿ ಸಿನಿಯರ್ ಅಸಿಸ್ಟೆಂಟ್ ಎಂಜಿನಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಪತ್ನಿ ಹಾಗೂ ಮಕ್ಕಳಿಬ್ಬರನ್ನು ಕೊಂದು ಪತ್ನಿ ಮನೆಯವರಿಗೆ ಕರೆ ಮಾಡಿ ಘಟನೆಯ ಮಾಹಿತಿ ನೀಡಿದ್ದಾನೆ. ಬಳಿಕ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪತ್ನಿ ಮತ್ತು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಸಂತೋಷ್‌ 6 ಪುಟಗಳ ಡೆತ್ ನೋಟ್ ಬರೆದಿದ್ದು, ಅದರಲ್ಲಿ ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಉಲ್ಲೇಖಿಸಿದ್ದಾರೆ.

ಘಟನಾ ಸ್ಥಳಕ್ಕೆ ಕಲಬುರಗಿ ಪೊಲೀಸ್ ಕಮಿಷನರ್ ಎಸ್.ಡಿ.ಡಾ.ಶರಣಪ್ಪ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this article