ಪೋಪ್‌ ಫ್ರಾನ್ಸಿಸ್‌ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಜಾರ್ಜ್‌ ನಿಯೋಜನೆ

ಸಾರಾಂಶ

ಕ್ರೈಸ್ತರ ಧರ್ಮಗುರು ಪೋಪ್‌ ಫ್ರಾನ್ಸಿಸ್‌ ಅವರ ಅಂತ್ಯಕ್ರಿಯೆಯಲ್ಲಿ ರಾಜ್ಯ ಸರ್ಕಾರದ ಪರವಾಗಿ ಭಾಗವಹಿಸಲು ಇಂಧನ ಸಚಿವ ಕೆ.ಜೆ. ಜಾರ್ಜ್‌ ಹಾಗೂ ಪರಿಷತ್‌ ಸದಸ್ಯ ಐವಾನ್‌ ಡಿಸೋಜಾ ಅವರನ್ನು ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು: ಕ್ರೈಸ್ತರ ಧರ್ಮಗುರು ಪೋಪ್‌ ಫ್ರಾನ್ಸಿಸ್‌ ಅವರ ಅಂತ್ಯಕ್ರಿಯೆಯಲ್ಲಿ ರಾಜ್ಯ ಸರ್ಕಾರದ ಪರವಾಗಿ ಭಾಗವಹಿಸಲು ಇಂಧನ ಸಚಿವ ಕೆ.ಜೆ. ಜಾರ್ಜ್‌ ಹಾಗೂ ಪರಿಷತ್‌ ಸದಸ್ಯ ಐವಾನ್‌ ಡಿಸೋಜಾ ಅವರನ್ನು ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ. 

ಏ.21 ರಂದು ನಿಧನ ಹೊಂದಿದ್ದ ಪೋಪ್‌ ಫ್ರಾನ್ಸಿಸ್‌ ಅವರ ಅಂತ್ಯಕ್ರಿಯೆ ವ್ಯಾಟಿಕನ್‌ ನಗರದ ಪೀಟರ್‌ ಸ್ಕ್ವೇರ್‌ನಲ್ಲಿ ಏ.26 ರಂದು ನಡೆಯಲಿದೆ. ಈ ವೇಳೆ ಸರ್ಕಾರದ ಪರವಾಗಿ ಕೆ.ಜೆ. ಜಾರ್ಜ್‌, ಪರಿಷತ್‌ ಸದಸ್ಯ ಐವಾನ್‌ ಡಿಸೋಜಾ ಅವರು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಬೇಕು ಎಂದು ನಿಯೋಜನೆ ಮಾಡಿರುವುದಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ರಾಜ್ಯ ಶಿಷ್ಟಾಚಾರ ಇಲಾಖೆಯು ಆದೇಶ ಮಾಡಿದೆ.

Share this article