ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಪರಿಷ್ಕರಿಸಿ ಶೇ.1.50ರಷ್ಟು ಹೆಚ್ಚಿಸಿ ಸರ್ಕಾರ ಆದೇಶ ಮಾಡಿದೆ. ಇದರಿಂದ ಹಾಲಿ 10.75ರಷ್ಟಿದ್ದ ತುಟ್ಟಿಭತ್ಯೆ ಶೇ.12.25ಕ್ಕೆ ಏರಿಕೆಯಾಗಿದೆ. ಈ ಆದೇಶ 2025ರ ಜ.1ರಿಂದಲೇ ಪೂರ್ವಾನ್ವಯವಾಗಲಿದೆ.
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಪರಿಷ್ಕರಿಸಿ ಶೇ.1.50ರಷ್ಟು ಹೆಚ್ಚಿಸಿ ಸರ್ಕಾರ ಆದೇಶ ಮಾಡಿದೆ. ಇದರಿಂದ ಹಾಲಿ 10.75ರಷ್ಟಿದ್ದ ತುಟ್ಟಿಭತ್ಯೆ ಶೇ.12.25ಕ್ಕೆ ಏರಿಕೆಯಾಗಿದೆ. ಈ ಆದೇಶ 2025ರ ಜ.1ರಿಂದಲೇ ಪೂರ್ವಾನ್ವಯವಾಗಲಿದೆ.
ಸರ್ಕಾರದ ಈ ನಿರ್ಧಾರದಿಂದ ರಾಜ್ಯದ ಸುಮಾರು 5.20 ಲಕ್ಷ ಸರ್ಕಾರಿ ನೌಕರರು ಸೇರಿ ಲಕ್ಷಾಂತರ ನಿವೃತ್ತ ನೌಕರರಿಗೂ ಅನುಕೂಲವಾಗಲಿದೆ. 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಮೂಲ ವೇತನದ ಶೇ.10.75 ರಿಂದ ಶೇ.12.25ಕ್ಕೆ ಪರಿಷ್ಕರಿಸಿ ಮಂಜೂರು ಮಾಡಲಾಗಿದೆ. ಇದು ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರು, ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನನಾದರರು/ಕುಟುಂಬ ನಿವೃತ್ತಿ ವೇತನದಾರು, ಯುಇಸಿ/ಎಐಸಿಇಟಿ/ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ನೌಕರರುಗಳಿಗೂ ಈ ಆದೇಶ ಅನ್ವಯಿಸುತ್ತದೆ. ಸರ್ಕಾರದ ಮತ್ತು ಜಿಲ್ಲಾ ಪಂಚಾಯಿತಿಗಳ ಪೂರ್ವಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‌ಚಾರ್ಜ್ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರಿಗೂ ಇದು ಅನ್ವಯ.
ತುಟ್ಟಿಭತ್ಯೆ ಎಂದರೇನು?
ತುಟ್ಟಿ ಭತ್ಯೆ(ಡಿಎ) ಎಂಬುದು ಸರ್ಕಾರ ಹಾಲಿ ನೌಕರರು ಮತ್ತು ನಿವೃತ್ತ ನೌಕರರಿಗೆ ಒದಗಿಸುವ ಜೀವನ ವೆಚ್ಚ ಹೊಂದಾಣಿಕೆ ಭತ್ಯೆಯಾಗಿದೆ. ಸರ್ಕಾರಿ ನೌಕರರ ಮೂಲ ವೇತನದ ಶೇಕಡಾವಾರು ಪ್ರಮಾಣ ಬಳಸಿಕೊಂಡು ಇದನ್ನು ನಿರ್ಧರಿಸಲಾಗುತ್ತದೆ. ತುಟ್ಟಿಭತ್ಯೆ ಜೀವನ ವೆಚ್ಚಕ್ಕೆ ನೇರವಾಗಿ ಸಂಬಂಧಿಸಿರುವುದರಿಂದ, ಡಿಎ ಅಂಶ ವಿಭಿನ್ನ ಉದ್ಯೋಗಿಗಳಿಗೆ ಅವರ ಸ್ಥಳ ಆಧರಿಸಿ ವಿಭಿನ್ನವಾಗಿರುತ್ತದೆ. ನಗರ ವಲಯ, ಅರೆ - ನಗರ ವಲಯ ಅಥವಾ ಗ್ರಾಮೀಣ ವಲಯದ ಉದ್ಯೋಗಿಗಳಿಗೆ ಬೇರೆ ಬೇರೆಯಾಗಿರುತ್ತದೆ.
ಸರ್ಕಾರಕ್ಕೆ ಧನ್ಯವಾದ
ಸರ್ಕಾರ ಕಳೆದ ವರ್ಷ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ಜಾರಿ ಮಾಡಲಾಗಿತ್ತು. ಸದ್ಯ ಈ ವರ್ಷ ಶೇ.1.50 ತುಟ್ಟಿ ಭತ್ಯೆ ಹೆಚ್ಚಿಸಿದೆ. ಇದರಿಂದ ರಾಜ್ಯದ ಸುಮಾರು 5.20 ಲಕ್ಷ ಸರ್ಕಾರಿ ನೌಕರರು, ನಿಗಮ, ಮಂಡಳಿ, ಅನುದಾನಿತ ಸಂಸ್ಥೆಗಳ 3 ಲಕ್ಷ ಸಿಬ್ಬಂದಿ, 4.50 ಲಕ್ಷ ನಿವೃತ್ತ ನೌಕರರಿಗೆ ಇದು ಅನ್ವಯವಾಗಲಿದೆ. ಇದಕ್ಕಾಗಿ ಸಿಎಂ, ಡಿಸಿಎಂಗೆ ಧನ್ಯವಾದ.
- ಸಿ.ಎಸ್.ಷಡಾಕ್ಷರಿ, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ
ಸಿದ್ದರಾಮಯ್ಯ ಅವರಿಗೆ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಹಾಗೂ ರಾಜ್ಯ ಸರ್ಕಾರದ ಆರ್ಥಿಕ ಇಲಾಖೆ ಅಧಿಕಾರಿಗಳಿಗೆ ಸರ್ಕಾರ ತುಟ್ಟಿಭತ್ಯೆ ಪರಿಷ್ಕರಣೆ ಮಾಡಿದ್ದಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘ ರಾಜ್ಯ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ತುಟ್ಟಿಭತ್ಯೆ ಉದ್ದೇಶಕ್ಕಾಗಿ ಹಾಲಿ ನೌಕರರಿಗೆ ಮೂಲ ವೇತನ ಮತ್ತು ನಿವೃತ್ತ ನೌಕರರಿಗೆ ಮೂಲ ನಿವೃತ್ತಿ ವೇತನ ಹೊರತುಪಡಿಸಿ ಇತರೆ ಯಾವುದೇ ಉಪಲಬ್ಧಗಳನ್ನು ಸೇರಿಸುವಂತಿಲ್ಲ. ತುಟ್ಟಿಭತ್ಯೆ ಬಾಕಿ ಮೊತ್ತವನ್ನು ಮೇ ತಿಂಗಳ ವೇತನ ಪಾವತಿಗೂ ಮೊದಲೇ ನೀಡುವಂತಿಲ್ಲ ಎಂದು ಆರ್ಥಿಕ ಇಲಾಖೆ ತನ್ನ ಆದೇಶದಲ್ಲಿ ಸೂಚಿಸಿದೆ.