9 ಜಿಲ್ಲೆಯಲ್ಲಿ ಸರ್ಕಾರಿ ಕಚೇರಿ ಸಮಯ ಬದಲು - ಬೆಳಗ್ಗೆ 8ರಿಂದ ಮಧ್ಯಾಹ್ನ 1.30ರ ವರೆಗೆ ಕೆಲಸ

Published : Apr 03, 2025, 11:23 AM IST
Office

ಸಾರಾಂಶ

ಒಂಬತ್ತು ಜಿಲ್ಲೆಗಳಲ್ಲಿ ಏಪ್ರಿಲ್‌ ಹಾಗೂ ಮೇ ತಿಂಗಳಲ್ಲಿ ಸರ್ಕಾರಿ ಕಚೇರಿ ಕೆಲಸದ ವೇಳೆಯನ್ನು ಬೆಳಗ್ಗೆ 8 ರಿಂದ ಮಧ್ಯಾಹ್ನ 1.30 ಗಂಟೆಗೆ ಬದಲಿಸಿ ಸರ್ಕಾರ ಸುತ್ತೋಲೆ ಹೊರಡಿಸಿದೆ.

 ಬೆಂಗಳೂರು :  ತೀವ್ರ ತಾಪಮಾನ ಹಿನ್ನೆಲೆಯಲ್ಲಿ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆ, ಕಲಬುರಗಿ ವಿಭಾಗದ ಏಳೂ ಜಿಲ್ಲೆ ಸೇರಿ ಒಟ್ಟು ಒಂಬತ್ತು ಜಿಲ್ಲೆಗಳಲ್ಲಿ ಏಪ್ರಿಲ್‌ ಹಾಗೂ ಮೇ ತಿಂಗಳಲ್ಲಿ ಸರ್ಕಾರಿ ಕಚೇರಿ ಕೆಲಸದ ವೇಳೆಯನ್ನು ಬೆಳಗ್ಗೆ 8 ರಿಂದ ಮಧ್ಯಾಹ್ನ 1.30 ಗಂಟೆಗೆ ಬದಲಿಸಿ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರ ಮನವಿ ಮೇರೆಗೆ ಏ.2 ರಂದು ಸುತ್ತೋಲೆ ಹೊರಡಿಸಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಹೆಚ್ಚಿನ ಬಿಸಿಲಿನ ತಾಪಮಾನ ಇರುವ ಹಿನ್ನೆಲೆಯಲ್ಲಿ ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಬಳ್ಳಾರಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಹಾಗೂ ವಿಜಯನಗರ ಸೇರಿ ಎಲ್ಲಾ ಜಿಲ್ಲೆಗಳಲ್ಲಿ ಕಚೇರಿ ವಾಳಾಪಟ್ಟಿ ಬದಲು ಮಾಡಿರುವುದಾಗಿ ಸುತ್ತೋಲೆಯಲ್ಲಿ ತಿಳಿಸಿದೆ.

ಏಪ್ರಿಲ್‌ ಮತ್ತು ಮೇ ತಿಂಗಳಲ್ಲಿ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಕಚೇರಿ ಸಮಯ ಬದಲಾಯಿಸಲಾಗಿದೆ. ಈ ಜಿಲ್ಲೆಗಳಲ್ಲಿನ ಸರ್ಕಾರಿ ನೌಕರರು ಬದಲಾದ ಸಮಯದಲ್ಲಿ ತಮ್ಮ ಕರ್ತವ್ಯವನ್ನು ಎಂದಿನಂತೆ ಯಾವುದೇ ಲೋಪ, ಅಡೆ ತಡೆಯಿಲ್ಲದೆ ಕರ್ತವ್ಯ ನಿರ್ವಹಿಸಬೇಕು.

ಸಾರ್ವಜನಿಕರಿಗೆ ಯಾವುದೇ ರೀತಿ ಅನಾನುಕೂಲ ಆಗದಂತೆ ಎಚ್ಚರವಹಿಸಬೇಕು. ಜತೆಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ನ ಕಾರ್ಯನಿರ್ವಾಹಕ ಅಧಿಕಾರಿಗಳು ತುರ್ತು ಸಂದರ್ಭದಲ್ಲಿ ಯಾವುದೇ ಕಾರ್ಯವನ್ನು ನಿರ್ವಹಿಸಲು ನಿರ್ದೇಶಿಸಿದರೆ ಸಮಯದ ಪರಿಮಿತಿ ಇಲ್ಲದೆ ಕರ್ತವ್ಯ ನಿರ್ವಹಿಸಬೇಕು ಎಂದು ಸೂಚನೆ ನೀಡಲಾಗಿದೆ.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...