ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ

Published : May 16, 2025, 11:32 AM IST
Vidhan soudha

ಸಾರಾಂಶ

ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಅತಿಥಿ ಶಿಕ್ಷಕರು ಮತ್ತು ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರಿಗೊಂದು ಖುಷಿಯ ಸುದ್ದಿ

 ಬೆಂಗಳೂರು : ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಅತಿಥಿ ಶಿಕ್ಷಕರು ಮತ್ತು ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರಿಗೊಂದು ಖುಷಿಯ ಸುದ್ದಿ. ಅತಿಥಿ ಶಿಕ್ಷಕರು, ಉಪನ್ಯಾಸಕರ ಮಾಸಿಕ ಗೌರವಧನವನ್ನು ತಲಾ ₹2000 ಹೆಚ್ಚಿಸಿ ಸರ್ಕಾರ ಆದೇಶಿಸಿದೆ. ಇದು 2025-26ನೇ ಸಾಲಿನಲ್ಲಿ ನೇಮಕಗೊಳ್ಳುವ ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಅನ್ವಯಿಸಲಿದೆ.

2025ನೇ ಸಾಲಿನ ಬಜೆಟ್‌ನಲ್ಲಿ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವಧನವನ್ನು ₹2000 ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದರು. ಅದರಂತೆ ಈಗ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಗುರುವಾರ ಗೌರವಧನ ಹೆಚ್ಚಿಸಿ ಆದೇಶ ಮಾಡಿದೆ.

ಈ ಆದೇಶಾನುಸಾರ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಮಾಸಿಕ ಗೌರವಧನ ತಲಾ ₹2000 ಏರಿಕೆಯಾಗಲಿದೆ. ಇದರಿಂದ ಕಳೆದ ಸಾಲಿನಲ್ಲಿ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ ಇದ್ದ ಮಾಸಿಕ ಗೌರವಧನವನ್ನು ₹10 ಸಾವಿರದಿಂದ ₹12 ಸಾವಿರಕ್ಕೆ ಹೆಚ್ಚಳವಾಗಲಿದೆ. ಪ್ರೌಢ ಶಾಲಾ ಅತಿಥಿ ಶಿಕ್ಷಕರಿಗೆ ಈಗಿರುವ ₹10,500 ಗೌರವಧನ ₹12,500ಕ್ಕೆ ಏರಿಕೆಯಾಗಲಿದೆ. ಅದೇ ರೀತಿ ಸರ್ಕಾರಿ ಪಿಯು ಕಾಲೇಜು ಅತಿಥಿ ಉಪನ್ಯಾಸಕರಿಗೆ ಈವರೆಗೆ ₹12 ಸಾವಿರ ಗೌರವಧನ ನೀಡಲಾಗುತ್ತಿತ್ತು. ಇನ್ನು ಮುಂದೆ ಅದು ₹14 ಸಾವಿರಕ್ಕೆ ಏರಿಕೆಯಾಗಲಿದೆ.

ಈ ಹಿಂದೆ 2022ರ ಜೂನ್‌ನಲ್ಲಿ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವಧನ ಹೆಚ್ಚಿಸಲಾಗಿತ್ತು. ನಂತರ 2023ರಲ್ಲೂ ಗೌರವಧನ ಹೆಚ್ಚಿಸಲು ಶಿಕ್ಷಣ ಇಲಾಖೆ ಆಯುಕ್ತರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಆದರೆ, ಸರ್ಕಾರ ಪರಿಗಣಿಸಿರಲಿಲ್ಲ. ಇದೀಗ ಎರಡು ವರ್ಷಗಳ ಬಳಿಕ ಗೌರವಧನ ಹೆಚ್ಚಳ ಮಾಡಿದೆ.

PREV

Recommended Stories

ದಲಿತರಿಗೆ ದಿಲ್ಲಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ : ಜಾರಕಿಹೊಳಿ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ