ಬೆಂಗಳೂರಿನ ಅರ್ಧದಷ್ಟು ಕಸ ಮರುಬಳಕೆ: ಜಿಬಿಎ-ರಾಜ್ಯ ನಿರ್ವಹಣೆಯಲ್ಲಿ ಶೀಘ್ರ ಭಾರಿ ಬದಲಾವಣೆ

Published : Mar 10, 2026, 07:22 AM IST
Greater Bengaluru

ಸಾರಾಂಶ

ನಗರದ ಶೇ.45-50ರಷ್ಟು ತ್ಯಾಜ್ಯ ರಿಸೈಕ್ಲಿಂಗ್ ಆಗುತ್ತಿದೆ. ಮುಂದೆ ಇದನ್ನು ಇನ್ನಷ್ಟು ಹೆಚ್ಚಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ಹೇಳಿದ್ದಾರೆ.

  ಬೆಂಗಳೂರು :  ನಗರದ ಶೇ.45-50ರಷ್ಟು ತ್ಯಾಜ್ಯ ರಿಸೈಕ್ಲಿಂಗ್ ಆಗುತ್ತಿದೆ. ಮುಂದೆ ಇದನ್ನು ಇನ್ನಷ್ಟು ಹೆಚ್ಚಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ಹೇಳಿದ್ದಾರೆ.

ತ್ಯಾಜ್ಯವನ್ನು ವಿವಿಧ ರೀತಿಯಲ್ಲಿ ಮರುಬಳಕೆ ಸಮಸ್ಯೆಗೆ ಪರಿಹಾರ

ಸೋಮವಾರ ಟೌನ್‌ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತ್ಯಾಜ್ಯವನ್ನು ವಿವಿಧ ರೀತಿಯಲ್ಲಿ ಮರುಬಳಕೆ ಮಾಡುವ ಮೂಲಕ ತ್ಯಾಜ್ಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು. ಈ ಸಂಬಂಧ ಮುಂದಿನ 3–4 ವರ್ಷಗಳಲ್ಲಿ ತ್ಯಾಜ್ಯ ನಿರ್ವಹಣೆಯಲ್ಲಿ ಪರಿಣಾಮಕಾರಿ ಬದಲಾವಣೆಗಳನ್ನು ತರಲಾಗುವುದು ಎಂದರು.

ಹಸಿ ತ್ಯಾಜ್ಯವನ್ನು ಮೂಲದಲ್ಲಿಯೇ ಗೊಬ್ಬರವಾಗಿಸುವುದು,

ಹಸಿ ತ್ಯಾಜ್ಯವನ್ನು ಮೂಲದಲ್ಲಿಯೇ ಗೊಬ್ಬರವಾಗಿಸುವುದು, ಪ್ಲಾಸ್ಟಿಕ್ ಅನ್ನು ವಿದ್ಯುತ್ ಘಟಕಗಳಿಗೆ ಕಳುಹಿಸುವುದು, ಕಡಿಮೆ ಮೌಲ್ಯದ ಪ್ಲಾಸ್ಟಿಕ್ ಅನ್ನು ಸಿಮೆಂಟ್ ಕಾರ್ಖಾನೆಗಳಿಗೆ ಕಳುಹಿಸುವ ಮೂಲಕ ಇ.ಪಿ.ಆರ್ ಕ್ರೆಡಿಟ್ ಪಡೆಯಲಾಗುತ್ತಿದೆ. ಇದೇ ಮಾದರಿಯಲ್ಲಿ ವಿವಿಧ ಕಾರ್ಯಗಳಿಗೆ ತ್ಯಾಜ್ಯವನ್ನು ಪರಿಣಾಮಕಾರಿಯಾಗಿ ಮರುಬಳಕೆ ಮಾಡುವ ಮೂಲಕ ಲ್ಯಾಂಡ್‌ ಫಿಲ್‌ಗೆ ಕಳುಹಿಸುವ ಪ್ರಮಾಣವನ್ನು ಕ್ರಮೇಣ ಕಡಿಮೆ ಮಾಡಲು ಪ್ರಯತ್ನಗಳು ನಡೆದಿವೆ ಎಂದು ಆಯುಕ್ತರು ತಿಳಿಸಿದರು.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ಅಧಿಕಾರಿಗಳು ಜನರ ಸಮಸ್ಯೆಗಳನ್ನು ಅರಿತು ನಿವಾರಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮಂಗಳೂರಿನಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟಿಸಿದ್ದವಗೆ 10 ವರ್ಷಗಳ ಜೈಲು ಶಿಕ್ಷೆ