ಪ್ರತಿ ಜಿಲ್ಲೆಗೆ 20-25 ಎಲೆಕ್ಟ್ರಿಕ್ ಬಸ್‌ ಬಸ್‌ಗೆ ಚಿಂತನೆ: ಎಚ್‌ಡಿಕೆ

Published : Jun 08, 2025, 11:02 AM IST
Electric Bus

ಸಾರಾಂಶ

ಮುಂದಿನ ದಿನಗಳಲ್ಲಿ ಪ್ರತಿ ಜಿಲ್ಲೆಗೆ 20 ರಿಂದ 25 ಎಲೆಕ್ಟ್ರಿಕ್ ಬಸ್‌ಗಳನ್ನು ನೀಡುವ ಚಿಂತನೆಯನ್ನು ನಡೆಸಲಾಗಿದೆ. ಅವುಗಳನ್ನು ಶೀಘ್ರಗತಿಯಲ್ಲಿ ಒದಗಿಸುವ ಕೆಲಸ ಮಾಡುವುದಾಗಿ ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

  ಮಂಡ್ಯ : ಮುಂದಿನ ದಿನಗಳಲ್ಲಿ ಪ್ರತಿ ಜಿಲ್ಲೆಗೆ 20 ರಿಂದ 25 ಎಲೆಕ್ಟ್ರಿಕ್ ಬಸ್‌ಗಳನ್ನು ನೀಡುವ ಚಿಂತನೆಯನ್ನು ನಡೆಸಲಾಗಿದೆ. ಅವುಗಳನ್ನು ಶೀಘ್ರಗತಿಯಲ್ಲಿ ಒದಗಿಸುವ ಕೆಲಸ ಮಾಡುವುದಾಗಿ ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಶನಿವಾರ ಮಂಡ್ಯದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ದೇಶದಲ್ಲಿ ಕಾರ್ಬನ್ ಡೈ ಆಕ್ಸೈಡ್‌ ಅನ್ನು ಶೂನ್ಯಗೊಳಿಸುವ ಸಂಕಲ್ಪ ಮಾಡಿರುವ ಕೇಂದ್ರ ಸರ್ಕಾರ, ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಹೆಚ್ಚಿನ ಮಹತ್ವ ನೀಡಿದೆ. ರಾಜ್ಯಕ್ಕೆ 14 ಸಾವಿರ ಎಲೆಕ್ಟ್ರಿಕ್ ಬಸ್‌ಗಳನ್ನು ಕೊಟ್ಟಿದ್ದೇನೆ. ದೇಶದ ಇತರೆ ರಾಜ್ಯಗಳಿಗೆ 2 ಸಾವಿರ ಎಲೆಕ್ಟ್ರಿಕ್ ಬಸ್‌ಗಳನ್ನು ಒದಗಿಸಿದ್ದು, ಬೆಂಗಳೂರು ಒಂದಕ್ಕೇ 4500 ಎಲೆಕ್ಟ್ರಿಕ್ ಬಸ್‌ಗಳನ್ನು ನೀಡಿದ್ದೇನೆ ಎಂದು ತಿಳಿಸಿದರು.

ರಾಜ್ಯದಲ್ಲಿ ಕೈಗಾರಿಕೆಗಳನ್ನು ತರಬೇಕು. ನನ್ನ ಮೇಲೆ ಅಪಾರ ನಿರೀಕ್ಷೆ ಇಟ್ಟುಕೊಂಡಿರುವ ಮಂಡ್ಯ ಜಿಲ್ಲೆಯ ಜನರಿಗೆ ಉದ್ಯೋಗ ಸೃಷ್ಟಿಯಾಗುವಂತೆ ಕಾರ್ಖಾನೆಗಳನ್ನು ತರಬೇಕೆಂಬ ಹೆಬ್ಬಯಕೆ ನನ್ನದು. ಆದರೆ, ರಾಜ್ಯಸರ್ಕಾರ ಅದಕ್ಕೆ ಪೂರಕವಾಗಿ ಸಹಕಾರವನ್ನು ಕೊಡುತ್ತಿಲ್ಲ. ಬೃಹತ್ ಕೈಗಾರಿಕೆಗಳು, ದೊಡ್ಡ ದೊಡ್ಡ ಕಾರ್ಖಾನೆಗಳನ್ನು ಸ್ಥಾಪಿಸುವುದಕ್ಕೆ ರಾಜ್ಯ ಸರ್ಕಾರದ ಸಹಕಾರವೂ ಅಗತ್ಯ. ಆ ನಿಟ್ಟಿನಲ್ಲಿ ಸರ್ಕಾರದ ಸಹಕಾರವನ್ನು ಪಡೆಯುವುದಕ್ಕೆ ಪ್ರಯತ್ನಿಸುತ್ತಿದ್ದೇನೆ ಎಂದು ಹೇಳಿದರು.ಕಾವೇರಿ ಆರತಿಗೆ ₹100 ಕೋಟಿ ಯಾಕೆ ಬೇಕು? ನಮ್ಮ ಪುಟ್ಟರಾಜು ಕೆರೆತೊಣ್ಣೂರಿನಲ್ಲಿ ಇಂತಹ ಕಾರ್ಯಕ್ರಮ ಮಾಡಿದಾಗ ಎಷ್ಟು ಖರ್ಚಾಯಿತು ಎಂದು ಕೇಳಿ. ಇಷ್ಟೊಂದು ಬೃಹತ್ ಮೊತ್ತ ವೆಚ್ಚ ಮಾಡುವುದು ಏತಕ್ಕೆ? ₹100 ಕೋಟಿ ಖರ್ಚು ಮಾಡುವುದಕ್ಕೆ ನನ್ನ ವಿರೋಧವಿದೆ ಎಂದರು.

PREV
Read more Articles on

Recommended Stories

ತುಮಕೂರಲ್ಲಿ 20 ನವಿಲುಗಳ ಸಾವು
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ