ಸೈಕ್ಲೋನ್‌ : ಡಿ.1ರಿಂದ 10 ಜಿಲ್ಲೆಗಳಲ್ಲಿ ಭಾರಿ ಮಳೆ? ದಕ್ಷಿಣ ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್‌ ಅಲರ್ಟ್‌

Published : Nov 29, 2024, 11:19 AM IST
EV Monsoon Precautions

ಸಾರಾಂಶ

ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 10 ಜಿಲ್ಲೆಗಳಲ್ಲಿ ಡಿ.1ರಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 10 ಜಿಲ್ಲೆಗಳಲ್ಲಿ ಡಿ.1ರಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕುಗೊಂಡಿದ್ದು, ಅಲ್ಲಲ್ಲಿ ಮಳೆಯಾಗುತ್ತಿದೆ. ಡಿ.1ರಿಂದ ರಾಜ್ಯದ ಬಹುತೇಕ ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ.

ಡಿ.1ಕ್ಕೆ ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಹಾಸನ ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಎಚ್ಚರಿಕೆ ನೀಡಲಾಗಿದೆ. ಇನ್ನು ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್ ಘೋಷಿಸಲಾಗಿದೆ.

ಡಿ.2 ಮತ್ತು ಡಿ.3ಕ್ಕೆ ಕರಾವಳಿಯ ಮೂರು ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ನ ನೀಡಲಾಗಿದೆ. ಉಳಿದಂತೆ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿಯೂ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಒಟ್ಟಾರೆ ರಾಜ್ಯದಲ್ಲಿ ಡಿ.5ರವರೆಗೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.ರಾಜ್ಯದಲ್ಲಿ ದಿನದಿಂದ ದಿನಕ್ಕೆ ಚಳಿಯ ಪ್ರಮಾಣ ಹೆಚ್ಚಾಗುತ್ತಿದ್ದು, ವಿಜಯಪುರದಲ್ಲಿ ಅತಿ ಕಡಿಮೆ 11.5 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

PREV

Recommended Stories

ಸಹಕಾರ ಸಂಘದ ಸೌಲಭ್ಯಗಳನ್ನು ಸದ್ಬಳಸಿಕೊಳ್ಳಿ
ರೈತ ಕುಟುಂಬಗಳ ಆರ್ಥಿಕ ಸುಧಾರಣೆಗೆ ಕ್ರಮ: ಶರತ್‌