ಇಂದಿನಿಂದ 11 ಜಿಲ್ಲೆಗಳಲ್ಲಿ ಭಾರೀ ಮಳೆ? ರೆಡ್‌ ಅಲರ್ಟ್‌

Published : Jun 10, 2025, 10:48 AM IST
Bengaluru rain

ಸಾರಾಂಶ

ಕೆಲ ದಿನಗಳಿಂದ ಕ್ಷೀಣಿಸಿದ್ದ ಮುಂಗಾರು ಮಳೆ ಸೋಮವಾರದಿಂದ ರಾಜ್ಯಾದ್ಯಂತ ಆರಂಭವಾಗಿದೆ.

 ಬೆಂಗಳೂರು : ಕೆಲ ದಿನಗಳಿಂದ ಕ್ಷೀಣಿಸಿದ್ದ ಮುಂಗಾರು ಮಳೆ ಸೋಮವಾರದಿಂದ ರಾಜ್ಯಾದ್ಯಂತ ಆರಂಭವಾಗಿದೆ. ಮಂಗಳವಾರದಿಂದ ಮುಂದಿನ 7 ದಿನ ಕಾಲ ರಾಜ್ಯದ ಬಹುತೇಕ ಕಡೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಅದರಲ್ಲೂ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆ ಪ್ರಮಾಣ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಹಾಸನ ಸೇರಿ ಇನ್ನಿತರ ಜಿಲ್ಲೆಗಳಲ್ಲಿ ಮಂಗಳವಾರದಿಂದ ಜೂ.15ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗಲಿದೆ.

ಅದೇ ರೀತಿ ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೀದರ್‌, ಕಲಬುರಗಿ ಸೇರಿ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಮೈಸೂರು, ಬಳ್ಳಾರಿ, ಚಾಮರಾಜನಗರ ಸೇರಿ ಇನ್ನಿತರ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಸುರಿಯಲಿದೆ.

ರೆಡ್‌ ಅಲರ್ಟ್‌: ಬುಧವಾರ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಹಾವೇರಿ, ಕೊಪ್ಪಳ, ಗದಗ, ಧಾರವಾಡ, ರಾಯಚೂರು ಜಿಲ್ಲೆಗಳಿಗೆ ಆರೆಂಟ್‌ ಅಲರ್ಟ್‌ ಘೋಷಿಸಲಾಗಿದೆ.

PREV
Read more Articles on

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಬೆಂಗಳೂರು ನಗರದಲ್ಲಿ ಮತ್ತೆ ರಾರಾಜಿಸಲಿವೆ ಜಾಹೀರಾತು : ವಾರ್ಷಿಕ ₹ 6000 ಕೋಟಿ ನಿರೀಕ್ಷೆ