8-10 ಜಿಲ್ಲೆಗಳಲ್ಲಿ ಭಾರೀ ಮಳೆ - ಬೆಂಗಳೂರು ಸೇರಿ 17 ಜಿಲ್ಲೆಗೆ ಯೆಲ್ಲೋ ಅಲರ್ಟ್‌

Published : Jun 11, 2025, 09:29 AM IST
Bihar Rain Alert

ಸಾರಾಂಶ

ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕುಗೊಂಡಿದ್ದು, ಗುರುವಾರದಿಂದ ಮೂರ್ನಾಲ್ಕು ದಿನ 8 ರಿಂದ 10 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಲಕ್ಷಣಗಳಿರುವುದರಿಂದ ರೆಡ್‌ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ.

  ಬೆಂಗಳೂರು : ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕುಗೊಂಡಿದ್ದು, ಗುರುವಾರದಿಂದ ಮೂರ್ನಾಲ್ಕು ದಿನ 8 ರಿಂದ 10 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಲಕ್ಷಣಗಳಿರುವುದರಿಂದ ರೆಡ್‌ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ.

ಕಳೆದ ಎರಡು ದಿನಗಳಿಂದ ರಾಜ್ಯದ ವಿವಿಧ ಭಾಗದಲ್ಲಿ ಮಳೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬುಧವಾರ ಉತ್ತರ ಕನ್ನಡ, ಉಡುಪಿ, ಗದಗ, ರಾಯಚೂರು, ಕಲಬುರಗಿ, ಕೊಪ್ಪಳ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಎಚ್ಚರಿಕೆ ನೀಡಲಾಗಿದೆ.

ರೆಡ್‌ ಅಲರ್ಟ್‌:   ಗುರುವಾರದಿಂದ ಮೂರ್ನಾಲ್ಕು ದಿನಕ್ಕೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಳಗಾವಿ, ಧಾರಾವಾಡ ಹಾಗೂ ಹಾವೇರಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ನೀಡಲಾಗಿದೆ. ಜತೆಗೆ ಗದಗ, ಬೆಳಗಾವಿ, ಕೊಪ್ಪಳ, ರಾಯಚೂರು, ಬಳ್ಳಾರಿ, ದಾವಣಗೆರೆ, ವಿಜಯನಗರ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಧಾರಾವಾಡ, ಬಾಗಲಕೋಟೆ, ಕಲಬುರಗಿ, ವಿಜಯಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ರಾಯಮನಗರ ಹಾಗೂ ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ.

ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಿರುವ ಹವಾಮಾನ ವರದಿ ಪ್ರಕಾರ, ಚಿತ್ರದುರ್ಗದ ಪರಶರಾಮಪುರದಲ್ಲಿ ಅತಿ ಹೆಚ್ಚು 12 ಸೆಂ.ಮೀ. ಮಳೆಯಾಗಿದೆ. ಕುಂದಾಪುರ, ಕಕ್ಕೀರಿಯಲ್ಲಿ ತಲಾ 8, ಮಟ್ಟಿಕೊಪ್ಪ 6, ಸಿಂಧನೂರು, ಧಾರವಾಡ, ಬಳಗನೂರಿನಲ್ಲಿ ತಲಾ 5, ಕೋಟಾ, ಮಾಸ್ಕಿ, ಇಂಡಿ, ಔರಾದ್‌, ಮಂಠಾಳ, ನಿಪ್ಪಾಣಿ, ಹುಮನಾಬಾದ್‌, ಕೂಡಲಸಂಗಮ, ಆಗುಂಬೆ, ಭಾಗಮಂಡಲದಲ್ಲಿ ತಲಾ 4, ಹರಪನಹಳ್ಳಿ, ಮದ್ದೂರು, ಯಡ್ರಾಮಿ, ಕೆಂಭಾವಿ, ಮುನಿರಾಬಾದ್‌, ಮುಲ್ಕಿಯಲ್ಲಿ ತಲಾ 3, ಉಡುಪಿ, ಬರಗೂರು, ಶಹಪುರ, ಸಿಂದಗಿ, ಕನಕಪುರದಲ್ಲಿ ತಲಾ 2 ಸೆಂ.ಮೀ. ಮಳೆಯಾದ ವರದಿಯಾಗಿದೆ.

PREV
Read more Articles on

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಬೆಂಗಳೂರು ನಗರದಲ್ಲಿ ಮತ್ತೆ ರಾರಾಜಿಸಲಿವೆ ಜಾಹೀರಾತು : ವಾರ್ಷಿಕ ₹ 6000 ಕೋಟಿ ನಿರೀಕ್ಷೆ