11ರಿಂದ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ

Published : Jun 07, 2025, 10:00 AM IST
Weather Alert India

ಸಾರಾಂಶ

ರಾಜ್ಯದಲ್ಲಿ ಕ್ಷೀಣಿಸಿರುವ ಮುಂಗಾರು ಜೂ.11 ರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು : ರಾಜ್ಯದಲ್ಲಿ ಕ್ಷೀಣಿಸಿರುವ ಮುಂಗಾರು ಜೂ.11 ರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಿಗದಿತ ಅವಧಿಗಿಂತ ಮೊದಲೇ ಕಾಲಿಟ್ಟು ಮುಂಗಾರು ಆರಂಭದಲ್ಲಿ ಭಾರೀ ಮಳೆ ಸುರಿಸುವ ಮುನ್ಸೂಚನೆ ನೀಡಿತ್ತು. ಆದರೆ ಒಂದೇ ವಾರದಲ್ಲಿ ಕ್ಷೀಣಿಸಿದ್ದು, ರೈತರಲ್ಲಿ ಆತಂಕ ಮೂಡಿಸಿದೆ. ಇದೀಗ ಸೋಮವಾರದಿಂದ ಮತ್ತೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಜೂ.11 ರಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜೂ.11ಕ್ಕೆ ಬಳ್ಳಾರಿ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಎಚ್ಚರಿಕೆ ನೀಡಲಾಗಿದೆ. ಜೂ.12ಕ್ಕೆ ವಿಜಯನಗರ, ಕೊಡಗು, ದಾವಣಗೆರೆ, ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯಪುರ, ಕಲಬುರಗಿ, ಬೆಳಗಾವಿ, ಬಾಗಲಕೋಟೆ ಹಾಗೂ ಕರಾವಳಿ ಜಿಲ್ಲೆಯ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ನ ಮುನ್ಸೂಚನೆ ನೀಡಲಾಗಿದೆ.

ಮೊದಲ ವಾರ ಶೇ.39 ಮುಂಗಾರು ಕೊರತೆ:  ಮೇ ತಿಂಗಳಲ್ಲಿ ದಾಖಲೆ ಮಳೆಯಾದರೆ ಮುಂಗಾರು ಆರಂಭದ ಜೂನ್‌ ಮೊದಲ ವಾರವೇ ಮಳೆ ಕೊರತೆ ಕಾಣಿಸಿಕೊಂಡಿದೆ. ಜೂ.1 ರಿಂದ 4 ವರೆಗಿನ ಅವಧಿಯಲ್ಲಿ ರಾಜ್ಯದಲ್ಲಿ 18.9 ಮಿ.ಮೀ. ನಷ್ಟು ವಾಡಿಕೆ ಮಳೆಯಾಗಬೇಕು. ಆದರೆ 11.6 ಮಿ.ಮೀ. ಅಷ್ಟೇ ಮಳೆಯಾಗಿದೆ. ಈ ಮೂಲಕ ಶೇ.39ರಷ್ಟು ಮಳೆ ಕೊರತೆ ಉಂಟಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

PREV
Read more Articles on

Recommended Stories

ತುಮಕೂರಲ್ಲಿ 20 ನವಿಲುಗಳ ಸಾವು
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ