ಮಂತ್ರಿಗಿರಿ ಲಾಬಿಗೆ ಅವಕಾಶ ಕೊಡಬೇಡಿ : ಡಿಕೆಗೆ ವರಿಷ್ಠರು

Published : Jun 25, 2026, 07:11 AM IST
DK Shivakumar

ಸಾರಾಂಶ

‘ಸಚಿವ ಸಂಪುಟದಲ್ಲಿ ಸ್ಥಾನ ಪಡೆಯಲು ಆಕಾಂಕ್ಷಿ ಶಾಸಕರು ಲಾಬಿ ನಡೆಸಲು ಯಾವುದೇ ಕಾರಣಕ್ಕೂ ಅವಕಾಶ ನೀಡಬೇಡಿ. ಬೆಂಬಲಿಗರ ಪ್ರತಿಭಟನೆ, ಆಗ್ರಹ ಸೇರಿ ಒತ್ತಡದ ಯತ್ನಗಳಿಗೆ ಕಡಿವಾಣ ಹಾಕಿ’ ಎಂದು ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಸೂಚನೆ

 ಬೆಂಗಳೂರು :  ‘ಸಚಿವ ಸಂಪುಟದಲ್ಲಿ ಸ್ಥಾನ ಪಡೆಯಲು ಆಕಾಂಕ್ಷಿ ಶಾಸಕರು ಲಾಬಿ ನಡೆಸಲು ಯಾವುದೇ ಕಾರಣಕ್ಕೂ ಅವಕಾಶ ನೀಡಬೇಡಿ. ಬೆಂಬಲಿಗರ ಪ್ರತಿಭಟನೆ, ಆಗ್ರಹ ಸೇರಿ ಒತ್ತಡದ ಯತ್ನಗಳಿಗೆ ಕಡಿವಾಣ ಹಾಕಿ’ ಎಂದು ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಸೂಚನೆ ನೀಡಿರುವುದಾಗಿ ತಿಳಿದುಬಂದಿದೆ.

ಲಿ ಇರುವ ಸಚಿವ ಸ್ಥಾನ ಪಡೆಯಲು ಆಕಾಂಕ್ಷಿ ಶಾಸಕರಿಂದ ಒತ್ತಡ

ಸಂಪುಟದಲ್ಲಿ ಖಾಲಿ ಇರುವ ಸಚಿವ ಸ್ಥಾನ ಪಡೆಯಲು ಆಕಾಂಕ್ಷಿ ಶಾಸಕರಿಂದ ಒತ್ತಡ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೈಕಮಾಂಡ್‌ ಹಿರಿಯ ನಾಯಕರು ಶಿವಕುಮಾರ್ ಅವರಿಗೆ ಕರೆ ಮಾಡಿ ಚರ್ಚಿಸಿದ್ದಾರೆ ಎನ್ನಲಾಗಿದೆ.

ಸಚಿವ ಸ್ಥಾನದ ಆಕಾಂಕ್ಷಿ ಶಾಸಕರ ಬೆಂಬಲಿಗರು ಧರಣಿ

ಕಳೆದ ಕೆಲ ದಿನಗಳಿಂದ ಸಚಿವ ಸ್ಥಾನದ ಆಕಾಂಕ್ಷಿ ಶಾಸಕರ ಬೆಂಬಲಿಗರು ಧರಣಿ, ಹೋರಾಟಗಳನ್ನು ನಡೆಸುತ್ತಿದ್ದಾರೆ. ಇದು ಪಕ್ಷಕ್ಕೆ ತೀವ್ರ ಮುಜುಗರ ಸೃಷ್ಟಿಸುತ್ತಿದೆ. ಹೀಗಾಗಿ ಸಚಿವ ಸ್ಥಾನದ ಆಕಾಂಕ್ಷಿಗಳು, ತಮ್ಮ ಬೆಂಬಲಿಗರೊಂದಿಗೆ ಯಾವುದೇ ಮುಖಂಡರ ಭೇಟಿಗೆ ಅವಕಾಶ ನೀಡಬೇಡಿ ಎಂದು ತಿಳಿಸಿದೆ ಎನ್ನಲಾಗಿದೆ.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ಜು.1ರಿಂದ ರಾಜ್ಯದಲ್ಲಿ ಜಿ ರಾಮ್‌ ಜಿ
ಎಲ್ಲ ಪ್ರಾಣಿಗಳಿಗೂ ಹಿಂಸೆಯಿಲ್ಲದೇ ಬದುಕುವ ಹಕ್ಕು ಹೊಂದಿವೆ : ಕೋರ್ಟ್‌