ಬೆಂಗಳೂರಿನ ನಗರದ ಸ್ಯಾಂಕಿ ಕೆರೆಯ ಬಫರ್‌ ವಲಯದಲ್ಲಿ ಕಾವೇರಿ ಆರತಿಗೆ ಹೈಕೋರ್ಟ್ ಅನುಮತಿ

Published : Mar 21, 2025, 08:09 AM IST
lake

ಸಾರಾಂಶ

ಬೆಂಗಳೂರಿನ ನಗರದ ಸ್ಯಾಂಕಿ ಕೆರೆಯ ಬಫರ್‌ ವಲಯದಲ್ಲಿ ಕಾವೇರಿ ಆರತಿ ಕಾರ್ಯಕ್ರಮ ಆಯೋಜಿಸಲು ಬೆಂಗಳೂರು ಜಲಮಂಡಳಿಗೆ ಹೈಕೋರ್ಟ್ ಅನುಮತಿ ನೀಡಿದೆ.

  ಬೆಂಗಳೂರು : ಬೆಂಗಳೂರಿನ ನಗರದ ಸ್ಯಾಂಕಿ ಕೆರೆಯ ಬಫರ್‌ ವಲಯದಲ್ಲಿ ಕಾವೇರಿ ಆರತಿ ಕಾರ್ಯಕ್ರಮ ಆಯೋಜಿಸಲು ಬೆಂಗಳೂರು ಜಲಮಂಡಳಿಗೆ ಹೈಕೋರ್ಟ್ ಅನುಮತಿ ನೀಡಿದೆ.

ಕಾವೇರಿ ಆರತಿ ಕಾರ್ಯಕ್ರಮ ಆಕ್ಷೇಪಿಸಿ ವಕೀಲೆ ಗೀತಾ ಮಿಶ್ರಾ ಎಂಬುವರು ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿತು. ಅಲ್ಲದೆ, ಕೆರೆಗಳ ಸಂರಕ್ಷಣೆಗೆ ಸಂಬಂಧಿಸಿದ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ಕಾಯ್ದೆಯ ನಿಯಮಗಳು ಉಲ್ಲಂಘನೆಯಾಗದಂತೆ ಕಾವೇರಿ ಆರತಿ ಕಾರ್ಯಕ್ರಮ ನಡೆಸಬೇಕು. ಈ ಕಾನೂನು ಮತ್ತು ಸಾರ್ವಜನಿಕ ಸುವ್ಯವಸ್ಥೆ ಕಾಪಾಡಬೇಕು. ಯಾವುದೇ ರೀತಿಯ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂದು ಸರ್ಕಾರ ಮತ್ತು ಜಲಮಂಡಳಿಗೆ ನಿರ್ದೇಶಿಸಿದೆ.

ನೀರಿನ ಸಂರಕ್ಷಣೆ, ಬೆಂಗಳೂರು ನಗರದ ದಾಹ ತೀರಿಸುವ ಕಾವೇರಿ ಮಾತೆಗೆ ನಮನ ಸಲ್ಲಿಸುವ, ನೀರಿನ ಉಳಿತಾಯ, ಜಲಮೂಲಗಳ ಸಂರಕ್ಷಣೆಯ ಜನಜಾಗೃತಿಯ ಅಭಿಯಾನದ ಉದ್ದೇಶದಿಂದ ಮಾ.21ಕ್ಕೆ ಸ್ಯಾಂಕಿ ಕೆರೆ ಆವರಣದಲ್ಲಿ ಕಾವೇರಿ ಆರತಿ ಎಂಬ ಕಾರ್ಯಕ್ರಮವನ್ನು ಬೆಂಗಳೂರು ಜಲಮಂಡಳಿ ಆಯೋಜಿಸಿದೆ. ಸಾವಿರಾರು ಸಂಖ್ಯೆ ಜನರು ಸೇರುವುದರಿಂದ ಕೆರೆಯ ಜೀವ ವೈವಿಧ್ಯಕ್ಕೆ ತೊಂದರೆ ಉಂಟಾಗುವ ಕಾರಣಕ್ಕೆ ಕಾರ್ಯಕ್ರಮ ಆಯೋಜನೆಗೆ ಅವಕಾಶ ನೀಡಬಾರದು ಎನ್ನುವುದು ಅರ್ಜಿದಾರರ ಆಕ್ಷೇಪವಾಗಿತ್ತು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...