ತಂದೆ, ತಾಯಿಗೆ ನಾನು ಒಳ್ಳೆ ಮಗ ಆಗಲಿಲ್ಲ, ಈಗ ಹೆಸರು ಗಳಿಸಲೂ ಆಗುತ್ತಿಲ್ಲ: ನಲಪಾಡ್‌

Published : Apr 22, 2026, 05:59 AM IST
nalapad case

ಸಾರಾಂಶ

‘ನಾನಂತೂ ನಮ್ಮ ಅಪ್ಪ, ಅಮ್ಮನಿಗೆ ಒಳ್ಳೆಯ ಮಗನಾಗಲಿಲ್ಲ. ಎಲ್ಲ ರೀತಿಯಲ್ಲೂ ನನ್ನಿಂದ ನನ್ನ ತಂದೆ, ತಾಯಿಗೆ ಕೆಟ್ಟದ್ದೇ ಆಗಿದೆ. ಈಗ ಹಂತ ಹಂತವಾಗಿ ಒಳ್ಳೆಯ ಹೆಸರು ತೆಗೆದುಕೊಳ್ಳಲು ಪ್ರಯತ್ನಿಸಿದರೂ ಆಗುತ್ತಿಲ್ಲ. ನಮ್ಮಪ್ಪ ಎನ್‌.ಎ.ಹ್ಯಾರಿಸ್‌ ಅವರು ಸಚಿವರಾಗುವುದನ್ನು ತಪ್ಪಿಸಲು ಇ.ಡಿ. ದಾಳಿ ನಡೆದಿದೆ

  ಬೆಂಗಳೂರು :  ‘ನಾನಂತೂ ನಮ್ಮ ಅಪ್ಪ, ಅಮ್ಮನಿಗೆ ಒಳ್ಳೆಯ ಮಗನಾಗಲಿಲ್ಲ. ಎಲ್ಲ ರೀತಿಯಲ್ಲೂ ನನ್ನಿಂದ ನನ್ನ ತಂದೆ, ತಾಯಿಗೆ ಕೆಟ್ಟದ್ದೇ ಆಗಿದೆ. ಈಗ ಹಂತ ಹಂತವಾಗಿ ಒಳ್ಳೆಯ ಹೆಸರು ತೆಗೆದುಕೊಳ್ಳಲು ಪ್ರಯತ್ನಿಸಿದರೂ ಆಗುತ್ತಿಲ್ಲ. ನಮ್ಮಪ್ಪ ಎನ್‌.ಎ.ಹ್ಯಾರಿಸ್‌ ಅವರು ಸಚಿವರಾಗುವುದನ್ನು ತಪ್ಪಿಸಲು ಇ.ಡಿ.(ಜಾರಿ ನಿರ್ದೇಶನಾಲಯ) ದಾಳಿ ನಡೆದಿದೆ. ಇದಕ್ಕೆ ನಾನು ನೆಪವಾಗಿದ್ದೇನೆ ಎಂದು ಯುವ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಮೊಹಮ್ಮದ್ ನಲಪಾಡ್ ಹೇಳಿದ್ದಾರೆ.

ಇ.ಡಿ. ದಾಳಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ‘ಇದು ನೂರಕ್ಕೆ ನೂರರಷ್ಟು ರಾಜಕೀಯ ಪ್ರೇರಿತ ದಾಳಿ. ನಮ್ಮ ತಂದೆಯವರಿಗೆ ಸಚಿವ ಸ್ಥಾನ ತಪ್ಪಿಸಲು ಯಾರೋ ಷಡ್ಯಂತ್ರ ಮಾಡಿದ್ದಾರೆ. ಇದನ್ನು ನಾವು ಕೋರ್ಟ್‌ನಲ್ಲಿ ಎದುರಿಸುತ್ತೇವೆ. ಸತ್ಯಮೇವ ಜಯತೆ’ ಎಂದು ಹೇಳಿದರು.

ನಾನು ಹಾಗೂ ನನ್ನ ತಮ್ಮ ಎನ್‌.ಎ.ಹ್ಯಾರಿಸ್‌ ಅವರ ಮಕ್ಕಳು. ನಾವು ಈ ಮನೆಯಲ್ಲಿದ್ದೇವೆ ಎಂಬ ಕಾರಣಕ್ಕೆ ಇ.ಡಿ.ಯವರು ಈ ಮನೆಗೆ ಬಂದಿದ್ದಾರೆ ಅಷ್ಟೇ ಹೊರತು ಹ್ಯಾರಿಸ್‌ ಅವರಿಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.

ನಮ್ಮ ತಂದೆ ಮನೆಯಿಂದ ಹೊರ ಹಾಕುತ್ತಾರೆ:

2021ರ ಪ್ರಕರಣದಲ್ಲಿ ಆರು ವರ್ಷಗಳ ಬಳಿಕ ನಮ್ಮ ಮನೆ ಮೇಲೆ ರೇಡ್ ಮಾಡಿದ್ದಾರೆ. ಇದೇ ರೀತಿ ಆಗುತ್ತಿದ್ದರೆ ನಮ್ಮ ತಂದೆಯವರು ನಮ್ಮನ್ನು ಮನೆಯಿಂದ ಹೊರಗೆ ಹಾಕುತ್ತಾರೆ ಎಂದು ಭಾವುಕರಾದರು.

ಇ.ಡಿ. ದಾಳಿಯಲ್ಲಿ 37 ಲಕ್ಷ ರು. ಹಣ ಸಿಕ್ಕಿಲ್ಲ. ಕೇವಲ 2 ಮೊಬೈಲ್ ತೆಗೆದುಕೊಂಡು ಹೋಗಿದ್ದಾರೆ. ಒಂದೇ ಒಂದು ರುಪಾಯಿಯೂ ಸಿಕ್ಕಿಲ್ಲ. ಮಾಧ್ಯಮಗಳು ಈ ಬಗ್ಗೆ ತಪ್ಪು ಮಾಹಿತಿ ಪ್ರಸಾರ ಮಾಡುವುದು ಬೇಡ. ನೀವು ಈ ರೀತಿ ಮಾಡಿದರೆ ನಮ್ಮ ಮನೆಯಲ್ಲಿರುವ ವಯಸ್ಸಾದ ಅಜ್ಜ, ನಮ್ಮ ತಾಯಿಯವರ ಪರಿಸ್ಥಿತಿ ಏನಾಗಬೇಡ ಎಂದು ನಲಪಾಡ್ ಪ್ರಶ್ನಿಸಿದರು.

ಕಾನೂನು ಹೋರಾಟ ಮಾಡುತ್ತೇನೆ:

ನಾನೇನು ಶ್ರೀಕಿ ಜತೆ ಸ್ನೇಹ ಇಲ್ಲ ಎಂದು ಹೇಳಿಲ್ಲ. ಆ ವ್ಯಕ್ತಿ ನನಗೆ ಹಾಗೂ ನನ್ನ ತಮ್ಮನಿಗೆ ಪರಿಚಯಸ್ಥ ಅಂದ ಮಾತ್ರಕ್ಕೆ ಅವರು ಮಾಡಿದ ತಪ್ಪಿಗೆ ನಾನು ಹೊಣೆಯಲ್ಲ. ಇದನ್ನು 2021ರಲ್ಲೂ ಇ.ಡಿ. ಮುಂದೆ ಹೇಳಿಕೆ ನೀಡಿದ್ದೇನೆ. ಈಗ ಪಿತೂರಿಯಿಂದ ದಾಳಿ ನಡೆದಿದೆ. ಯಾರಾದರೂ ಅಪರಾಧ ಮಾಡಿದವರು 6 ವರ್ಷದವರೆಗೆ ಮನೆಯಲ್ಲಿ ಸಾಕ್ಷ್ಯ ಇಟ್ಟುಕೊಂಡು ಇರುತ್ತಾರಾ? ಈ ಷಡ್ಯಂತ್ರದ ದಾಳಿಯನ್ನು ನ್ಯಾಯಾಲಯದಲ್ಲಿ ಎದುರಿಸುತ್ತೇನೆ ಎಂದು ನಲಪಾಡ್ ಹೇಳಿದರು.

ನಲಪಾಡ್‌ ಮನೆಯಲ್ಲಿ24 ತಾಸುಗಳ ಬಳಿಕ ಇ.ಡಿ. ಶೋಧ ಅಂತ್ಯ

ಬೆಂಗಳೂರು: ರಾಜ್ಯದಲ್ಲಿ ಭಾರೀ ಸುದ್ದು ಮಾಡಿದ್ದ ಬಿಟ್‌ ಕಾಯಿನ್‌ ಹಗರಣ ಸಂಬಂಧ ಕಾಂಗ್ರೆಸ್‌ ಶಾಸಕ ಎನ್‌.ಎ.ಹ್ಯಾರಿಸ್‌ ಪುತ್ರ ಮೊಹಮದ್ ನಲಪಾಡ್‌, ಹ್ಯಾಕರ್‌ ಶ್ರೀಕಿ, ಹಕೀಬ್‌ ಖಾನ್‌ ಮನೆ, ಕಚೇರಿ ಸೇರಿದಂತೆ 12 ಸ್ಥಳಗಳಲ್ಲಿ ಸೋಮವಾರ ಏಕಕಾಲಕ್ಕೆ ದಾಳಿ ಮಾಡಿದ್ದ ಜಾರಿ ನಿರ್ದೇಶನಾಲಯದ (ಇ.ಡಿ.) ಅಧಿಕಾರಿಗಳು ಮಂಗಳವಾರ ಸಂಜೆ, 24 ತಾಸಿನ ಬಳಿಕ ಶೋಧ ಕಾರ್ಯ ಅಂತ್ಯಗೊಳಿಸಿದರು.

ಬಿಟ್‌ಕಾಯಿನ್‌ ಕೇಸ್‌ ತನಿಖೆ ಕೊನೆ ಹಂತಕ್ಕೆ

ರಾಜ್ಯದಲ್ಲಿ ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿ ರಚಿಸಲಾಗಿರುವ ಎಸ್‌ಐಟಿ ತಂಡದ ತನಿಖೆ ಕೊನೆ ಹಂತದಲ್ಲಿದೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವ್ಯಾಪ್ತಿ ಹೊಂದಿರುವ ಪ್ರಕರಣಗಳಲ್ಲಿ ಮಾಹಿತಿ ಕಲೆ ಹಾಕಿ ಅಂತಿಮ ವರದಿ ಕೊಡಬೇಕು. ಸದ್ಯ ಮಧ್ಯಂತರ ಚಾರ್ಜ್ ಶೀಟ್ ಸಲ್ಲಿಸುವಂತೆ ಸೂಚಿಸಲಾಗಿದೆ.

-ಡಾ.ಜಿ.ಪರಮೇಶ್ವರ್, ಗೃಹ ಸಚಿವ

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ಎಸ್ಸೆಸ್ಸೆಲ್ಸಿ ಹಿಂದಿ ಪರೀಕ್ಷೆಗೆ ಗ್ರೇಡ್‌ ಬೇಡ, ಅಂಕವನ್ನೇ ಕೊಡಿ: ಕೋರ್ಟ್‌
ಡಿಸಿಆರ್‌ಇ ಎಸ್ಪಿ, ಡಿವೈಎಸ್ಪಿ ವಿರುದ್ಧ ದಲಿತ ಇನ್ಸ್‌ಪೆಕ್ಟರ್ ಕಿರುಕುಳ ಆರೋಪ