ಲಿಂಗಾಯತ ಪ್ರತ್ಯೇಕ ಧರ್ಮ ಆಗಿದ್ದರೆ ಹೆಚ್ಚು ಸೌಲಭ್ಯ ಸಿಗುತ್ತಿತ್ತು: ಸಚಿವ ಎಂಬಿಪಾ

Published : May 08, 2025, 09:01 AM IST
MB Patil on honeytrap

ಸಾರಾಂಶ

ಸ್ವತಂತ್ರ ಧರ್ಮದ ಮಾನ್ಯತೆ ಸಿಕ್ಕಿದ್ದರೆ ಇಂದು ಲಿಂಗಾಯಿತ ಎಲ್ಲ ಉಪ ಪಂಗಡಗಳಿಗೆ ಹೆಚ್ಚಿನ ಸೌಲಭ್ಯಗಳು ದೊರೆಯುತ್ತಿದ್ದವು ಎಂದು ಜಿಲ್ಲಾ ಉಸ್ತುಚಾರಿ ಸಚಿವ ಎಂ.ಬಿ.ಪಾಟೀಲ‌ ಹೇಳಿದರು.

 ವಿಜಯಪುರ: ಹಿಂದೆ ನಾವು ಲಿಂಗಾಯತ ಧರ್ಮ ಮಾನ್ಯತೆಗೆ ಪ್ರಯತ್ನಿಸಿದ್ದೆವು. ಆದರೆ, ಕೆಲವರು ಧರ್ಮ ಒಡೆಯಲು ಪ್ರಯತ್ನಿಸಿದರು. ಅಂದು ಸ್ವತಂತ್ರ ಧರ್ಮದ ಮಾನ್ಯತೆ ಸಿಕ್ಕಿದ್ದರೆ ಇಂದು ಲಿಂಗಾಯಿತ ಎಲ್ಲ ಉಪ ಪಂಗಡಗಳಿಗೆ ಹೆಚ್ಚಿನ ಸೌಲಭ್ಯಗಳು ದೊರೆಯುತ್ತಿದ್ದವು ಎಂದು ಜಿಲ್ಲಾ ಉಸ್ತುಚಾರಿ ಸಚಿವ ಎಂ.ಬಿ.ಪಾಟೀಲ‌ ಹೇಳಿದರು. 

ಬಬಲೇಶ್ವರ ತಾಲೂಕಿನ ಧನ್ಯಾಳದಲ್ಲಿ ಬುಧವಾರ ವಿಶ್ವಗುರು ಬಸವೇಶ್ವರ ಮೂರ್ತಿ ಅನಾವರಣ ಮಾಡಿ ಮಾತನಾಡಿದರು. 12ನೇ ಶತಮಾನದಿಂದ 1881ರವರೆಗೆ ಲಿಂಗಾಯಿತ ಪ್ರತ್ಯೇಕ ಧರ್ಮವಾಗಿತ್ತು. ಆದರೆ, 1881ರಲ್ಲಿ ಮೈಸೂರು ಅರಸರು ಲಿಂಗಾಯಿತರನ್ನು ಪ್ರತ್ಯೇಕ ಧರ್ಮದ ಕಾಲಂನಿಂದ ತೆಗೆದು ಹಿಂದೂ ಧರ್ಮದ ಶೂದ್ರ ವರ್ಣದಲ್ಲಿ ಸೇರಿಸಿದರು ಎಂದರು.

ದಯವೇ ಧರ್ಮದ ಮೂಲವಯ್ಯ ಎಂಬ ತಿರುಳು ಹೊಂದಿರುವ ಬಸವ ಧರ್ಮ ಪಾಲನೆಯಾದರೆ ವಿಶ್ವದಲ್ಲಿ ಯುದ್ಧದ ವಾತಾವರಣವೇ ಇರುವುದಿಲ್ಲ. ಮುಂದಿನ ದಿನಗಳಲ್ಲಿ ಬಸವ ಭಾರತವಾಗಲಿದೆ. ಆಗ ದೇಶದಲ್ಲಿ ಕಾಯಕ, ದಾಸೋಹ, ಸಮಾನತೆ, ಸಾಮರಸ್ಯ ನೆಲೆಸಲಿದೆ ಎಂದು ಹೇಳಿದರು.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.

Recommended Stories

ಹೊಸ ವರ್ಷ: ದೇವಾಲಯಗಳಿಗೆ ಭಕ್ತರ ದಾಂಗುಡಿ
ಇದು ಲೋಕಲ್‌ ಎಲೆಕ್ಷನ್‌ ವರ್ಷ : ಮುಹೂರ್ತ ಫಿಕ್ಸ್‌ ಆಗುವುದು ನಿಶ್ಚಿತ