ಅಕ್ರಮ ಮರ ಕಡಿತಲೆ : ದಂಡ-ಶಿಕ್ಷೆ 10 ಪಟ್ಟು ಹೆಚ್ಚಳಕ್ಕೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚನೆ

Published : Mar 27, 2025, 10:52 AM IST
Eshwar Khandre

ಸಾರಾಂಶ

ಅಕ್ರಮ ಮರ ಕಡಿತಲೆ ಪ್ರಕರಣಗಳಲ್ಲಿ ಸದ್ಯ ವಿಧಿಸಲಾಗುತ್ತಿರುವ ದಂಡ ಮತ್ತು ಶಿಕ್ಷೆಯ ಪ್ರಮಾಣವನ್ನು 10 ಪಟ್ಟು ಹೆಚ್ಚಿಸುವುದಕ್ಕೆ ಅನುವಾಗುವಂತೆ ವೃಕ್ಷ ಸಂರಕ್ಷಣಾ ಕಾಯ್ದೆ 1976ಗೆ ತಿದ್ದುಪಡಿ ತರಲು ಕ್ರಮ ಕೈಗೊಳ್ಳಬೇಕು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅಧಿಕಾರಿಗಳಿಗೆ ಸೂಚನೆ

 ಬೆಂಗಳೂರು: ಅಕ್ರಮ ಮರ ಕಡಿತಲೆ ಪ್ರಕರಣಗಳಲ್ಲಿ ಸದ್ಯ ವಿಧಿಸಲಾಗುತ್ತಿರುವ ದಂಡ ಮತ್ತು ಶಿಕ್ಷೆಯ ಪ್ರಮಾಣವನ್ನು 10 ಪಟ್ಟು ಹೆಚ್ಚಿಸುವುದಕ್ಕೆ ಅನುವಾಗುವಂತೆ ವೃಕ್ಷ ಸಂರಕ್ಷಣಾ ಕಾಯ್ದೆ 1976ಗೆ ತಿದ್ದುಪಡಿ ತರಲು ಕ್ರಮ ಕೈಗೊಳ್ಳಬೇಕು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ಈ ಕುರಿತು ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಿಗೆ ಪತ್ರದ ಮೂಲಕ ನಿರ್ದೇಶಿಸಿರುವ ಖಂಡ್ರೆ, ದೊಡ್ಡ ಸಂಖ್ಯೆಯಲ್ಲಿ ಮರಗಳನ್ನು ಕಡಿಯುವುದು ಮಾನವನ ಹತ್ಯೆ ಮಾಡಿದಂತೆ ಎಂದು ಸುಪ್ರೀಂಕೋರ್ಟ್‌ ಅಭಿಪ್ರಾಯಪಟ್ಟಿದೆ. ಅಕ್ರಮವಾಗಿ ಕಡಿತಲೆ ಮಾಡುವವರಿಗೆ ವಿಧಿಸುವ ದಂಡದ ಪ್ರಮಾಣ ಹೆಚ್ಚಳದ ಅಗತ್ಯವನ್ನೂ ಪ್ರತಿಪಾದಿಸಿದೆ ಎಂದಿದ್ದಾರೆ.

. ಆ ದೃಷ್ಟಿಯಲ್ಲಿಟ್ಟುಕೊಂಡು, ರಾಜ್ಯದಲ್ಲಿರುವ ದಂಡ ಮತ್ತು ಶಿಕ್ಷೆಯ ಪ್ರಮಾಣ 10 ಪಟ್ಟು ಹೆಚ್ಚಿಸಬೇಕಿದೆ. ಅದಕ್ಕೆ ಪೂರಕವಾಗಿ ವೃಕ್ಷ ಸಂರಕ್ಷಣಾ ಕಾಯ್ದೆ 1976 ತಿದ್ದುಪಡಿ ತರಬೇಕಿದ್ದು, ಮುಂದಿನ ಅಧಿವೇಶನದಲ್ಲಿ ತಿದ್ದುಪಡಿ ಕಾಯ್ದೆ ಮಂಡಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.

Recommended Stories

ಗ್ಯಾರಂಟಿಯಿಂದಾಗಿ ತಲ ಆದಾಯದಲ್ಲಿ ರಾಜ್ಯ ನಂ.1: ಸಿದ್ದರಾಮಯ್ಯ
ಅರ್ಹರು ಪಂಚ ಗ್ಯಾರಂಟಿ ಯೋಜನೆಗಳನ್ನು ಸದ್ಬಳಸಿಕೊಳ್ಳಿ