ಸೂಲಿಬೆಲೆ ವಿರುದ್ಧ ಸುಳ್ಳು ಕೇಸ್‌ ದಾಖಲಿಸಿದರೆ ಸುಮ್ನಿರಲ್ಲ : ಬಿವೈವಿ

Published : Jun 12, 2025, 08:09 AM IST
BY Vijayendra

ಸಾರಾಂಶ

ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಸುಳ್ಳು ಮೊಕದ್ದಮೆ ದಾಖಲಿಸಿ ಯಾವುದೇ ರೀತಿಯ ಕಿರುಕುಳ ನೀಡಲು ಮುಂದಾದರೆ ರಾಜ್ಯ ಬಿಜೆಪಿ ಸುಮ್ಮನೆ ಕೂರುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ರಾಜ್ಯದ ಕಾಂಗ್ರೆಸ್‌ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು : ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಸುಳ್ಳು ಮೊಕದ್ದಮೆ ದಾಖಲಿಸಿ ಯಾವುದೇ ರೀತಿಯ ಕಿರುಕುಳ ನೀಡಲು ಮುಂದಾದರೆ ರಾಜ್ಯ ಬಿಜೆಪಿ ಸುಮ್ಮನೆ ಕೂರುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ರಾಜ್ಯದ ಕಾಂಗ್ರೆಸ್‌ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದೂ ಪರ ಸಂಘಟನೆಗಳು, ಮುಖಂಡರು, ಚಿಂತಕರು ಹಾಗೂ ಕಾರ್ಯಕರ್ತರನ್ನು ಗುರಿಯಾಗಿಸಿ ಪೊಲೀಸ್ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಂಡು ನಿರಂತರ ಕಿರುಕುಳ ನೀಡಲಾಗುತ್ತಿದೆ. ಈ ಬಗ್ಗೆ ಭಾರತೀಯ ಜನತಾ ಪಾರ್ಟಿ ಮೊದಲಿನಿಂದಲೂ ಆರೋಪಿಸುತ್ತಲೇ ಬಂದಿದೆ ಎಂದಿದ್ದಾರೆ.

ಕರಾವಳಿ ಭಾಗದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ಹಲ್ಲೆ ಹಾಗೂ ಕೊಲೆ ಪ್ರಕರಣಗಳ ಹಿನ್ನೆಲೆಯಲ್ಲಿ ಉದ್ಭವಿಸಿದ ಸಂಘರ್ಷ ಪರಿಸ್ಥಿತಿಯನ್ನು ಹತೋಟಿಗೆ ತರುವ ಬದಲು ರಾಷ್ಟ್ರವಿದ್ರೋಹಿ ಮತೀಯ ಶಕ್ತಿಗಳನ್ನು ಓಲೈಸುವ ಸಲುವಾಗಿ ಸದ್ಯ ಕೋಮು ನಿಗ್ರಹ ದಳವನ್ನು ಅಸ್ತಿತ್ವಕ್ಕೆ ತರಲಾಗಿದೆ ಎಂದು ಸಾಮಾಜಿಕ ಜಾಲತಾಣದ ಮೂಲಕ ಕಿಡಿಕಾರಿದ್ದಾರೆ.

ಹಿಂದೂಪರ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರನ್ನು ಗುರಿಯಾಗಿಸಿಕೊಂಡು ಪೊಲೀಸ್ ಇಲಾಖೆ ಈಗಾಗಲೇ ಕಾರ್ಯಾಚರಣೆ ಆರಂಭಿಸಿರುವುದು ಪೊಲೀಸ್ ಇಲಾಖೆಯಿಂದ ಸೋರಿಕೆಯಾಗಿರುವ ದಾಖಲೆ ಹಾಗೂ ಆಡಿಯೋ ರೆಕಾರ್ಡ್ ಗಳಿಂದ ಸ್ಪಷ್ಟವಾಗುತ್ತಿದೆ. ಸೂಲಿಬೆಲೆ ಅವರಂತಹ ಚಿಂತಕರನ್ನೇ ಈ ಪರಿಯಾಗಿ ಗುರಿಯಾಗಿಸಿಕೊಂಡಿರುವಾಗ ಸಾಮಾನ್ಯ ಹಿಂದೂ ಪರ ಕಾರ್ಯಕರ್ತರನ್ನು ಯಾವ ಪರಿಯಲ್ಲಿ ಪೊಲೀಸ್ ಇಲಾಖೆ ಕಿರುಕುಳ ನೀಡಲು ಸಜ್ಜಾಗಿದೆ ಎನ್ನುವುದು ಸದ್ಯ ಸೋರಿಕೆಯಾಗಿರುವ ಆಡಿಯೋ ಗಮನಿಸಿದರೆ ಸ್ಪಷ್ಟವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೊಲೀಸರನ್ನು ಬಳಸಿಕೊಂಡು ಹಿಂದೂ ಮುಖಂಡರು ಹಾಗೂ ಕಾರ್ಯಕರ್ತರಿಗೆ ಕಿರುಕುಳ ನೀಡುವ ಕೆಲಸಕ್ಕೆ ಕೈ ಹಾಕಿದರೆ ಅದನ್ನು ಪ್ರತಿಭಟಿಸಿ ಹಿಂದೂ ಸಮಾಜದ ಕಾರ್ಯಕರ್ತರು ಹಾಗೂ ಮುಖಂಡರ ರಕ್ಷಣೆಗೆ ಬಿಜೆಪಿ ಕಟಿಬದ್ಧವಾಗಿ ಹೋರಾಡಲಿದೆ ವಿಜಯೇಂದ್ರ ತಿಳಿಸಿದ್ದಾರೆ.

PREV
Read more Articles on

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಬೆಂಗಳೂರು ನಗರದಲ್ಲಿ ಮತ್ತೆ ರಾರಾಜಿಸಲಿವೆ ಜಾಹೀರಾತು : ವಾರ್ಷಿಕ ₹ 6000 ಕೋಟಿ ನಿರೀಕ್ಷೆ