ಜನಿವಾರ, ಹಿಜಾಬ್‌ ಗೊಂದಲ ಮರು ಪರೀಕ್ಷೆಗೆ ಸಿದ್ಧ, ಕೃಪಾಂಕವಿಲ್ಲ : ಸಚಿವ

Published : May 01, 2026, 08:57 AM IST
Dr MC Sudhakar

ಸಾರಾಂಶ

ಪ್ರಸಕ್ತ ಸಾಲಿನ ಸಿಇಟಿಯಲ್ಲಿ ಜನಿವಾರ ಮತ್ತು ಹಿಜಾಬ್ ವಿಚಾರಕ್ಕೆ ಸಮಸ್ಯೆಗೊಳಗಾಗಿದ್ದ ವಿದ್ಯಾರ್ಥಿಗಳು ಮರು ಪರೀಕ್ಷೆ ಬರೆಯಲು ಬಯಸಿದರೆ, ಈ ಬಗ್ಗೆ ಚರ್ಚಿಸಿ ತೀರ್ಮಾನ ಮಾಡಲಾಗುವುದು. ಆದರೆ, ಯಾವುದೇ ಕೃಪಾಂಕ ನೀಡಲು ಸಾಧ್ಯವಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌ ತಿಳಿಸಿದರು.

  ಬೆಂಗಳೂರು :  ಪ್ರಸಕ್ತ ಸಾಲಿನ ಸಿಇಟಿಯಲ್ಲಿ ಜನಿವಾರ ಮತ್ತು ಹಿಜಾಬ್ ವಿಚಾರಕ್ಕೆ ಸಮಸ್ಯೆಗೊಳಗಾಗಿದ್ದ ವಿದ್ಯಾರ್ಥಿಗಳು ಮರು ಪರೀಕ್ಷೆ ಬರೆಯಲು ಬಯಸಿದರೆ, ಈ ಬಗ್ಗೆ ಚರ್ಚಿಸಿ ತೀರ್ಮಾನ ಮಾಡಲಾಗುವುದು. ಆದರೆ, ಯಾವುದೇ ಕೃಪಾಂಕ ನೀಡಲು ಸಾಧ್ಯವಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌ ತಿಳಿಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜನಿವಾರ ತೆಗೆಯುವಂತೆ ಸೂಚಿಸಲ್ಪಟ್ಟ ನಾಲ್ವರು ವಿದ್ಯಾರ್ಥಿಗಳು ಕೆಇಎಗೆ ಪತ್ರ ಬರೆದಿದ್ದು, ಈ ಘಟನೆಯಿಂದ ನಮಗೆ ತೊಂದರೆಯಾಯಿತು ಮತ್ತು ಪರೀಕ್ಷೆ ಮೇಲೆ ಗಮನಹರಿಸಲು ಸಾಧ್ಯವಾಗಲಿಲ್ಲ, ಆದ್ದರಿಂದ ಕೃಪಾಂಕ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಹಿಜಾಬ್‌ ವಿಚಾರದಿಂದಾಗಿ ಒಬ್ಬ ವಿದ್ಯಾರ್ಥಿನಿ ಭೌತಶಾಸ್ತ್ರ ಪರೀಕ್ಷೆ ಬರೆದಿಲ್ಲ. ಹಾಗಾಗಿ ಈ ವಿದ್ಯಾರ್ಥಿಗಳು ಬಯಸಿದರೆ ಮರು ಪರೀಕ್ಷೆಗೆ ಅವಕಾಶ ನೀಡಲು ತೀರ್ಮಾನಿಸುತ್ತೇವೆ. ಆದರೆ, ಕಾನೂನು ಸಮಸ್ಯೆ ಆಗಬಹುದಾದ ಕಾರಣದಿಂದ ಕೃಪಾಂಕ ನೀಡಲು ಆಗುವುದಿಲ್ಲ ಎಂದರು.

ತರಬೇತಿ ನೀಡಲಾಗಿತ್ತು:

ಸಿಬ್ಬಂದಿಗೆ ಡ್ರೆಸ್ ಕೋಡ್ ಬಗ್ಗೆ ತರಬೇತಿ ನೀಡಲಾಗಿತ್ತು. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ 2 ಗಂಟೆ ಮುಂಚಿತವಾಗಿ ತಲುಪಬೇಕು ಎಂಬ ಸೂಚನೆ ನೀಡಲಾಗಿತ್ತು. ಆದರೂ ಮೂರು ಕಾಲೇಜುಗಳ ಸಿಬ್ಬಂದಿ ನಿಯಮ ಉಲ್ಲಂಘಿಸಿದ್ದಾರೆ. ಈ ಘಟನೆಗಳು ಕೆಲ ಸಿಬ್ಬಂದಿಯಿಂದ ಉದ್ದೇಶಪೂರ್ವಕವಾಗಿ ನಡೆದಿವೆ ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ. ​ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ರಚಿಸಿದ ಸಮಿತಿ ಸಲ್ಲಿಸಿದ ವರದಿ ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ವಹಿಸಲಾಗುವುದು. ಜೊತೆಗೆ ಮುಂದಿನ ವರ್ಷಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.

 - ಜನಿವಾರ ಗದ್ದಲ ಬಗ್ಗೆ 4 ಮಕ್ಕಳು ಪತ್ರ ಬರೆದಿದ್ದಾರೆ

- ಪರೀಕ್ಷೆ ಬರೆಯಲು ಸಮಸ್ಯೆಯಾಯ್ತು ಎಂದಿದ್ದಾರೆ

- ಹಿಜಾಬ್‌ ವಿಚಾರವಾಗಿ ಒಬ್ಬಾಕೆ ಪರೀಕ್ಷೆ ಬರೆದಿಲ್ಲ

- ಈ ಮಕ್ಕಳು ಬಯಸಿದ್ರೆ ಮರುಪರೀಕ್ಷೆಗೆ ಅವಕಾಶ

- ಕಾನೂನು ಸಮಸ್ಯೆ ಹಿನ್ನೆಲೆಯಲ್ಲಿ ಕೃಪಾಂಕ ನೀಡಲ್ಲ

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ಬಿಜೆಪಿಗೆ ಬಂಗಾಳ: ಮತ್ತೆ 2 ಸಮೀಕ್ಷೆಗಳಿಂದ ಭವಿಷ್ಯ
ಮುಸ್ಲಿಂ ಕಾಲೋನಿಗಳಿಗೆ ₹600 ಕೋಟಿ ಬಂಪರ್‌