ಕನ್ನಡಪ್ರಭ- ಸುವರ್ಣ ನ್ಯೂಸ್’ ಪ್ರಧಾನ ಸಂಪಾದಕ ರವಿ ಹೆಗಡೆ ಅವರಿಗೆ ಶನಿವಾರ ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದಿಂದ ‘ವಡ್ಡರ್ಸೆ ರಘುರಾಮ ಶೆಟ್ಟಿ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬ್ರಹ್ಮಾವರದ ಬಂಟರ ಭವನದಲ್ಲಿ
ಬ್ರಹ್ಮಾವರ : ‘ಕನ್ನಡಪ್ರಭ- ಸುವರ್ಣ ನ್ಯೂಸ್’ ಪ್ರಧಾನ ಸಂಪಾದಕ ರವಿ ಹೆಗಡೆ ಅವರಿಗೆ ಶನಿವಾರ ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದಿಂದ ‘ವಡ್ಡರ್ಸೆ ರಘುರಾಮ ಶೆಟ್ಟಿ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬ್ರಹ್ಮಾವರದ ಬಂಟರ ಭವನದಲ್ಲಿ
ನಡೆದ ಕಾರ್ಯಕ್ರಮದಲ್ಲಿ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಡಾ। ಎಂ.ಮೋಹನ್ ಆಳ್ವ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಉಡುಪಿ ಜಿಲ್ಲಾಧಿಕಾರಿ ಡಾ। ಕೆ.ವಿದ್ಯಾಕುಮಾರಿ, ಕನ್ನಡಪ್ರಭ ಪತ್ರಿಕೆಯ ಪುರವಣಿ ಸಂಪಾದಕ ಜೋಗಿ, ಹಿರಿಯ ಪತ್ರಕರ್ತ ಕೆ.ಸಿ.ರಾಜೇಶ್, ಪತ್ರಕರ್ತ ಚಿತ್ತೂರು ಪ್ರಭಾಕರ, ಬ್ರಹ್ಮಾವರ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಗಾಣಿಗ ಅಚ್ಲಾಡಿ, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಬಂಟರ ಭವನದ ಅಧ್ಯಕ್ಷ ಭುಜಂಗ ಶೆಟ್ಟಿ, ಉದ್ಯಮಿ ಸುಗ್ಗಿ ಸುಧಾಕರ ಶೆಟ್ಟಿ, ಜಿಲ್ಲಾ ಸಂಘದ ಪ್ರತಿನಿಧಿ ಮೈಕಲ್ ಡಿಸೋಜ ಉಪಸ್ಥಿತರಿದ್ದರು.