;Resize=(412,232))
ಮೈಸೂರು: ಆ.13ರಂದು ಕರ್ನಾಟಕ ಬಂದ್ ಫಿಕ್ಸ್, ಬಂದ್ ವಾಪಸ್ ಪಡೆಯುವ ಮಾತೇ ಇಲ್ಲ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಗ್ರ ಕನ್ನಡಿಗರ ಪರವಾಗಿ ಬಂದ್‌ಗೆ ಕರೆ ಕೊಟ್ಟಿದ್ದೇವೆ.
ಕಾವೇರಿ ನೀರು ಒಂದೇ ವಿಚಾರ ಅಲ್ಲ. ಗಡಿ ಸಮಸ್ಯೆ, ಯುವಕರಿಗೆ ಉದ್ಯೋಗ, ಮೈಸೂರಿನ ಸಮಗ್ರ ಅಭಿವೃದ್ಧಿ, ಕಾವೇರಿ ನೀರು ಹಂಚಿಕೆ ವಿಚಾರ, ಬೆಳಗಾವಿ ಎಂಇಎಸ್ ಪುಂಡಾಟ ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಕರ್ನಾಟಕ ಬಂದ್ ಕರೆ ಕೊಟ್ಟಿದ್ದೇವೆ ಎಂದರು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಂದ್ ವಾಪಸ್ ಪಡೆಯಿರಿ ಎಂದು ಮನವಿ ಮಾಡಿದ್ದಾರೆ.
ನಾವು ಯಾವುದೇ ಕಾರಣಕ್ಕೂ ಬಂದ್ ವಾಪಸ್ ಪಡೆಯುವುದಿಲ್ಲ. ಈಗಾಗಲೇ ದಿನಾಂಕವನ್ನೂ ನಿಗದಿ ಮಾಡಲಾಗಿದೆ. ಆ.13ರಂದು ಅಖಂಡ ಕರ್ನಾಟಕ ಬಂದ್ ಮಾಡುತ್ತೇವೆ ಎಂದು ಅವರು ತಿಳಿಸಿದರು.