;Resize=(412,232))
ಬೆಂಗಳೂರು : ಕಬ್ಬನ್ ಪಾರ್ಕ್‌ನಲ್ಲಿರುವ ಹೈಕೋರ್ಟ್ ಸ್ಥಳಾಂತರದ ಬಗ್ಗೆ ಸರ್ಕಾರ ಸ್ಥಳ ಪರಿಶೀಲಿಸಲಿದೆ. ಒಂದಷ್ಟು ಜನ ವಕೀಲರು ಭೇಟಿ ಮಾಡಿ ರೇಸ್ ಕೋರ್ಸ್ ಜಾಗ ಬಳಸಿಕೊಳ್ಳುವ ಬಗ್ಗೆ ತಿಳಿಸಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಕಬ್ಬನ್ ಪಾರ್ಕ್‌ನಲ್ಲಿ ಭಾನುವಾರ ಆಯೋಜಿಸಿದ್ದ ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೈಕೋರ್ಟ್ ಸ್ಥಳಾಂತರಕ್ಕೆ 15ರಿಂದ 20 ಎಕರೆ ಜಾಗ ನೀಡಿ ಎಂದು ವಕೀಲರು, ಮುಖ್ಯ ನ್ಯಾಯಮೂರ್ತಿ ಮನವಿ ಮಾಡಿದ್ದಾರೆ. ಸರ್ಕಾರ ಈ ಬಗ್ಗೆ ಪರಿಶೀಲಿಸಲಿದೆ. ನ್ಯಾಯಾಲಯದವರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹತ್ತಿರದಲ್ಲಿ ಎಲ್ಲಿ ಸ್ಥಳಾವಕಾಶ ದೊರೆಯಬಹುದು ಎಂದು ಪರಿಶೀಲನೆ ಮಾಡಲಾಗುವುದು. ಹಾಲಿ ಇರುವ ಕಟ್ಟಡ ಹಳೆಯ ಐತಿಹಾಸಿಕ ಕಟ್ಟಡವಾದ ಕಾರಣಕ್ಕೆ ಅದನ್ನು ಏನೂ ಮಾಡಲು ಸಾಧ್ಯವಿಲ್ಲ ಎಂದರು.
ಹೈಕೋರ್ಟ್ ಅನ್ನು ನಗರದ ಹೊರಗೆ ಸ್ಥಾಪಿಸಲು ಸಾಧ್ಯವಿಲ್ಲ. ಅದಕ್ಕೆ ಸೂಕ್ತ ಸ್ಥಳಗಳನ್ನು ಗುರುತಿಸುವ ಕೆಲಸ ನಡೆಯುತ್ತಿದೆ. ಕಕ್ಷಿದಾರರು, ವಕೀಲರಿಗೆ ಅನುಕೂಲವಾಗುವಂತಹ ಸ್ಥಳ ನೋಡಬೇಕಿದೆ. ಒಂದಷ್ಟು ಜನ ವಕೀಲರು ಭೇಟಿ ಮಾಡಿ ರೇಸ್ ಕೋರ್ಸ್ ಜಾಗ ಬಳಸಿಕೊಳ್ಳುವ ಬಗ್ಗೆ ತಿಳಿಸಿದ್ದಾರೆ. ಒಂದಷ್ಟು ಕಾನೂನಾತ್ಮಕ ತೊಡಕುಗಳು ಇರುವ ಕಾರಣಕ್ಕೆ ಈ ಬಗ್ಗೆ ಆಲೋಚನೆ ಮಾಡೋಣ ಎಂದು ತಿಳಿಸಿದ್ದೇನೆ ಎಂದು ವಿವರಿಸಿದರು.
ಬೆಂಗಳೂರು: ರೇಸ್‌ಕೋರ್ಸ್‌ಗೆ ಹೈಕೋರ್ಟ್ ಸ್ಥಳಾಂತರ ಮಾಡುವಂತೆ ಹಲವು ವಕೀಲರ ಮನವಿಯನ್ನು ಪರಿಶೀಲನೆ ಮಾಡುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ ಬೆನ್ನಲ್ಲೆ ಭಾನುವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೇಸ್‌ಕೋರ್ಸ್‌ಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ರೇಸ್ ಕೋರ್ಸ್‌ನಲ್ಲಿ ನಡೆಯುತ್ತಿದ್ದ ಅಭಿವೃದ್ಧಿ ಕಾರ್ಯವನ್ನು ಅವರು ಪರಿಶೀಲಿಸಿದರು. ಈ ವೇಳೆ ಅವರಿಗೆ ಟರ್ಫ್‌ಕ್ಲಬ್ ಸಿಬ್ಬಂದಿ ಅಭಿವೃದ್ಧಿ ಕಾರ್ಯಗಳ ಕುರಿತು ಮಾಹಿತಿ ಒದಗಿಸಿದರು. ಸಚಿವ ಕೆ.ಜೆ.ಜಾರ್ಜ್ ಇದ್ದರು.