‘ಕರ್ನಾಟಕ- ಮಹಾ ರಿಂಗ್‌ ರೋಡ್‌ ₹15000 ಕೋಟಿ ವೆಚ್ಚದಲ್ಲಿ ನಿರ್ಮಾಣ’

‘ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ರಿಂಗ್‌ ರೋಡ್‌ ಅನ್ನು 15,000 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಲಾಗುವುದು

Follow Us

ಪಣಜಿ: ‘ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ರಿಂಗ್‌ ರೋಡ್‌ ಅನ್ನು 15,000 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಲಾಗುವುದು. ಇದು ಗೋವಾದ ಹೊರವಲಯದಿಂದ ಸಾಗುವ ಕಾರಣ, ವಾಹನದಟ್ಟಣೆಯ ಸಮಸ್ಯೆಯನ್ನು ತಗ್ಗಿಸುತ್ತದೆ’ ಎಂದು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ.

 ‘ಮಹಾರಾಷ್ಟ್ರ ಮತ್ತು ಗೋವಾ ಗಡಿಯಲ್ಲಿರುವ ಪಾತ್ರದೇವಿಯಿಂದ ಗೋವಾದ ಹೊರವಲಯದ ಮೂಲಕ ಕರ್ನಾಟಕವನ್ನು ಸಂಪರ್ಕಿಸುವ ರಸ್ತೆ ನಿರ್ಮಾಣ ಯೋಜನೆಯನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಪರಿಗಣಿಸಿದೆ.

 ಪ್ರಸ್ತುತ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಟ್ರಾಫಿಕ್‌ ಸಮಸ್ಯೆ ತಪ್ಪಿಸುವ ಸಲುವಾಗಿ ಇಂತಹ ರಸ್ತೆ ನಿರ್ಮಾಣಕ್ಕೆ ಗೋವಾ ಸಿಎಂ ಪ್ರಮೋದ್‌ ಸಾವಂತ್‌ ಮತ್ತು ಕೇಂದ್ರ ವಿದ್ಯುತ್ ಮತ್ತು ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವ ಶ್ರೀಪಾದ್ ನಾಯಕ್ ಪ್ರಸ್ತಾವನೆ ಸಲ್ಲಿಸಿದ್ದರು’ ಎಂದು ಗಡ್ಕರಿ ಹೇಳಿದರು.

Read more Articles on