ಬೆಂಗಳೂರು : ‘ಶಕ್ತಿ’ ಯೋಜನೆ ಅಡಿಯಲ್ಲಿ ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರು 500 ಕೋಟಿ ಉಚಿತ ಪ್ರಯಾಣದ ಗುರಿಯನ್ನು ಶೀಘ್ರದಲ್ಲಿ ತಲುಪುತ್ತಿದ್ದು, ಆ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜನೆ ಕುರಿತು ಚರ್ಚಿಸಿ ನಿರ್ಧರಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಕೆಎಸ್ಸಾರ್ಟಿಸಿ ಕೇಂದ್ರ ಕಚೇರಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2023ರ ಜೂ. 11ರಂದು ಆರಂಭಿಸಲಾದ ಶಕ್ತಿ ಯೋಜನೆ ಅಡಿ ಇದೇ ಜು. 14 ಅಥವಾ 15ಕ್ಕೆ ರಾಜ್ಯದ ಮಹಿಳೆಯರು 500 ಕೋಟಿ ಉಚಿತ ಪ್ರಯಾಣ ಮಾಡಿದ ಗುರಿ ತಲುಪಲಿದ್ದಾರೆ. ಈ ಐತಿಹಾಸಿಕ ಕ್ಷಣವನ್ನು ಸ್ಮರಣೀಯವಾಗಿಸಲು ವಿಶೇಷ ಕಾರ್ಯಕ್ರಮ ಆಯೋಜಿಸುವ ಕುರಿತು ಚಿಂತನೆಯಿದೆ. ಆ ಬಗ್ಗೆ ಮುಖ್ಯಮಂತ್ರಿ ಅವರು ಸೇರಿದಂತೆ ಇತರರೊಂದಿಗೆ ಚರ್ಚಿಸಲಾಗುವುದು. ಜತೆಗೆ 500 ಕೋಟಿಯ ಉಚಿತ ಪ್ರಯಾಣದ ಟಿಕೆಟ್ ಪಡೆಯುವ ಮಹಿಳಾ ಪ್ರಯಾಣಕಿಗೆ ವಿಶೇಷ ಬಹುಮಾನ ನೀಡುವ ಚಿಂತನೆಯಿದೆ ಎಂದು ಹೇಳಿದರು.
ಒಂದು ರಾಜ್ಯದ ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ 500 ಕೋಟಿ ಉಚಿತ ಪ್ರಯಾಣ ನೀಡಿದ್ದು ದಾಖಲೆಯಾಗಿದೆ. ಶಕ್ತಿ ಯೋಜನೆ ಅನುಷ್ಠಾನಗೊಂಡಾಗ ಹಲವು ಸವಾಲುಗಳು ನಮ್ಮೆದುರಿದ್ದವು. ಸಿಬ್ಬಂದಿ, ಬಸ್‌ಗಳ ಕೊರತೆಗಳಿದ್ದವು. ಕೊರೋನಾ ಅವರಿಯಲ್ಲಿ 3,800 ಬಸ್‌ಗಳನ್ನು ಸ್ಥಗಿತಗೊಳಿಸಲಾಗಿತ್ತು. ನಾವು ಅಧಿಕಾರಕ್ಕೆ ಬಂದ ನಂತರ 9 ಸಾವಿರ ಜನರನ್ನು ನೇಮಕಾತಿ ಮಾಡಿಕೊಳ್ಳಲಾಗಿದ್ದು, 5,100 ಬಸ್‌ಗಳನ್ನು ಸೇರ್ಪಡೆ ಮಾಡಲಾಗಿದೆ. ಜತೆಗೆ 1.54 ಲಕ್ಷ ಶೆಡ್ಯೂಲ್‌ಗಳಿಗೆ ಹೆಚ್ಚುವರಿಯಾಗಿ 20 ಸಾವಿರ ಶೆಡ್ಯೂಲ್‌ಗಳನ್ನು ಸೇರಿಸಲಾಗಿದೆ. ಹಾಗೆಯೇ, ಶಕ್ತಿ ಯೋಜನೆ ಜಾರಿ ನಂತರ ಪ್ರತಿ ದಿನ 84 ಲಕ್ಷ ಇದ್ದ ಪ್ರಯಾಣಿಕರ ಸಂಖ್ಯೆ 1 ಕೋಟಿ ಮೀರಿದೆ ಎಂದು ವಿವರಿಸಿದರು. ಈವರೆಗೆ ₹12534 ಕೋಟಿ ಮೌಲ್ಯದ ಟಿಕೆಟ್‌ಗಳು ಖರೀದಿಯಾಗಿವೆ.
‘ಶಕ್ತಿ’ ಯೋಜನೆ ಅಡಿಯಲ್ಲಿ ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರು 500 ಕೋಟಿ ಉಚಿತ ಪ್ರಯಾಣದ ಗುರಿ ಶೀಘ್ರ ಶೇಷ ಕಾರ್ಯಕ್ರಮ ಆಯೋಜನೆ ಕುರಿತು ಚರ್ಚಿಸಿ ನಿರ್ಧರಿಸಲಾಗುವುದು ಎಂದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ 2023ರ ಜೂ. 11ರಂದು ಆರಂಭಿಸಲಾದ ಶಕ್ತಿ ಯೋಜನೆ ಅಡಿ ಇದೇ ಜು. 14 ಅಥವಾ 15ಕ್ಕೆ ರಾಜ್ಯದ ಮಹಿಳೆಯರು 500 ಕೋಟಿ ಉಚಿತ ಪ್ರಯಾಣ ಮಾಡಿದ ಗುರಿ 500 ಕೋಟಿಯ ಉಚಿತ ಪ್ರಯಾಣದ ಟಿಕೆಟ್ ಪಡೆಯುವ ಮಹಿಳಾ ಪ್ರಯಾಣಕಿಗೆ ವಿಶೇಷ ಬಹುಮಾನ