;Resize=(412,232))
ಬೆಂಗಳೂರು : ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಖಾದಿ ಉಡುಪು ಧರಿಸುವುದನ್ನು ಕಡ್ಡಾಯಗೊಳಿಸುವ ಸಂಬಂಧ ನಿರ್ಧರಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸರ್ಕಾರಿ ನೌಕರರ ಸಂಘಗಳ ಪ್ರಮುಖರೊಂದಿಗೆ ಗುರುವಾರ ಸಭೆ ನಡೆಸಲಾಗುತ್ತಿದೆ.
ಪ್ರತಿ ತಿಂಗಳ ಮೊದಲ ಶುಕ್ರವಾರ ಮತ್ತು ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ ಸೇರಿ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿ ಎಲ್ಲರೂ ಖಾದಿ ಉಡುಪು ಧರಿಸುವುದನ್ನು ಕಡ್ಡಾಯಗೊಳಿಸುವ ಕುರಿತು ಸರ್ಕಾರ ಚಿಂತನೆ ನಡೆಸಿದೆ.
ಈ ಕುರಿತಂತೆ ಗುರುವಾರ ಮುಖ್ಯ ಕಾರ್ಯದರ್ಶಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗುತ್ತಿದೆ.