ಕೆಪಿಎಸ್ಸಿ ಲೋಪದೋಷಕ್ಕೆ 5 ಕೃಪಾಂಕ ಪ್ರಕಟ - ಪೂರ್ವಭಾವಿ ಪರೀಕ್ಷೆಯ ಪರಿಷ್ಕೃತ ಕೀ ಉತ್ತರ ಪ್ರಕಟ

Published : Jan 31, 2025, 09:07 AM IST
KPSC New 01

ಸಾರಾಂಶ

ಕರ್ನಾಟಕ ಲೋಕಸೇವಾ ಆಯೋಗವು ಇತ್ತೀಚೆಗೆ ನಡೆಸಿದ್ದ 384 ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಪೂರ್ವಭಾವಿ ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳನ್ನು ಗುರುವಾರ ಬಿಡುಗಡೆ ಮಾಡಿದೆ. ಜೊತೆಗೆ ಕನ್ನಡ ಪ್ರಶ್ನೆ ಪತ್ರಿಕೆಯ ಲೋಪದೋಷಗಳಿಗೆ ಒಟ್ಟು 5 ಕೃಪಾಂಕ ನೀಡಿದೆ.

 ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗವು ಇತ್ತೀಚೆಗೆ ನಡೆಸಿದ್ದ 384 ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಪೂರ್ವಭಾವಿ ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳನ್ನು ಗುರುವಾರ ಬಿಡುಗಡೆ ಮಾಡಿದೆ. ಜೊತೆಗೆ ಕನ್ನಡ ಪ್ರಶ್ನೆ ಪತ್ರಿಕೆಯ ಲೋಪದೋಷಗಳಿಗೆ ಒಟ್ಟು 5 ಕೃಪಾಂಕ ನೀಡಿದೆ.

ಕನ್ನಡ ಪ್ರಶ್ನೆ ಪತ್ರಿಕೆಯಲ್ಲಿ ಅನೇಕ ಲೋಪದೋಷಗಳು ಕಂಡುಬಂದಿವೆ ಎಂದು ಅಭ್ಯರ್ಥಿಗಳು ಆಕ್ಷೇಪಿಸಿದ್ದರೂ ಕೇವಲ 5 ಪ್ರಶ್ನೆಗಳಿಗೆ ಮಾತ್ರ ಕೃಪಾಂಕವನ್ನು ಕೆಪಿಎಸ್ಸಿ ನೀಡಿದೆ. ಇದು ಅಭ್ಯರ್ಥಿಗಳಲ್ಲಿ ಅಸಮಾಧಾನ ಮೂಡಿಸಿದೆ.

ಕೀ ಉತ್ತರಗಳಿಗೆ ಅಭ್ಯರ್ಥಿಗಳಿಂದ ಬಂದ ಆಕ್ಷೇಪಣೆಗಳನ್ನು ಆಧರಿಸಿ ಪತ್ರಿಕೆ -1ರಲ್ಲಿ ಒಟ್ಟು ಏಳು ಪ್ರಶ್ನೆಗಳಿಗೆ ಕೀ ಉತ್ತರಗಳನ್ನು ಪರಿಷ್ಕರಿಸಲಾಗಿದೆ. ಪತ್ರಿಕೆ -2ರಲ್ಲಿ 6 ಪ್ರಶ್ನೆಗಳ ಕೀ ಉತ್ತರಗಳನ್ನು ಪರಿಷ್ಕರಿಸಿದೆ. ಜೊತೆಗೆ ಪತ್ರಿಕೆ 1, ಪತ್ರಿಕೆ 2ರಲ್ಲಿ ಕ್ರಮವಾಗಿ ತಲಾ 3 ಮತ್ತು 2 ಕೃಪಾಂಕ ನೀಡಲಾಗಿದೆ. ಪ್ರಶ್ನೆಪತ್ರಿಕೆಯಲ್ಲಿನ ಲೋಪದೋಷಗಳನ್ನು ಪ್ರಶ್ನಿಸಿ ಅನೇಕ ಅಭ್ಯರ್ಥಿಗಳು ಈಗಾಗಲೇ ಹೈಕೋರ್ಟ್‌ ಹಾಗೂ ಕರ್ನಾಟಕ ಆಡಳಿತ ನ್ಯಾಯಾಧಿಕರಣ(ಕೆಎಟಿ) ಮೊರೆ ಹೋಗಿದ್ದು ವಿಚಾರಣೆ ನಡೆಯುತ್ತಿದೆ. ಅಲ್ಲದೆ, ಕನ್ನಡ ಅಭ್ಯರ್ಥಿಗಳಿಗೆ ಮರು ಪರೀಕ್ಷೆಯಲ್ಲಿ ಅನ್ಯಾಯವಾಗಿದೆ ಎಂದು ಅನೇಕ ಸಾಹಿತಿಗಳು, ಅಭ್ಯರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದರು. ಇದನ್ಯಾವುದನ್ನೂ ಪರಿಗಣಿಸಿಲ್ಲ ಕೆಪಿಎಸ್ಸಿ ತನ್ನ ಪರೀಕ್ಷಾ ಪ್ರಕ್ರಿಯೆಯನ್ನು ಎಂದಿನಂತೆ ಮುಂದುವರೆಸಿದೆ.

PREV

Recommended Stories

50 ಕೋಟಿ ರು. ವಿಶೇಷ ಅನುದಾನದಲ್ಲಿ ಅಭಿವೃದ್ಧಿ ಕಾರ್ಯಕ್ಕೆ ಕ್ರಮ: ಸಚಿವ ಮುನಿಯಪ್ಪ
ತಾಲೂಕು ಕಸಾಪದಲ್ಲಿ ಸ್ವಾತಂತ್ರ್ಯ ಸಂಭ್ರಮ