ಕೆಪಿಎಸ್ಸಿ ಅಕ್ರಮ: ದಿಲ್ಲಿಯಲ್ಲಿ ಬೀದರ್‌ ವ್ಯಕ್ತಿ ಸಿಐಡಿ ವಶಕ್ಕೆ

Published : Aug 31, 2026, 05:31 AM IST
KPSC

ಸಾರಾಂಶ

ಕೆಪಿಎಸ್ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಮತ್ತೊಬ್ಬ ಆರೋಪಿ, ಭಾಲ್ಕಿ ಮೂಲದ ಬಸವರಾಜ್ ಕನ್ನಾಳೆಯನ್ನು ಸಿಐಡಿ ಅಧಿಕಾರಿಗಳು ದೆಹಲಿಯಲ್ಲಿ ವಶಕ್ಕೆ ಪಡೆದಿದ್ದಾರೆ. ಈತ ರಾಷ್ಟ್ರೀಯ ಪಕ್ಷವೊಂದರ ಮುಖಂಡ ಎಂದು ತಿಳಿದು ಬಂದಿದೆ.

ಬೆಂಗಳೂರು : ಕೆಪಿಎಸ್ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಮತ್ತೊಬ್ಬ ಆರೋಪಿ, ಭಾಲ್ಕಿ ಮೂಲದ ಬಸವರಾಜ್ ಕನ್ನಾಳೆಯನ್ನು ಸಿಐಡಿ ಅಧಿಕಾರಿಗಳು ದೆಹಲಿಯಲ್ಲಿ ವಶಕ್ಕೆ ಪಡೆದಿದ್ದಾರೆ. ಈತ ರಾಷ್ಟ್ರೀಯ ಪಕ್ಷವೊಂದರ ಮುಖಂಡ ಎಂದು ತಿಳಿದು ಬಂದಿದೆ.

ಸಿಐಡಿ ಅಧಿಕಾರಿಗಳು ಭಾನುವಾರ ಕಾರ್ಯಾಚರಣೆ

ಸಿಐಡಿ ಅಧಿಕಾರಿಗಳು ಭಾನುವಾರ ಕಾರ್ಯಾಚರಣೆ ನಡೆಸಿ ಕನ್ನಾಳೆಯನ್ನು ವಶಕ್ಕೆ ಪಡೆದಿದ್ದು, ಸೋಮವಾರ ನಗರಕ್ಕೆ ಕರೆತಂದು ವಿಚಾರಣೆ ನಡೆಸಿ ಬಂಧಿಸುವ ಸಾಧ್ಯತೆ ಇದೆ. ಈತ ಪಶುವೈದ್ಯಾಧಿಕಾರಿಗಳ ನೇಮಕಾತಿ ವೇಳೆ ಆಯ್ಕೆ ಆಗಿರುವ ಅಭ್ಯರ್ಥಿಗಳ ಜತೆ ಸಂಪರ್ಕದಲ್ಲಿದ್ದ.

ವಿಚಾರಣೆ ನಡೆಸಿದ ವೇಳೆ ಬಸವರಾಜ್ ಕನ್ನಾಳೆ ಹೆಸರು ಬಾಯ್ಬಿಟ್ಟಿದ್ದರು.

ಆಯ್ಕೆ ಆದ ಅಭ್ಯರ್ಥಿಗಳನ್ನು ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸಿದ ವೇಳೆ ಬಸವರಾಜ್ ಕನ್ನಾಳೆ ಹೆಸರು ಬಾಯ್ಬಿಟ್ಟಿದ್ದರು. ಅಭ್ಯರ್ಥಿಗಳ ಹೇಳಿಕೆ ಆಧರಿಸಿ ಬಸವರಾಜ್ ಕನ್ನಾಳೆಯನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈತನ ವಿಚಾರಣೆಯಿಂದ ಇನ್ನಷ್ಟು ಮಹತ್ವದ ಮಾಹಿತಿ ಹೊರಬೀಳುವ ನಿರೀಕ್ಷೆ ಇದೆ.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ಇಡ್ಲಿ ಮಾರುವ ಬೆಂಗಳೂರಿನ ನಿಂಗಮ್ಮಗೆ ಮೋದಿ ಶಹಬ್ಬಾಸ್!
ಬೆಂ.ಗ್ರಾಮಾಂತರದಲ್ಲಿ ಶೇ.15ರಷ್ಟು ಮಳೆ ಕೊರತೆ