ದೀಪಾವಳಿ ಹಬ್ಬಕ್ಕಾಗಿ ಕೆಎಸ್ಸಾರ್ಟಿಸಿ 2600 ಹೆಚ್ಚುವರಿ ಬಸ್‌ ಕಾರ್‍ಯಾ ಚರಣೆ

Published : Nov 01, 2026, 10:08 AM IST
KSRTC

ಸಾರಾಂಶ

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಸಾಲುಸಾಲು ರಜೆಯಿರುವ ಕಾರಣ ಬೆಂಗಳೂರಿನಿಂದ ಬೇರೆ ನಗರಗಳಿಗೆ ತೆರಳುವವರಿಗೆ ಅನುಕೂಲವಾಗಲು ಕೆಎಸ್‌ಆರ್‌ಟಿಸಿ ನ.6ರಿಂದ 8ರವರೆಗೆ 2600 ಹೆಚ್ಚುವರಿ ವಿಶೇಷ ಬಸ್‌ಗಳ ಕಾರ್ಯಾಚರಣೆ ಮಾಡಲಿದೆ.

ಬೆಂಗಳೂರು: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಸಾಲುಸಾಲು ರಜೆಯಿರುವ ಕಾರಣ ಬೆಂಗಳೂರಿನಿಂದ ಬೇರೆ ನಗರಗಳಿಗೆ ತೆರಳುವವರಿಗೆ ಅನುಕೂಲವಾಗಲು ಕೆಎಸ್‌ಆರ್‌ಟಿಸಿ ನ.6ರಿಂದ 8ರವರೆಗೆ 2600 ಹೆಚ್ಚುವರಿ ವಿಶೇಷ ಬಸ್‌ಗಳ ಕಾರ್ಯಾಚರಣೆ ಮಾಡಲಿದೆ.

ವಾರಾಂತ್ಯ ಮತ್ತು ದೀಪಾವಳಿ ಹಬ್ಬದ ಕಾರಣ

ವಾರಾಂತ್ಯ ಮತ್ತು ದೀಪಾವಳಿ ಹಬ್ಬದ ಕಾರಣದಿಂದಾಗಿ ನ.7ರಿಂದ 10ರವರೆಗೆ ದೀರ್ಘ ರಜೆಯಿದೆ. ಹೀಗಾಗಿ ಕೆಎಸ್ಸಾರ್ಟಿಸಿ ನ.6ರಿಂದ 8ರವರೆಗೆ ಬೆಂಗಳೂರಿನಿಂದ ವಿವಿಧ ಕಡೆಗಳಿಗೆ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದೆ. ಹಾಗೆಯೇ, ಆ ಬಸ್‌ಗಳು ನ.10 ಮತ್ತು 11ರಂದು ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಕಾರ್ಯಾಚರಣೆ ಮಾಡಲಿವೆ.

ಮುಂಗಡ ಟಿಕೆಟ್‌ ಕಾಯ್ದಿರಿಸಿದಲ್ಲಿ ಪ್ರಯಾಣ ದರದಲ್ಲಿ ಶೇ.5ರಷ್ಟು ರಿಯಾಯಿತಿ

ನಾಲ್ಕು ಅಥವಾ ಹೆಚ್ಚಿನ ಪ್ರಯಾಣಿಕರು ಒಟ್ಟಿಗೆ ಮುಂಗಡ ಟಿಕೆಟ್‌ ಕಾಯ್ದಿರಿಸಿದಲ್ಲಿ ಪ್ರಯಾಣ ದರದಲ್ಲಿ ಶೇ.5ರಷ್ಟು ರಿಯಾಯಿತಿ ನೀಡಲಾಗುತ್ತದೆ ಹಾಗೂ ಹೋಗುವ ಮತ್ತು ವಾಪಸ್‌ ಬರುವ ಟಿಕೆಟ್‌ ಅನ್ನು ಒಟ್ಟಿಗೆ ಕಾಯ್ದಿರಿಸಿದರೆ ಪ್ರಯಾಣ ದರದಲ್ಲಿ ಶೇ.10ರಷ್ಟು ರಿಯಾಯಿತಿ ನೀಡಲಾಗುತ್ತದೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್‌ಗಳಿಗೆ ಮುಂಗಡ ಆಸನ ಕಾಯ್ದಿರಿಸುವ ಸೌಲಭ್ಯ ಕಲ್ಪಿಸಲಾಗಿದ್ದು, www.ksrtc.karnataka.gov.inನಲ್ಲಿ ಮುಂಗಡ ಟಿಕೆಟ್‌ ಪಡೆಯಬಹುದಾಗಿದೆ. ಈ ವಿಶೇಷ ಬಸ್‌ಗಳು ಬೆಂಗಳೂರಿನ ಕೆಂಪೇಗೌಡ ಬಸ್‌ ನಿಲ್ದಾಣ, ಮೈಸೂರು ರಸ್ತೆ ಬಸ್‌ ನಿಲ್ದಾಣ, ಶಾಂತಿನಗರ ಟಿಟಿಎಂಸಿ ನಿಲ್ದಾಣಗಳಿಂದ ತೆರಳಲಿವೆ.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ರೈತರ ಭೂಮಿ ರಕ್ಷಣೆ 6ನೇ ಗ್ಯಾರಂಟಿ : ಡಿಕೆ
ಹಾಲು ದರ ಏರಿಕೆ ದೀಪಾವಳಿ ಗಿಫ್ಟ್‌ : ವಿಜಯೇಂದ್ರ