ಪಾರದರ್ಶಕ ವಿಚಾರಣೆ ನಡೆಯಲಿ, ನ್ಯಾಯ ಸಿಗಲಿ: ಉಪೇಂದ್ರ

Published : Jun 18, 2024, 11:12 AM IST
Upendra

ಸಾರಾಂಶ

‘ರೇಣುಕಾಸ್ವಾಮಿ ಕೊಲೆ ಪ್ರಕರಣ ಹಾಗೂ ದರ್ಶನ್‌ ಬಂಧನದ ವಿಚಾರದಲ್ಲಿ ಪಾರದರ್ಶಕ ವಿಚಾರಣೆ ಆಗಲಿ. ಆ ಮೂಲಕ ನ್ಯಾಯ ಸಿಗಲಿ’ ಎಂದು ನಟ ಉಪೇಂದ್ರ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರು : ‘ರೇಣುಕಾಸ್ವಾಮಿ ಕೊಲೆ ಪ್ರಕರಣ ಹಾಗೂ ದರ್ಶನ್‌ ಬಂಧನದ ವಿಚಾರದಲ್ಲಿ ಪಾರದರ್ಶಕ ವಿಚಾರಣೆ ಆಗಲಿ. ಆ ಮೂಲಕ ನ್ಯಾಯ ಸಿಗಲಿ’ ಎಂದು ನಟ ಉಪೇಂದ್ರ ಅಭಿಪ್ರಾಯಪಟ್ಟಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ‘ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ದರ್ಶನ್‌ ಬಂಧನ, ರೇಣುಕಾಸ್ವಾಮಿ ಕೊಲೆ ಪ್ರಕರಣ ಹಾಗೂ ಅದರ ವಿಚಾರಣೆಯನ್ನು ಇಡೀ ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಬೆರಗಾಗಿ ನೋಡುತ್ತಿದೆ.

ಈ ಹೈ ಪ್ರೊಫೈಲ್‌ ಕೇಸಿನ ವಿಚಾರಣೆಯಲ್ಲಿ ನಿಸ್ಪಕ್ಷಪಾತವಾದ ನಿರ್ಣಯ ಮತ್ತು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ. ರೇಣುಕಾಸ್ವಾಮಿ ಕುಟುಂಬದಲ್ಲಿ, ಜನರಲ್ಲಿ, ಟೀವಿ ಮಾಧ್ಯಮಗಳಲ್ಲಿ ಹಾಗೂ ದರ್ಶನ್ ಅಭಿಮಾನಿಗಳಲ್ಲಿ ಆತಂಕ, ಅನುಮಾನಗಳು ಕಾಡುತ್ತಿದೆ, ಊಹಾಪೋಹಗಳು ಹುಟ್ಟಿಕೊಳ್ಳುತ್ತಿದೆ. ಯಾಕೆಂದರೆ ಯಾವುದೇ ಕೇಸ್ ಆದರೂ ಆ ಕೇಸಿನ ವಿಚಾರಣೆಯ ವೀಡಿಯೋ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಆಗಾಗ ಪೋಲೀಸರು ಸಂಬಂಧಪಟ್ಟ ವ್ಯಕ್ತಿಗಳ ಕುಟುಂಬದವರ ಜೊತೆ ಹಂಚಿಕೊಳ್ಳಬೇಕು ಮತ್ತು ಅದು ಕಾನೂನಾಗಬೇಕು’ ಎಂದಿದ್ದಾರೆ.

---------------

‘ಈ ಹಿಂದೆ ಪೊಲೀಸರು ವಿಚಾರಣೆಯ ವಿವರ ಬರೆದು ದಾಖಲಿಸುತ್ತಿದ್ದರು. ಈಗ ತಂತ್ರಜ್ಞಾನ ಮುಂದುವರೆದಿದ್ದು, ಎಲ್ಲವನ್ನೂ ವೀಡಿಯೋ ರೆಕಾರ್ಡ್ ಮತ್ತು ಲೈವ್ ಸ್ಟ್ರೀಮಿಂಗ್ ಮಾಡಬಹುದು. ಅದೇ ರೀತಿ ಒಬ್ಬ ಸಾರ್ವಜನಿಕ ವ್ಯಕ್ತಿಯ ಬಗ್ಗೆ ಕೇಸ್ ಆಗಿದ್ದರೆ ಆ ಕೇಸಿನ ವಿಚಾರಣೆಯ ವಿಡಿಯೋ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಪೋಲಿಸರು ಆಗಾಗ ಸಾರ್ವಜನಿಕವಾಗಿ ತೆರೆದಿಡಬೇಕು. ಒಬ್ಬ ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗಿಯೇ ಸಂಪೂರ್ಣ ಪಾರದರ್ಶಕತೆಯಿಂದ ಆಗಬೇಕು. ಸಾಕ್ಷಿ ನಾಶ, ಪ್ರಭಾವಿಗಳ ಹಸ್ತಕ್ಷೇಪ, ಭ್ರಷ್ಟಾಚಾರ ಇವಕ್ಕೆಲ್ಲಾ ತೆರೆ ಎಳೆದಂತಾಗುತ್ತದೆ.

ಆಗ ರೇಣುಕಾಸ್ವಾಮಿ ಕುಟುಂಬಕ್ಕೆ, ಜನರಿಗೆ, ಟೀವಿ ಮಾಧ್ಯಮಗಳಿಗೆ ಮತ್ತು ದರ್ಶನ್ ಅಭಿಮಾನಿಗಳಿಗೆ ಮನಸಿನಲ್ಲಿ ಗೊಂದಲಗಳಿಲ್ಲದೆ ಪೋಲೀಸ್ ಮತ್ತು ಟೀವಿ ಮಾಧ್ಯಮಗಳ ಬಗ್ಗೆ ಇನ್ನೂ ಗೌರವ ಹೆಚ್ಚಾಗುತ್ತದೆ ಮತ್ತು ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಬರುತ್ತದೆ’ ಎಂದು ಉಪೇಂದ್ರ ತಿಳಿಸಿದ್ದಾರೆ.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.

Recommended Stories

ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ
ಜಾಲಹಳ್ಳಿ ಕೆಳಸೇತುವೆ ನಿರ್ಮಾಣ ಸಂಬಂಧ ಶಾಸಕರ ಸಭೆ-ಮಿ. ಮುನಿ ಪ್ರಶ್ನೆಗೆ ಉತ್ತರಿಸಲ್ಲ: ಡಿಸಿಎಂ