ತಪ್ಪು ಮಾಡಿಲ್ಲ, ತನಿಖೆಗೆ ಸಿದ್ಧ: ಶರಣಪ್ರಕಾಶ್‌

ಸಾರಾಂಶ

‘ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಚುನಾವಣೆ ನೀತಿ ಸಂಹಿತೆ ವೇಳೆ ನಾನು ನನ್ನ ಕಚೇರಿಗೆ ಹೋಗಿಯೇ ಇಲ್ಲ. ಈ ಬಗ್ಗೆ ಯಾವುದೇ ತನಿಖೆಗೂ ನಾನು ಸಿದ್ಧ’

ಬೆಂಗಳೂರು: ‘ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಚುನಾವಣೆ ನೀತಿ ಸಂಹಿತೆ ವೇಳೆ ನಾನು ನನ್ನ ಕಚೇರಿಗೆ ಹೋಗಿಯೇ ಇಲ್ಲ

. ಈ ಬಗ್ಗೆ ಯಾವುದೇ ತನಿಖೆಗೂ ನಾನು ಸಿದ್ಧ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್‌ ಪ್ರಕಾಶ್‌ ಪಾಟೀಲ್‌ ಹೇಳಿದ್ದಾರೆ. ಇಂತಹ ಆರೋಪವನ್ನು ನಾನು ಕನಸಿನಲ್ಲೂ ಊಹಿಸಿರಲಿಲ್ಲ. ನನ್ನ ಮೇಲಿನ ಸಾಕ್ಷ್ಯ ನಾಶ ಆರೋಪ ಅಪಹಾಸ್ಯ ಎಂದೇ ಹೇಳಬೇಕು. 

ನನ್ನ ಮೇಲಿನ ಆರೋಪದ ಬಗ್ಗೆ ಮುಕ್ತ ಹಾಗೂ ನ್ಯಾಯಸಮ್ಮತ ತನಿಖೆಗೆ ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ.

Share this article