;Resize=(412,232))
ಬೆಂಗಳೂರು : ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರೀಕ್‌ನ ತಪ್ಪೊಪ್ಪಿಗೆ ಅರ್ಜಿಯನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ವಿಶೇಷ ನ್ಯಾಯಾಲಯ ಈ ಹಿಂದೆಯೇ ಮಾನ್ಯ ಮಾಡಿದ್ದು, ಏ.27ರಂದು ಶಿಕ್ಷೆಯ ಪ್ರಮಾಣ ಪ್ರಕಟಿಸಲಿದೆ.
ಎನ್‌ಐಎ ವಿಶೇಷ ನ್ಯಾಯಾಲಯದಲ್ಲಿ ಶನಿವಾರ ನಡೆದ ವಿಚಾರಣೆಯಲ್ಲಿ ವಿಶೇಷ ಸರ್ಕಾರಿ ಅಭಿಯೋಜಕ ಪ್ರಸನ್ನ ಕುಮಾರ್ ಅವರು, ಆರೋಪಿಗೆ ಅಂತಿಮವಾಗಿ ಕಠಿಣ ಶಿಕ್ಷೆ ವಿಧಿಸುವಂತೆ ನ್ಯಾಯಾಲಯದಲ್ಲಿ ವಾದ ಮಂಡಿಸಿದರು. ವಾದ ಆಲಿಸಿದ ಕೋರ್ಟ್ ಏ.27ಕ್ಕೆ ಶಿಕ್ಷೆಯ ಪ್ರಮಾಣ ಪ್ರಕಟಿಸುವುದಾಗಿ ತಿಳಿಸಿದೆ.
ಕಳೆದ 3 ತಿಂಗಳ ಹಿಂದೆಯೇ ಆರೋಪಿ ಶಾರೀಕ್ ತಾನು ಕೃತ್ಯ ಎಸಗಿದ್ದಾಗಿ ತಪ್ಪೊಪ್ಪಿಕೊಂಡು ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಕೂಡ ಸಲ್ಲಿಸಿದ್ದ. ಈ ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸಿತ್ತು. ಈ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಎನ್‌ಐಎ ಅಧಿಕಾರಿಗಳು ತನಿಖೆ ನಡೆಸಿ 2024ರಲ್ಲಿ ಆರೋಪಿಗಳಾದ ಶಾರೀಕ್ ಮತ್ತು ಸೈಯದ್ ಯಾಸೀನ್ ವಿರುದ್ಧ ದೋಷಾರೋಪಪಟ್ಟಿ ಸಲ್ಲಿಸಿದ್ದರು.
ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2022ರ ನ.19ರಂದು ಸಂಜೆ 4.40 ಸುಮಾರಿಗೆ ಶಾರೀಕ್ ಆಟೋದಲ್ಲಿ ತೆರಳುವಾಗ ಕುಕ್ಕರ್ ಸ್ಫೋಟಗೊಂಡಿತ್ತು. ಶಾರೀಕ್ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಕೂಡ ಪಡೆದಿದ್ದ.