ಮಾವು ಬೆಳೆ ನಷ್ಟ: ಕೇಂದ್ರದ ಜತೆ ಚರ್ಚೆಗೆ ಕೃಷಿ ಸಚಿವಗೆ ಸಿಎಂ ಸೂಚನೆ

Published : Jun 20, 2025, 10:09 AM IST
Karnataka CM Siddaramaiah and DCM DK Shivakumar arrive in Delhi (Photo/ANI)

ಸಾರಾಂಶ

ರಾಜ್ಯದಲ್ಲಿ ಮಾವು ದರ ಕುಸಿತ, ಮಾವು ಬೆಳೆಗಾರರಿಗೆ ಆಗಿರುವ ನಷ್ಟದ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆದಿದ್ದು, ಪರಿಹಾರ ನೀಡುವಂತೆ ಕೇಂದ್ರ ಕೃಷಿ ಸಚಿವರೊಂದಿಗೆ ಚರ್ಚಿಸಲು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

 ಬೆಂಗಳೂರು :  ರಾಜ್ಯದಲ್ಲಿ ಮಾವು ದರ ಕುಸಿತ, ಮಾವು ಬೆಳೆಗಾರರಿಗೆ ಆಗಿರುವ ನಷ್ಟದ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆದಿದ್ದು, ಪರಿಹಾರ ನೀಡುವಂತೆ ಕೇಂದ್ರ ಕೃಷಿ ಸಚಿವರೊಂದಿಗೆ ಚರ್ಚಿಸಲು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಅಗತ್ಯಬಿದ್ದರೆ ದೆಹಲಿಗೆ ನಿಯೋಗ ತೆರಳಿ ಸಾಧ್ಯವಾದಷ್ಟು ಹೆಚ್ಚು ಪರಿಹಾರ ಪಡೆಯಲು ಪ್ರಯತ್ನಿಸಿ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಮಾವು ಬೆಳೆ ಕುಸಿತ ಉಂಟಾಗಿರುವುದು ಹಾಗೂ ಆಂಧ್ರದ ಚಿತ್ತೂರಿನಲ್ಲಿ ರಾಜ್ಯದ ತೋತಾಪುರ ಮಾವಿಗೆ ನಿರ್ಬಂಧ ವಿಧಿಸಿರುವ ಬಗ್ಗೆ ತೀವ್ರ ಚರ್ಚೆ ನಡೆಸಲಾಯಿತು. ರಾಜ್ಯದಲ್ಲಿ ಮಾವು ಬೆಲೆ ತೀವ್ರ ಕುಸಿದಿದೆ. ಕೂಡಲೇ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಕೆ.ಎಚ್. ಮುನಿಯಪ್ಪ ಸೇರಿ ಕೆಲ ಸಚಿವರು ಒತ್ತಾಯಿಸಿದರು.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೃಷಿ ಸಚಿವ ಚಲುವರಾಯಸ್ವಾಮಿ ಹಾಗೂ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಕೇಂದ್ರ ಕೃಷಿ ಸಚಿವರೊಂದಿಗೆ ಚರ್ಚಿಸಿರುವುದಾಗಿ ತಿಳಿದುಬಂದಿದೆ.

ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್‌ ಅವರಿಗೆ ಮಾವು ಬೆಳೆ ಹಾನಿಯಾದ ಮೇಲೆ ಹೇಗೆ ಪರಿಹಾರ ನೀಡುತ್ತೀರಿ ಎಂದು ಸುದ್ದಿಗಾರರು ಪ್ರಶ್ನಿಸಿದರು. ಅದಕ್ಕೆ ಅವರು, ಮಾವು ಬೆಳೆ ಕೊಳೆತು ಹೋದರೂ ಪರಿಹಾರ ನೀಡಬಹುದು. ಮಾವು ಬೆಳೆದಿರುವ ಪ್ರದೇಶ ಹಾಗೂ ಗಿಡಗಳ ಸಂಖ್ಯೆ ಆಧಾರದ ಮೇಲೆ ರೈತರಿಗೆ ಪರಿಹಾರ ನೀಡಲಾಗುತ್ತದೆ. ಹೀಗಾಗಿ ಪರಿಹಾರ ನೀಡಲು ಗೊಂದಲ ಆಗುವುದಿಲ್ಲ ಎಂದು ತಿಳಿಸಿದರು.

, ಮಾವು ಬೆಳೆಗಾರರ ವಿಚಾರವಾಗಿ ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆಯಾಗಿದೆ. ಕೋಲಾರ, ಬೆಂಗಳೂರು ಗ್ರಾಮೀಣ ಭಾಗದವರು ಹಾಗೂ ಸಂತೋಷ್ ಲಾಡ್ ಅವರು ಮುಂಬೈ ಕರ್ನಾಟಕ ಭಾಗದ ರೈತರ ಸಮಸ್ಯೆಯ ಬಗ್ಗೆ ಪ್ರಸ್ತಾಪಿಸಿ ಚರ್ಚಿಸಿದರು.

ಈ ವೇಳೆ ನಷ್ಟ ಉಂಟಾಗಿರುವ ರೈತರಿಗೆ ಪರಿಹಾರ ನೀಡಲು ಕೇಂದ್ರ ಕೃಷಿ ಸಚಿವರೊಂದಿಗೆ ಚರ್ಚಿಸಲು ಮುಖ್ಯಮಂತ್ರಿಗಳು ಕೃಷಿ ಸಚಿವರಿಗೆ ಹಾಗೂ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದ್ದಾರೆ. ಅಗತ್ಯ ಬಿದ್ದರೆ ದೆಹಲಿಗೆ ಹೋಗಿ ಭೇಟಿ ಮಾಡಲು ಹಾಗೂ ಸಾಧ್ಯವಾದಷ್ಟು ಹೆಚ್ಚಿನ ಪರಿಹಾರಕ್ಕಾಗಿ ಕೇಂದ್ರವನ್ನು ಒತ್ತಾಯಿಸಬೇಕೆಂದು ಸೂಚನೆ ನೀಡಿದ್ದಾರೆ ಎಂದು ಎಚ್.ಕೆ. ಪಾಟೀಲ್ ತಿಳಿಸಿದರು.

ಚಿತ್ತೂರು ಭಾಗದಲ್ಲಿ ರಾಜ್ಯದ ಮಾವಿನ ಹಣ್ಣುಗಳ ಪ್ರವೇಶಕ್ಕೆ ನಿರಾಕರಿಸಿರುವ ಬಗ್ಗೆ ಸಚಿವ ಕೆ.ಎಚ್.ಮುನಿಯಪ್ಪ ಪ್ರಸ್ತಾಪ ಮಾಡಿದರು. ಈ ಬಗ್ಗೆಯೂ ಚರ್ಚಿಯಾಯಿತು ಎಂದಷ್ಟೇ ಹೇಳಿದರು.

PREV
Read more Articles on

Recommended Stories

ಅಕ್ರಮ ತಡೆಗೆ ‘ಡಿಜಿಟಲ್‌’ ಭೂಸ್ವಾಧೀನ: ಬೈರೇಗೌಡ
ಕಳೆದ ವರ್ಷದ ಅತಿಥಿ ಉಪನ್ಯಾಸಕರನ್ನೇ ಸದ್ಯ ಮುಂದುವರೆಸಲು ಸರ್ಕಾರ ಆದೇಶ