ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಆತ್ಮ*ತ್ಯೆ: 5 ಲಕ್ಷ ಪರಿಹಾರ?

Published : Feb 05, 2026, 07:10 AM IST
Money

ಸಾರಾಂಶ

ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳದಿಂದ ಆತ್ಮ8ತ್ಯೆ ಮಾಡಿಕೊಂಡ ವ್ಯಕ್ತಿಗಳ ಅವಲಂಬಿತರಿಗೆ ಪರಿಹಾರ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸುವ ಸಾಧ್ಯತೆಯಿದೆ.

  ಬೆಂಗಳೂರು :  ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳದಿಂದ ಆತ್ಮ8ತ್ಯೆ ಮಾಡಿಕೊಂಡ ವ್ಯಕ್ತಿಗಳ ಅವಲಂಬಿತರಿಗೆ ಪರಿಹಾರ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸುವ ಸಾಧ್ಯತೆಯಿದೆ.

2023ರಲ್ಲಿ 8 ಮಂದಿ, 2024ರಲ್ಲಿ 6 ಮಂದಿ, 2025ರಲ್ಲಿ 24 ಮಂದಿ ಸಾವಿಗೀಡಾಗಿದ್ದರು. ಈ ರೀತಿಯ ಕಿರುಕುಳ ತಪ್ಪಿಸಲು ಕರ್ನಾಟಕ ಕಿರುಸಾಲ ಬಲವಂತದ ಕ್ರಮಗಳ ಪ್ರತಿಬಂಧಕ ಕಾಯ್ದೆ -2025 ಜಾರಿಗೆ ತರಲಾಗಿದೆ. ಆದರೂ ಮೈಕ್ರೋ ಫೈನಾನ್ಸ್‌ಗಳ ಕಿರುಕುಳದಿಂದ ಯಾರಾದರೂ ಸಾವಿಗೀಡಾದರೆ ಅವರ ಅವಲಂಬಿತರಿಗೆ 5 ಲಕ್ಷ ರು. ಪರಿಹಾರ ನೀಡಲು ನಿರ್ಧರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಲ್ಪಸಂಖ್ಯಾತರ ಸಾಲಕ್ಕೆ ಒಟಿಎಸ್:

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿ 2013-14ರಿಂದ 2018-19ನೇ ಸಾಲಿನವರೆಗೆ ವಿವಿಧ ಯೋಜನೆಯಡಿ ನೀಡಲಾಗಿರುವ ಸಾಲವನ್ನು ಒಟಿಎಸ್‌ ಯೋಜನೆ ಮೂಲಕ ವಸೂಲಾತಿಗೆ ತೀರ್ಮಾನಿಸಲಿದ್ದು, ಬಡ್ಡಿ ರಿಯಾಯಿತಿ ನೀಡಿ ಸಾಲ ವಸೂಲಿ ಮಾಡುವ ಸಾಧ್ಯತೆಯಿದೆ.

ಭೂ ವರಾಹ ಯೋಜನೆಯಡಿ 328 ದೇವಾಲಯಗಳ ಆಸ್ತಿಗಳ ಒತ್ತುವರಿ ತೆರವುಗೊಳಿಸಿ ಸಂರಕ್ಷಿಸಿ ಸ್ಥಿರಾಸ್ತಿಗಳನ್ನು ದಾಖಲೀಕರಣಗೊಳಿಸಲು ಅಂಗೀಕಾರ ನೀಡಲಾಗುತ್ತದೆ. ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಐದು ನಗರ ಪಾಲಿಕೆಗಳಲ್ಲಿ ಸಾರಥಿ ಯೋಜನೆಯಡಿ ಆಟೋ ರಿಕ್ಷಾ, ಕಾರು ಖರೀದಿಗೆ 19.18 ಕೋಟಿ ರು. ನೀಡಲು ಆಡಳಿತಾತ್ಮಕ ಅನುಮೋದನೆ, ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ ತಿದ್ದುಪಡಿ ವಿಧೇಯಕ-2026 ಹಾಗೂ ಕರ್ನಾಟಕ ಪೊಲೀಸ್ ತಿದ್ದುಪಡಿ ವಿಧೇಯಕ-2026 ಬಗ್ಗೆ ಚರ್ಚಿಸಿ ನಿರ್ಧರಿಸಲಿದ್ದಾರೆ ಎಂದು ತಿಳಿದುಬಂದಿದೆ.

ಎಸ್‌ಐಆರ್‌ ಬಗ್ಗೆ ಮಹತ್ವದ ಚರ್ಚೆ

ಚುನಾವಣಾ ಆಯೋಗ ನಡೆಸಲುದ್ದೇಶಿಸಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಕುರಿತು ಮಾಹಿತಿ ಆಯೋಗ ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಕ್ಕೆ ಸಮಗ್ರ ಮಾಹಿತಿ ಸಲ್ಲಿಸಲಿದೆ. ಈ ವೇಳೆ ಯಾವ ರೀತಿಯ ಚರ್ಚೆ ನಡೆಯಲಿದೆ ಎಂಬುದು ಕುತೂಹಲ ಮೂಡಿಸಿದೆ.

ಈ ಎಸ್‌ಐಆರ್ ಪರಿಷ್ಕರಣೆ ಮುಂದಿನ ಎಲ್ಲಾ ಚುನಾವಣೆಗಳಿಗೂ ಅನ್ವಯವಾಗುತ್ತದೆ. ಹೀಗಾಗಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಹೇಗಿರಲಿದೆ? ಅದರ ಪರಿಣಾಮಗಳೇನು ಎಂಬುದು ತೀವ್ರ ಕುತೂಹಲ ಕೆರಳಿಸಿವೆ.

ಮೂಲಗಳ ಪ್ರಕಾರ ಸಚಿವ ಸಂಪುಟ ಸಭೆಯಲ್ಲಿ ಚುನಾವಣಾ ಆಯೋಗವು ಮಾಹಿತಿ ಮಾತ್ರ ಸಲ್ಲಿಸಲಿದೆ. ಉಳಿದಂತೆ ಯಾವುದೇ ನಿರ್ಧಾರ ತೆಗೆದುಕೊಳ್ಳಲು ರಾಜ್ಯ ಸರ್ಕಾರಕ್ಕೆ ಅಧಿಕಾರ ಇರುವುದಿಲ್ಲ ಎಂದು ತಿಳಿದುಬಂದಿದೆ.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ಬೆಂಗಳೂರು ಕೆಮಿಕಲ್‌ ಫ್ಯಾಕ್ಟರಿಗಳ ಮೇಲೀಗ ಪೊಲೀಸರಿಂದ ಅಲರ್ಟ್‌
2000 ಬೋಧಕ ಹುದ್ದೆ ಭರ್ತಿಗೆ ಅಸ್ತು : ನೇರ ನೇಮಮಾತಿ ಮೂಲಕ ಭರ್ತಿ