ಬೆಂಗಳೂರಿನ ಗಾಯತ್ರಿ ವಿಹಾರದಲ್ಲಿ ಸಂಸದ ತೇಜಸ್ವಿ-ಗಾಯಕಿ ಶಿವಶ್ರೀ ವಿವಾಹ ಮಾ.9ಕ್ಕೆ

ಸಾರಾಂಶ

ಬಿಜೆಪಿಯ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಅವರು ಮಾ.9ರಂದು ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಅವರನ್ನು ವರಿಸಲಿದ್ದಾರೆ.

  ಬೆಂಗಳೂರು : ಬಿಜೆಪಿಯ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಅವರು ಮಾ.9ರಂದು ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಅವರನ್ನು ವರಿಸಲಿದ್ದಾರೆ. 

ಅಂದು ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಸಾಂಪ್ರದಾಯಿಕವಾಗಿ ವಿವಾಹ ಕಾರ್ಯಕ್ರಮ ನಡೆಯಲಿದೆ. ತಮಿಳುನಾಡು ಮೂಲದ ಶಿವಶ್ರೀ ಅವರು ಈಗಾಗಲೇ ಗಾಯನದಿಂದ ಖ್ಯಾತರಾಗಿದ್ದಾರೆ. 

ಕಳೆದ ಹಲವು ದಿನಗಳಿಂದ ಎರಡೂ ಕುಟುಂಬಗಳ ನಡುವೆ ಮಾತುಕತೆ ನಡೆದು ವಿವಾಹ ತೀರ್ಮಾನಿಸಲಾಗಿತ್ತು. ಇತ್ತೀಚೆಗೆ ಆರ್ಟ್ ಆಫ್ ಲಿವಿಂಗ್‌ನಲ್ಲಿ ನಡೆದ ಕಾರ್ಯಕ್ರಮದ ವೇಳೆ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದರು. ಶಿವಶ್ರೀ ಅವರು ಗಾಯನವಲ್ಲದೆ ಭರತನಾಟ್ಯ ಕಲಾವಿದೆ ಕೂಡ ಹೌದು. ಮದ್ರಾಸ್ ವಿಶ್ವವಿದ್ಯಾಲಯದಿಂದ ಭರತನಾಟ್ಯದಲ್ಲಿ ಪದವಿಯನ್ನೂ ಗಳಿಸಿದ್ದಾರೆ. 

ಆಯೋಧ್ಯೆ ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ಶಿವಶ್ರೀ ಅವರು ಹಾಡಿದ ರಾಮನ ಕುರಿತ ಗೀತೆಯನ್ನು ಮೆಚ್ಚಿ ಪ್ರಧಾನಿ ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

Share this article