ಕೊಲೆ ಕೇಸ್‌ ದೋಷಿ ವಿನಯ ಕುಲಕರ್ಣಿ ಶಾಸಕತ್ವಕ್ಕೆ ಚ್ಯುತಿ

Published : May 03, 2026, 08:14 AM IST
vinay kulkarni

ಸಾರಾಂಶ

ಧಾರವಾಡದ ಜಿಪಂ ಮಾಜಿ ಸದಸ್ಯ ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಧಾರವಾಡ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ವಿನಯ್‌ ಕುಲಕರ್ಣಿ ಅವರು ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ.

  ಬೆಂಗಳೂರು :  ಧಾರವಾಡದ ಜಿಪಂ ಮಾಜಿ ಸದಸ್ಯ ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಧಾರವಾಡ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ವಿನಯ್‌ ಕುಲಕರ್ಣಿ ಅವರು ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ.

ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅಧಿಕೃತ ಅಧಿಸೂಚನೆ

ಈ ಸಂಬಂಧ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರು ಶನಿವಾರ ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ. ಈ ಮುಖಾಂತರ ವಿಧಾನಸಭೆಯ ಒಂದು ಸ್ಥಾನ ಖಾಲಿಯಾಗಿದೆ ಎಂದು ಅಧಿಸೂಚನೆಯಲ್ಲಿ ಉಲ್ಲೇಖಿಸಿದ್ದಾರೆ.

ವಿನಯ್‌ ಕಲುಕರ್ಣಿ ಅವರನ್ನು ದೋಷಿ ಎಂದು ನಿರ್ಧರಿಸಿ ಏ.15ರಂದು ಶಿಕ್ಷೆ ಪ್ರಕಟ

ನಗರದ 82ನೇ ಸಿಸಿಎಚ್‌(ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ನ್ಯಾಯಾಲಯವು ಕೊಲೆ ಪ್ರಕರಣ ಸಂಬಂಧ ವಿನಯ್‌ ಕಲುಕರ್ಣಿ ಅವರನ್ನು ದೋಷಿ ಎಂದು ನಿರ್ಧರಿಸಿ ಏ.15ರಂದು ಶಿಕ್ಷೆ ಪ್ರಕಟಿಸಿದೆ. ಶಿಕ್ಷೆ ಪ್ರಕಟವಾದ ದಿನದಿಂದಲೇ ವಿನಯ್‌ ಕುಲಕರ್ಣಿ ಅವರು ವಿಧಾನಸಭೆಯ ಸದಸ್ಯತ್ವದಿಂದ ಅನರ್ಹರಾಗಿದ್ದಾರೆ.

ಈ ಶಿಕ್ಷೆಗೆ ನ್ಯಾಯಾಲಯ ತಡೆಯಾಜ್ಞೆ ನೀಡದಿದ್ದಲ್ಲಿ 1951ರ ಜನತಾ ಪ್ರಾತಿನಿಧ್ಯ ಕಾಯ್ದೆ ಸೆಕ್ಷನ್‌ 8 ಮತ್ತು ಸಂವಿಧಾನದ ಸೆಕ್ಷನ್‌ 191(1) (ಇ) ಪ್ರಕಾರ ಈ ಅನರ್ಹತೆ ವಿನಯ್‌ ಕುಲಕರ್ಣಿ ಶಿಕ್ಷೆ ಅನುಭವಿಸಿ ಬಿಡುಗಡೆಯಾದ ಆರು ವರ್ಷಗಳ ಅವಧಿಗೆ ಮುಂದುವರೆಯಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ಬಜೆಟ್‌ನ ಎಲ್ಲ ಘೋಷಣೆ ಮೇ ಅಂತ್ಯದೊಳಗೇ ಜಾರಿ: ಸಿದ್ದರಾಮಯ್ಯ
ಉಗ್ರ ಕೃತ್ಯಕ್ಕೆ ಸಂಚು ರೂಪಿಸಿದ್ದ 9ನೇ ಆರೋಪಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ