ಬೆಂಗಳೂರು : ಆರ್‌ಎಸ್‌ಎಸ್‌ನವರು ಯಾವಾಗಲೂ ಮನುಸ್ಮೃತಿ ಮೇಲೆ ನಂಬಿಕೆ ಹೊಂದಿರುವವರು. ಅವರಿಗೆ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ಗೌರವ, ನಂಬಿಕೆ ಇಲ್ಲ. ಹೀಗಾಗಿ ಸಂವಿಧಾನ ಪೀಠಿಕೆಯಲ್ಲಿನ ಸಮಾಜವಾದ ಹಾಗೂ ಜಾತ್ಯತೀತ ಪದ ತೆಗೆಯಬೇಕು ಎನ್ನುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಆರ್‌ಎಸ್‌ಎಸ್‌ನ ದತ್ತಾತ್ರೇಯ ಹೊಸಬಾಳೆ ಅವರ ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದ’ ಮತ್ತು ‘ಜಾತ್ಯತೀತ’ ಪದ ತೆಗೆಯಬೇಕು ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದರು.
ಸಂವಿಧಾನ ಪೀಠಿಕೆಗೆ ಸಮಾಜವಾದ, ಜಾತ್ಯತೀತ ಪದ ಸೇರಿಸಲು ಸಂಸತ್ತಿನಲ್ಲಿ ಚರ್ಚಿಸಿ ಸಂವಿಧಾನ ತಿದ್ದುಪಡಿ ಮಾಡಲಾಗಿದೆ. ದತ್ತಾತ್ರೇಯ ಹೊಸಬಾಳೆ ಹೇಳಿದಂತೆಲ್ಲಾ ರಚನೆಯಾಗಲ್ಲ ಎಂದು ಸ್ಪಷ್ಟಪಡಿಸಿದರು.
ಹುಲಿಗಳ ಸಾವು ತಪ್ಪಿತಸ್ಥರ ವಿರುದ್ಧ ಕ್ರಮ: ಸಿಎಂ
ಮಲೆಮಹದೇಶ್ವರ ಬೆಟ್ಟದಲ್ಲಿ ಹುಲಿಗಳ ಸಾವಿನ ಪ್ರಕರಣದಲ್ಲಿ ತನಿಖೆ ಕೈಗೊಂಡು ಕೆಲವರನ್ನು ಬಂಧಿಸಲಾಗಿದೆ. ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.