ಗೃಹಲಕ್ಷ್ಮೀ ಹಣ ಸಾಲದ ಕಂತಿಗೆ ಕಡಿತ ಮಾಡಂಗಿಲ್ಲ : ಸಿಎಂ

Published : Apr 11, 2026, 01:21 PM IST
siddaramaiah

ಸಾರಾಂಶ

ಮಹಿಳಾ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ಜಮೆಯಾಗುವ ಗೃಹಲಕ್ಷ್ಮೀ ಸಹಾಯಧನದ ಹಣವನ್ನು ಖಾಸಗಿ ಫೈನಾನ್ಸ್‌ ಮತ್ತು ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಹಳೇ ಸಾಲದ ಬಾಕಿ ನೆಪದಲ್ಲಿ ಬಲವಂತವಾಗಿ ಕಡಿತಗೊಳಿಸುತ್ತಿರುವ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

 ಬೆಂಗಳೂರು :  ಮಹಿಳಾ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ಜಮೆಯಾಗುವ ಗೃಹಲಕ್ಷ್ಮೀ ಸಹಾಯಧನದ ಹಣವನ್ನು ಖಾಸಗಿ ಫೈನಾನ್ಸ್‌ ಮತ್ತು ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಹಳೇ ಸಾಲದ ಬಾಕಿ ನೆಪದಲ್ಲಿ ಬಲವಂತವಾಗಿ ಕಡಿತಗೊಳಿಸುತ್ತಿರುವ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಈ ಸೂಚನೆ

ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮತ್ತು ಶಾಸಕ ದಿನೇಶ್‌ ಗೂಳಿಗೌಡ ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಲ್ಲಿಸಿದ್ದ ಮನವಿ ಪತ್ರದ ಬೆನ್ನಲ್ಲೇ ಮುಖ್ಯಮಂತ್ರಿಯವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಈ ಸೂಚನೆ ನೀಡಿದ್ದಾರೆ.

ಜತೆಗೆ ಮುಖ್ಯಮಂತ್ರಿ ಕಾರ್ಯದರ್ಶಿ ಅವರು, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಮುಖ್ಯ ಕಾರ್ಯದರ್ಶಿ, ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ತುರ್ತು ಕ್ರಮಕ್ಕೆ ನಿರ್ದೇಶಿಸಿದ್ದಾರೆ.

ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಶಕ್ತಿ

ದಿನೇಶ್‌ ಗೂಳಿಗೌಡ ಅವರು ಮುಖ್ಯಮಂತ್ರಿ ಅವರಿಗೆ ಬರೆದಿದ್ದ ಪತ್ರದಲ್ಲಿ, ಗೃಹಲಕ್ಷ್ಮೀ ಯೋಜನೆಯು ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಶಕ್ತಿಯಾಗಿದೆ. ಪ್ರತಿ ತಿಂಗಳು ತಲಾ 2 ಸಾವಿರ ರು. ಸಹಾಯಧನ ಪಾವತಿಯಾಗುತ್ತಿದೆ. ಆದರೆ, ಇತ್ತೀಚೆಗೆ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ಗೃಹಲಕ್ಷ್ಮೀ ಹಣ ಜಮೆಯಾದ ಕೂಡಲೇ ಕೆಲ ಖಾಸಗಿ ಫೈನಾನ್ಸ್‌ ಸಂಸ್ಥೆಗಳು, ಸ್ತ್ರೀಶಕ್ತಿ ಸಂಘಗಳು ಆ ಹಣವನ್ನು ಸಾಲದ ಬಾಕಿ ಅಥವಾ ಬಡ್ಡಿ ಎಂದು ಹೇಳಿ ಬಲವಂತಾಗಿ ಕಡಿತಗೊಳಿಸುತ್ತಿವೆ. ಕೆಲ ಕಡೆ ಬ್ಯಾಂಕ್‌ ಅಧಿಕಾರಿಗಳ ಮೇಲೆ ಒತ್ತಡ ಹೇರಿ ಅಥವಾ ಫಲಾನುಭವಿಗಳಿಗೆ ಬೆದರಿಕೆ ಹಾಕಿ ಹಣ ವಸೂಲಿ ಮಾಡಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಕೋರಿದ್ದರು.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ಪಿಯು: 600ಕ್ಕೆ 683, ಹಿಂದಿಯಲ್ಲಿ 100ಕ್ಕೆ 101 ಅಂಕ!
ಮಳೆಗಾಲಕ್ಕೆ ಮುನ್ನ ಕಾಮಗಾರಿ ಮುಗಿಸಿ: ತುಷಾರ್‌