ಆಟೋ ಎಲ್‌ಪಿಜಿ ಕೊರತೆ ಇಲ್ಲ : ಗ್ರಾಹಕರ ವ್ಯವಹಾರ ಇಲಾಖೆ

Published : Mar 30, 2026, 10:43 AM IST
LPG gas

ಸಾರಾಂಶ

ರಾಜ್ಯದಲ್ಲಿ ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್‌ಪಿಜಿ ಸರಬರಾಜು ಮಾಡಲಾಗುತ್ತಿದೆ. ವಿಶೇಷವಾಗಿ ಆಟೋ ಎಲ್‌ಪಿಜಿಗೆ ಯಾವುದೇ ರೀತಿಯ ಕೊರತೆ ಇಲ್ಲ ಎಂದು ಆಹಾರ ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸ್ಪಷ್ಟಪಡಿಸಿದೆ.

 ಬೆಂಗಳೂರು :  ರಾಜ್ಯದಲ್ಲಿ ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್‌ಪಿಜಿ ಸರಬರಾಜು ಮಾಡಲಾಗುತ್ತಿದೆ. ವಿಶೇಷವಾಗಿ ಆಟೋ ಎಲ್‌ಪಿಜಿಗೆ ಯಾವುದೇ ರೀತಿಯ ಕೊರತೆ ಇಲ್ಲ ಎಂದು ಆಹಾರ ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸ್ಪಷ್ಟಪಡಿಸಿದೆ.

72 ಆಟೋ ಎಲ್‌ಪಿಜಿ ಡಿಸ್ಪೆನ್ಸಿಂಗ್ ಸ್ಟೇಷನ್‌ಗಳು ಕಾರ್ಯನಿರ್ವಹಿಸುತ್ತಿವೆ

ಕರ್ನಾಟಕದಾದ್ಯಂತ ಒಟ್ಟು 72 ಆಟೋ ಎಲ್‌ಪಿಜಿ ಡಿಸ್ಪೆನ್ಸಿಂಗ್ ಸ್ಟೇಷನ್‌ಗಳು (ಎಎಲ್‌ಡಿಎಸ್‌) ಕಾರ್ಯನಿರ್ವಹಿಸುತ್ತಿವೆ. ಇವುಗಳಲ್ಲಿ ಬೆಂಗಳೂರು ನಗರದಲ್ಲೇ 31 ಕೇಂದ್ರಗಳಿವೆ. ಸಾರ್ವಜನಿಕ ವಲಯದ ಪ್ರಮುಖ ತೈಲ ಮಾರಾಟ ಕಂಪನಿಗಳಾದ ಒಎಂಸಿಸ್‌, ಐಒಸಿಎಲ್‌, ಬಿಪಿಸಿಎಲ್‌ ಮತ್ತು ಎಚ್‌ಪಿಸಿಎಲ್‌ ಮೂಲಕ ಆಟೋ ಎಲ್‌ಪಿಜಿ ಸರಬರಾಜು ಮಾಡಲಾಗುತ್ತಿದೆ. 

ಲೀಟರ್‌ಗೆ 77.74 ರು. ದರದಲ್ಲಿ ಆಟೋ ಎಲ್‌ಪಿಜಿ ಪೂರೈಸುತ್ತಿವೆ

ಪ್ರಸ್ತುತ ಈ ಸಂಸ್ಥೆಗಳು ಪ್ರತಿ ಲೀಟರ್‌ಗೆ 77.74 ರು. ದರದಲ್ಲಿ ಆಟೋ ಎಲ್‌ಪಿಜಿ ಪೂರೈಸುತ್ತಿವೆ. ಕಳೆದ ವಾರದಲ್ಲಿ ದಿನಕ್ಕೆ ಸರಾಸರಿ 64.9 ಮೆಟ್ರಿಕ್ ಟನ್ ಆಟೋ ಎಲ್‌ಪಿಜಿಯನ್ನು ವಿತರಿಸಲಾಗಿದೆ. ಸಂಘರ್ಷದ ಮೊದಲು ಈ ಪ್ರಮಾಣವು ದಿನಕ್ಕೆ 57.6 ಮೆಟ್ರಿಕ್ ಟನ್ ಇತ್ತು. ಇದು ಪೂರೈಕೆಯಲ್ಲಿನ ಗಮನಾರ್ಹ ಹೆಚ್ಚಳವನ್ನು ತೋರಿಸುತ್ತದೆ ಎಂದು ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರಾಜ್ಯಾದ್ಯಂತ ಪ್ರತಿದಿನ ಸುಮಾರು 4 ಲಕ್ಷ ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್‌ಗಳು ಹಾಗೂ ಸುಮಾರು 18,000 ವಾಣಿಜ್ಯ ಬಳಕೆ ಸಿಲಿಂಡರ್‌ಗಳನ್ನು ಪೂರೈಕೆ ಮಾಡಲಾಗುತ್ತಿದೆ. ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆಯಿಲ್ಲದೆ ಎಲ್‌ಪಿಜಿ ಸರಬರಾಜು ಆಗುವುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ನಿರಂತರವಾಗಿ ಪರಿಸ್ಥಿತಿಯ ಮೇಲೆ ನಿಗಾ ಇರಿಸಿದೆ‌ ಎಂದು ತಿಳಿಸಿದೆ.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ಬೆಂಗಳೂರು ಸೇರಿ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಮಳೆ
ಹಳ್ಳಿಯ ಜನರು ಅಡುಗೆಗೆ ಸೌದೆ ಬಳಸಿ - ನಗರ ಜನರು ಎಲೆಕ್ಟ್ರಿಕ್‌ ಸ್ಟವ್ ಉಪಯೋಗಿಸಿ : ಮುನಿಯಪ್ಪ