;Resize=(412,232))
ಈ ಮೊದಲು 2026ರ ಮೇ 31ರ ಒಳಗಾಗಿ ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ ಈಗಾಗಲೇ ಅರ್ಜಿ ಸಲ್ಲಿಸಿರುವ ಪ್ರಕರಣಗಳಿಗೆ ಸೀಮಿತವಾಗಿ ಸಿಸಿ, ಓಸಿ ವಿನಾಯ್ತಿಗೆ ಅವಕಾಶ ನೀಡಲು ತೀರ್ಮಾನಿಸಲಾಗಿತ್ತು. ನಂತರ ಇದರಿಂದ ಹೆಚ್ಚು ಅನುಕೂಲ ಆಗುವುದಿಲ್ಲ ಎಂಬ ಕಾರಣಕ್ಕೆ ಅರ್ಜಿ ಆಹ್ವಾನಿಸಿ ಆದೇಶ ಮಾಡಿದ ನಂತರದ 15 ದಿನಗಳವರೆಗೆ ಈಗಾಗಲೇ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದು ಕಟ್ಟಡ ನಿರ್ಮಿಸಿ ಪೂರ್ಣಗೊಳಿಸಿರುವ ಪ್ರಕರಣ ಹಾಗೂ ಯಾವುದೇ ವಿದ್ಯುತ್ ಸಂಪರ್ಕ ಪಡೆಯದೇ ಕಟ್ಟಡ ಕಾಮಗಾರಿ ಪೂರ್ಣಗೊಂಡಿರುವ ಪ್ರಕರಣಗಳಿಗೆ ಅನ್ವಯವಾಗುವಂತೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಲು ತೀರ್ಮಾನಿಸಲಾಗಿತ್ತು.
ಬಳಿಕ ಕಳೆದ ಸಚಿವ ಸಂಪುಟದಲ್ಲಿ ಮತ್ತೆ ಆ.15ರವರೆಗೆ ಹೆಚ್ಚುವರಿ ಕಾಲಾವಕಾಶ ನೀಡಲು ನಿರ್ಧರಿಸಲಾಗಿತ್ತು. ಅದರಂತೆ ಈಗ ಆದೇಶ ಹೊರಡಿಸಲಾಗಿದೆ.
ಅದರಂತೆ 2400 ಚದರ ಅಡಿವರೆಗೆ ಅಳತೆಯ ನಿವೇಶನಗಳಲ್ಲಿ ಶೇ.20% ಹೆಚ್ಚುವರಿ ವ್ಯತ್ಯಾಸದ ಮಿತಿಯೊಂದಿಗೆ ನಿರ್ಮಿಸಿರುವ ಜಿ+3 (ಜಿ+3) ಅಂತಸ್ತಿನ ವಸತಿ ಕಟ್ಟಡಗಳು ಅಥವಾ ಸ್ಟಿಲ್ಟ್ ಪಾರ್ಕಿಂಗ್ + 4 ಮಹಡಿಗಳನ್ನು ಹೊಂದಿರುವ ವಸತಿ ಕಟ್ಟಡಗಳಿಗೆ ಮಾತ್ರ ಈ ವಿನಾಯ್ತಿ ಅನ್ವಯಿಸಲಿದ್ದು, ಅಂಥ ಪ್ರಕರಣಗಳ ಕಟ್ಟಡ ಮಾಲೀಕರು ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ ಆ.15ವರೆಗೆ ಅರ್ಜಿ ಸಲ್ಲಿಸಹುದು. ವಾಣಿಜ್ಯ ಕಟ್ಟಡಗಳಿಗೆ ಈ ಅವಕಾಶವಿಲ್ಲ.
- ಗಡುವು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ