ಕ್ವಿಂಟಲ್‌ ಈರುಳ್ಳಿ ₹ 100ಕ್ಕೆ ಕುಸಿತ ರಸ್ತೆಗೆ ಈರುಳ್ಳಿ ಸುರಿದು ಆಕ್ರೋಶ

Published : Oct 16, 2025, 10:54 AM IST
onion price hike

ಸಾರಾಂಶ

 ದರ ಕುಸಿತವಾಗಿರುವುದನ್ನು ಖಂಡಿಸಿ ಬುಧವಾರ ರಸ್ತೆಗೆ ಈರುಳ್ಳಿ ಸುರಿದು ರೈತರು ಪ್ರತಿಭಟನೆ ನಡೆಸಿದರು. ಧಾರವಾಡ, ಗದಗ, ಬಾಗಲಕೋಟೆ, ವಿಜಯಪುರ, ಬೆಳಗಾವಿ ಸೇರಿ ಅಕ್ಕಪಕ್ಕದ ಹಲವು ಜಿಲ್ಲೆಗಳಿಂದ ಹುಬ್ಬಳ್ಳಿ ಎಪಿಎಂಸಿಗೆ ಈರುಳ್ಳಿ ಆವಕವಾಗಿತ್ತು.

 ಹುಬ್ಬಳ್ಳಿ :  ದರ ಕುಸಿತವಾಗಿರುವುದನ್ನು ಖಂಡಿಸಿ ಬುಧವಾರ ರಸ್ತೆಗೆ ಈರುಳ್ಳಿ ಸುರಿದು ರೈತರು ಪ್ರತಿಭಟನೆ ನಡೆಸಿದರು. ಧಾರವಾಡ, ಗದಗ, ಬಾಗಲಕೋಟೆ, ವಿಜಯಪುರ, ಬೆಳಗಾವಿ ಸೇರಿ ಅಕ್ಕಪಕ್ಕದ ಹಲವು ಜಿಲ್ಲೆಗಳಿಂದ ಹುಬ್ಬಳ್ಳಿ ಎಪಿಎಂಸಿಗೆ ಈರುಳ್ಳಿ ಆವಕವಾಗಿತ್ತು. ಬುಧವಾರ ಸುಮಾರು 8 ಸಾವಿರ ಕ್ವಿಂಟಲ್​ ಈರುಳ್ಳಿ ಆವಕವಾಗಿದ್ದು, ಪ್ರತಿ ಕ್ವಿಂಟಲ್​ಗೆ ಕನಿಷ್ಠ ₹100ರಿಂದ ಗರಿಷ್ಠ ₹1500ರ ವರೆಗೆ ಮಾತ್ರ ಟೆಂಡರ್​ನಲ್ಲಿ ದರ ನಿಗದಿಯಾಗಿತ್ತು.  

ಕಳೆದ ಎರಡ್ಮೂರು ವಾರದಿಂದ ಈರುಳ್ಳಿ ದರ ಇಳಿಮುಖವಾಗಿಯೇ ಹೊರಟಿದೆ. ಸ್ಥಳೀಯ ಈರುಳ್ಳೀ ಹೆಚ್ಚಿನ ಪ್ರಮಾಣದಲ್ಲಿ ಎಪಿಎಂಸಿಗೆ ಬರುತ್ತಿದ್ದು, ವರ್ತಕರು ತೇವಾಂಶದ ನೆಪ ಹೇಳಿ ದರವನ್ನು ಭಾರಿ ಪ್ರಮಾಣದಲ್ಲಿ ಇಳಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ ರೈತರು, ಮಾರಾಟಕ್ಕೆ ತಂದಿದ್ದ ಈರುಳ್ಳಿಯನ್ನು ರಸ್ತೆ ಸುರಿದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕನಿಷ್ಠ ದರವನ್ನು ಅತ್ಯಂತ ಕಡಿಮೆ ನಿಗದಿ ಮಾಡಿದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಬೆಳೆಗಾರರು ಎಪಿಎಂಸಿ ಆಡಳಿತ ಕಚೇರಿಗೆ ಮುತ್ತಿಗೆ ಹಾಕಿ ಧರಣಿ ನಡೆಸಿದರು. ಸಮೀಪದಲ್ಲಿರುವ ಹುಬ್ಬಳ್ಳಿ-ಧಾರವಾಡ ಮುಖ್ಯ ರಸ್ತೆಗೆ ಆಗಮಿಸಿ ಕೆಲಹೊತ್ತು ರಸ್ತೆ ಸಂಚಾರ ತಡೆ ನಡೆಸಿದರು.

ಈ ವೇಳೆ ಮಾತನಾಡಿದ ರೈತ ಸಮಾಜದ ರಾಷ್ಟ್ರೀಯ ಉಪಾಧ್ಯಕ್ಷ ಹೇಮನಗೌಡ ಬಸನಗೌಡ್ರ, ಹುಬ್ಬಳ್ಳಿ ಎಪಿಎಂಸಿಯಲ್ಲಿ ಪ್ರತಿ ಕ್ವಿಂಟಲ್​ ಈರುಳ್ಳಿಯನ್ನು ಕೇವಲ ₹100ರಿಂದ ₹ 1500ರ ವರೆಗೆ ಖರೀದಿ ಮಾಡಲಾಗುತ್ತಿದೆ. ರೈತರಿಗೆ ದಲ್ಲಾಳಿಗಳಿಂದ ಅನ್ಯಾಯವಾಗುತ್ತಿದೆ. ಕ್ವಿಂಟಲ್​ಗೆ ಕನಿಷ್ಠ ₹2000 ನಿಗದಿ ಮಾಡಬೇಕು ಎಂದು ಆಗ್ರಹಿಸಿದರು. ನಂತರ ಎಪಿಎಂಸಿ ಕಾರ್ಯದರ್ಶಿಗೆ ಮನವಿ ಸಲ್ಲಿಸಿದರು.

PREV
Read more Articles on

Recommended Stories

ಪೊಲೀಸ್‌ ಕ್ಯಾಂಟೀನ್‌ ಮಾದರೀಲಿ ನೌಕರರಿಗೆ ಸೂಪರ್‌ ಮಾರ್ಕೆಟ್‌?
800 ಕೆಪಿಎಸ್‌ ಶಾಲೆ ಸೃಷ್ಟಿ : ರಾಜ್ಯದಲ್ಲಿ 18 ಸಾವಿರ ಶಿಕ್ಷಕರು, ಉಪನ್ಯಾಸಕರ ನೇಮಕ