ಮೈಸೂರು ಸ್ಯಾಂಡಲ್ ಸೋಪ್‌ಗೆ ಯದುವೀರ್‌ ರಾಯಭಾರಿ ಮಾಡಲು ಆನ್‌ಲೈನಲ್ಲಿ ಅಭಿಯಾನ

Published : May 26, 2025, 11:00 AM IST
Yaduveer wadiyar

ಸಾರಾಂಶ

ಮೈಸೂರು ಸ್ಯಾಂಡಲ್ ಗೆ ನಟಿ ತಮನ್ನಾ ಬಾಟಿಯಾ ಅವರನ್ನು ರಾಯಭಾರಿಯನ್ನಾಗಿ ನೇಮಿಸಿದ್ದಕ್ಕೆ ನಮ್ಮ ವಿರೋಧ ಇದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.

 ಮೈಸೂರು : ಮೈಸೂರು ಸ್ಯಾಂಡಲ್ ಗೆ ನಟಿ ತಮನ್ನಾ ಬಾಟಿಯಾ ಅವರನ್ನು ರಾಯಭಾರಿಯನ್ನಾಗಿ ನೇಮಿಸಿದ್ದಕ್ಕೆ ನಮ್ಮ ವಿರೋಧ ಇದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು. 

ತಮ್ಮನ್ನೇ ಸೋಪ್‌ಗೆ ರಾಯಭಾರಿಯನ್ನಾಗಿ ಮಾಡಬೇಕು ಎಂದು ಆನ್‌ಲೈನ್‌ನಲ್ಲಿ ನಡೆಯುತ್ತಿರುವ ಅಭಿಯಾನದ ಬಗ್ಗೆ ಭಾನುವಾರ ಪ್ರತಿಕ್ರಿಯಿಸಿದ ಯದುವೀರ್‌, ‘ನನಗೆ ವೈಯಕ್ತಿಕವಾಗಿ ರಾಯಭಾರಿಯಾಗುವ ಆಸೆ ಇಲ್ಲ. ರಾಜಮನೆತನ ಕಮರ್ಷಿಯಲ್ ಆಗಿ ಸೇವೆ ಮಾಡುವುದಿಲ್ಲ. ನಾವು ಸದಾಕಾಲ ಕನ್ನಡದ ಬ್ರಾಂಡ್‌ಗಳ ಪರವಾಗಿಯೇ ಇರುತ್ತೇವೆ. ಹೀಗಾಗಿ, ನನ್ನ ಹೆಸರು ಸಾಮಾಜಿಕ ಜಾಲಾತಾಣದಲ್ಲಿ ಬರುತ್ತಿದ್ದರೂ ಅದಕ್ಕೆ ನನ್ನ ಸಹಮತ ಇಲ್ಲ’ ಎಂದರು.

ಮೈಸೂರು ಸ್ಯಾಂಡಲ್ ಕನ್ನಡಿಗರೇ ಕಟ್ಟಿ ಬೆಳೆಸಿದ ಸಂಸ್ಥೆ. ಅದಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆದ ಕನ್ನಡಿಗರನ್ನು ರಾಯಭಾರಿಯಾಗಿ ಮಾಡಬೇಕು. ಸೋಪು ಎಂದ ಕೂಡಲೇ ಹಿರೋಯಿನ್ನೇ ಯಾಕೆ ಬೇಕು?. ಸೋಪ್‌ಗೆ ಲಿಂಗಭೇದ ಇರುತ್ತದಾ?. ಕ್ರಿಕೆಟಿಗರು, ಒಳ್ಳೆ ನಾಯಕ ನಟರು ರಾಯಭಾರಿ ಆಗಬಹುದಿತ್ತಲ್ಲಾ?. ಇದು ಒಂದು ಅರ್ಥದಲ್ಲಿ ಕನ್ನಡಿಗರಿಗೆ ಮಾಡಿದ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ಕನ್ನಡಿಗರು ಬಹಳಷ್ಟು ಜನ ಇದ್ದಾರೆ. ಅವರ್ಯಾರೂ ಸರ್ಕಾರದ ಕಣ್ಣಿಗೆ ಕಾಣಲಿಲ್ವಾ?. ಅವರದ್ದೇ ಪಕ್ಷದ ನಟಿ ರಮ್ಯಾ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಕನ್ನಡಿಗರನ್ನೇ ರಾಯಭಾರಿ ಮಾಡಿದ್ದರೇ ಬ್ರಾಂಡಿನ ಮೌಲ್ಯ ಇನ್ನೂ ಹೆಚ್ಚಾಗುತ್ತಿತ್ತು ಎಂದರು.

PREV
Read more Articles on

Recommended Stories

ಈರುಳ್ಳಿ, ಹೂ, ಪಚ್ಚ ಬಾಳೆ ಬೆಲೆ ಧರೆಗೆ!
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ