ಹೊಟ್ಟೆಯುರಿಯಿಂದ ಸರ್ಕಾರದ ವಿರುದ್ಧ ವಿಪಕ್ಷ ಆರೋಪ : ಮುಖ್ಯಮಂತ್ರಿ ಸಿದ್ದರಾಮಯ್ಯ

ಸಾರಾಂಶ

ವಿರೋಧ ಪಕ್ಷಗಳು ಪ್ರತಿ ಮಾತಿನಲ್ಲೂ ಸರ್ಕಾರದ ಬಳಿ ಹಣವಿಲ್ಲ, ದಿವಾಳಿಯಾಗಿದೆ ಎಂದು ಆರೋಪಿಸುತ್ತಿವೆ. ಆದರೆ, ಸರ್ಕಾರ ಒಂದೇ ಸಚಿವ ಸಂಪುಟ ಸಭೆಯಲ್ಲಿ ₹3,647 ಕೋಟಿ ಮೊತ್ತದ ಯೋಜನೆಗಳ ಅನುಷ್ಠಾನಕ್ಕೆ ಅನುಮೋದಿಸುತ್ತಿದೆ.

 ಬೆಂಗಳೂರು : ವಿರೋಧ ಪಕ್ಷಗಳು ಪ್ರತಿ ಮಾತಿನಲ್ಲೂ ಸರ್ಕಾರದ ಬಳಿ ಹಣವಿಲ್ಲ, ದಿವಾಳಿಯಾಗಿದೆ ಎಂದು ಆರೋಪಿಸುತ್ತಿವೆ. ಆದರೆ, ಸರ್ಕಾರ ಒಂದೇ ಸಚಿವ ಸಂಪುಟ ಸಭೆಯಲ್ಲಿ ₹3,647 ಕೋಟಿ ಮೊತ್ತದ ಯೋಜನೆಗಳ ಅನುಷ್ಠಾನಕ್ಕೆ ಅನುಮೋದಿಸುತ್ತಿದೆ. 

ಸರ್ಕಾರದ ಬಳಿ ಹಣವಿಲ್ಲದಿದ್ದರೆ ಇಷ್ಟು ದೊಡ್ಡ ಮೊತ್ತದ ಯೋಜನೆಗಳನ್ನು ಅನುಷ್ಠಾನ ಮಾಡಲು ಹೇಗೆ ಸಾಧ್ಯ? ಗ್ಯಾರಂಟಿಗಳಿಗೆ ಹಣ ಖರ್ಚು ಮಾಡುತ್ತೇವೆ ಎಂಬ ಹೊಟ್ಟೆಯುರಿಯಿಂದ ವಿಪಕ್ಷದವರು ಆರೋಪಿಸುತ್ತಿದ್ದಾರೆ. ಸರ್ಕಾರ ಮಾತ್ರ ಎಲ್ಲ ರೀತಿಯ ಅಭಿವೃದ್ಧಿ ಕಾಮಗಾರಿಗಳನ್ನೂ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಂಜುಂಡಪ್ಪ ವರದಿಯಂತೆ ಜಾಮರಾಜನಗರ ಜಿಲ್ಲೆಯು ಹಿಂದುಳಿದ ಜಿಲ್ಲೆಗೆ ಸೇರ್ಪಡೆಯಾಗಿದೆ. ಆದರೆ, ಆ ಹಣೆಪಟ್ಟಿಯನ್ನು ಕಳಚಲು ಸರ್ಕಾರ ಸರ್ವ ಪ್ರಯತ್ನ ಮಾಡುತ್ತಿದೆ. ಅದಕ್ಕಾಗಿ ಮಲೆಮಹದೇಶ್ವರ ಬೆಟ್ಟದಲ್ಲೇ ಸಚಿವ ಸಂಪುಟ ಸಭೆ ನಡೆಸಿ, ಚಾಮರಾಜನಗರ ಜಿಲ್ಲೆಗಾಗಿ ಆರೋಗ್ಯ, ನೀರಾವರಿ ಸೇರಿ ಇನ್ನಿತರ ಯೋಜನೆಗಳ ಅನುಷ್ಠಾನಕ್ಕೆ ಅನುಮೋದನೆ ನೀಡಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

Share this article