ಪಾಕ್‌-ಭಾರತ ಸಂಘರ್ಷ: ಜನ್ಮದಿನ ಆಚರಿಸದಿರಲು ಡಿಸಿಎಂ ನಿರ್ಧಾರ

Sujatha NRPublished : May 15, 2025 6:30 AM

ತಮ್ಮ ಜನ್ಮ ದಿನ ಆಚರಿಸದಿರಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಿರ್ಧರಿಸಿದ್ದರೂ ಅವರ ಅನೇಕ ಅಭಿಮಾನಿಗಳು ವಿವಿಧ ರೀತಿಯಲ್ಲಿ ಜನ್ಮ ದಿನ ಆಚರಿಸಲು ಉದ್ದೇಶಿಸಿದ್ದಾರೆ

 ಬೆಂಗಳೂರು: ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಹಿನ್ನೆಲೆಯಲ್ಲಿ ಗುರುವಾರ ತಮ್ಮ ಜನ್ಮ ದಿನ ಆಚರಿಸದಿರಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಿರ್ಧರಿಸಿದ್ದರೂ ಅವರ ಅನೇಕ ಅಭಿಮಾನಿಗಳು ವಿವಿಧ ರೀತಿಯಲ್ಲಿ ಜನ್ಮ ದಿನ ಆಚರಿಸಲು ಉದ್ದೇಶಿಸಿದ್ದಾರೆ. ನಗರದ ಕೆಲ ಕಡೆ ಈಗಾಗಲೇ ಶಿವಕುಮಾರ್ ಅವರನ್ನು ಅಭಿನಂದಿಸುವ ಬ್ಯಾನರ್‌, ಪೋಸ್ಟರ್‌ಗಳನ್ನು ಅಳವಡಿಸಿದ್ದಾರೆ. 

ಅಭಿಮಾನಿಗಳು, ಕಾರ್ಯಕರ್ತರು ಡಿ.ಕೆ.ಶಿವಕುಮಾರ್‌ ಅವರಿಗೆ ಶ್ರೇಯಸ್ಸು ಬಯಸಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಗುರುವಾರ ಬೆಂಗಳೂರಿನಲ್ಲಿ ಇರುವುದಿಲ್ಲ.

 ವಿಜಯನಗರ ಜಿಲ್ಲೆಯಲ್ಲಿ ನಡೆಯಲಿರುವ ಸರ್ಕಾರದ ಸಾಧನಾ ಸಮಾವೇಶದ ಸಿದ್ಧತೆ ಪರಿಶೀಲನೆಗೆ ತೆರಳಲಿದ್ದಾರೆ. ಹೀಗಾಗಿ ಯಾರೂ ತಮ್ಮ ಜನ್ಮ ದಿನದ ಪ್ರಯುಕ್ತ ಫ್ಲೆಕ್ಸ್, ಬ್ಯಾನರ್‌ ಹಾಕಬೇಡಿ ಎಂದು ಅವರು ಮನವಿ ಮಾಡಿದ್ದಾರೆ.